ದಸರಾದಲ್ಲಿ ಅತ್ತೆ-ಸೊಸೆ ಅಡುಗೆ ಅಬ್ಬರ

Team Udayavani, Sep 23, 2017, 1:09 PM IST

mys5.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖಾದ್ಯಪ್ರಿಯರನ್ನು ಆಕರ್ಷಿಸುತ್ತಿರುವ ದಸರಾ ಆಹಾರ ಮೇಳದಲ್ಲಿ ಶುಕ್ರವಾರ ಅತ್ತೆ-ಸೊಸೆಯಂದಿರ ಅಡುಗೆ ತಯಾರಿಯ ಅಬ್ಬರ ಕಂಡುಬಂತು. ಅತ್ತೆ-ಸೊಸೆ ಎಂದೊಡನೆ ತಟ್ಟನೆ ನೆನಪಾಗುವುದು ಜಗಳ, ಒಬ್ಬರನ್ನೊಬ್ಬರು ದ್ವೇಷಿಸುವ ದೃಶ್ಯಗಳೇ ಹೆಚ್ಚಾಗಿ ಕಾಣುತ್ತದೆ. ಆದರೆ, ಇಂತಹ ಯಾವುದೇ ಜಗಳ, ದ್ವೇಷವಿಲ್ಲದೆ ಪರಸ್ಪರ ಪ್ರೀತಿ, ಆತ್ಮೀಯತೆ ಹೊಂದಿರುವ ಅಪರೂಪದ ಅತ್ತೆ-ಸೊಸೆ ದರ್ಶನಕ್ಕೆ ವೇದಿಕೆಯಾಗಿದ್ದು ದಸರಾ ಆಹಾರ ಮೇಳ.

ನಗರದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮೈದಾನದಲ್ಲಿ ನಡೆಯುತ್ತಿರುವ ದಸರಾ ಆಹಾರ ಮೇಳದ ಅಂಗವಾಗಿ ಆಯೋಜಿಸಿದ್ದ ಅತ್ತೆ-ಸೊಸೆಯರ ಅಡುಗೆ ತಯಾರಿಸುವ ಸ್ಪರ್ಧೆ ಎಲ್ಲರ ಗಮನ ಸೆಳೆಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅತ್ತೆ-ಸೊಸೆ ಒಟ್ಟಿಗೆ ಸೇರಿ ನಗುಮೊಗದಿಂದಲೇ ಅಡುಗೆ ತಯಾರಿಸಿ ಎಲ್ಲರಿಗೂ ಉಣ ಬಡಿಸಿದರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಒಟ್ಟು 6 ಜೋಡಿ ಅತ್ತೆ-ಸೊಸೆಯರು ಅಕ್ಕಿ ರೊಟ್ಟಿ, ಎಣ್ಣೆಗಾಯಿ ಪಲ್ಯ ತಯಾರಿಸಿ ತಮ್ಮ ಕೈ ರುಚಿ ತೋರಿಸಿದರು. ಅಡುಗೆ ತಯಾರಿಕೆ ಸ್ಪರ್ಧೆಯಲ್ಲಿ ಅತ್ತೆ-ಸೊಸೆಯರ ನಡುವಿನ ಹೊಂದಾಣಿಕೆ, ತಯಾರಿಕೆಗೆ ಬಳಕೆ ಮಾಡಿದ ಸಮಯ, ಸ್ವತ್ಛತೆ, ತಯಾರಿಸಿದ ಪದಾರ್ಥಗಳನ್ನು ಅಚ್ಚುಕಟ್ಟಾಗಿ ಜೋಡಿಸುವುದು ಹಾಗೂ ರುಚಿಯನ್ನು ಆಧಾರವಾಗಿಟ್ಟುಕೊಂಡು ಬಹುಮಾನ ನೀಡಲಾಯಿತು.

ಸ್ಪರ್ಧೆಯ ವಿಜೇತರ ವಿವರ
ವಿವಿಧ ಕಡೆಗಳಿಂದ ಬಂದಿದ್ದ ಅತ್ತೆ-ಸೊಸೆಯಂದಿರುವ ಸ್ಪರ್ಧೆಯಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು. ಕೊಡಗು ಜಿಲ್ಲೆ ಶೋಭಾರಾಣಿ-ಅಂಬಿಕಾ(ಪ್ರಥಮ), ಕುವೆಂಪುನಗರದ ಲಲಿತಾ-ಸೋನಿ(ದ್ವಿತೀಯ), ಕುವೆಂಪುನಗರದ ಅನಿತಾ ರಮೇಶ್‌-ಸ್ವಾತಿ(ತೃತೀಯ) ಬಹುಮಾನ ಪಡೆದರು. ಇವರೊಂದಿಗೆ ಸ್ಪರ್ಧೆಯಲ್ಲಿ ವಿದ್ಯಾರಣ್ಯಪುರಂನ ಎಂ.ಸಿ.ನಾಗರತ್ನ-ನಾಗಶ್ರೀ, ರಾಮಕೃಷ್ಣನಗರದ ಸರಳಾ ಕುಮಾರಿ-ಕುಮುದ, ವಿಶ್ವೇಶ್ವರನಗರದ ಗೀತಾಮಣಿ-ಸುಮಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.