ಅನಿರ್ದಿಷ್ಟ: ಧರಣಿಗೆ ನಿರ್ಧಾರ
Team Udayavani, Dec 16, 2020, 3:57 PM IST
ಮೈಸೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಬುಧವಾರದಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಧರಣಿ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿದೆ.
ಹೋರಾಟದ ಕುರಿತು ಮಂಗಳವಾರ ಗನ್ ಹೌಸ್ ಬಳಿಕ ಕುವೆಂಪು ಉದ್ಯಾನವನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾ ಗಿದೆ. ದೆಹಲಿಯಲ್ಲಿ 19 ದಿನಗಳಿಂದ ಕೊರೆ ಯುವ ಚಳಿಯಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ 14 ಮಂದಿ ರೈತರುಪ್ರಾಣ ತೆತ್ತಿದ್ದರೂ ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸದೆ ವಿಳಂಬ ಮಾಡುವ ಮೂಲಕಚಳವಳಿಯ ದಿಕ್ಕು ತಪ್ಪಿಸಲು ಯತ್ನಿಸುತ್ತಿರುವುದು ಸರಿಯಲ್ಲ. ಈ ಚಳವಳಿ ಬೆಂಬಲಿಸಲು ಕರ್ನಾಟಕದ ರೈತರ ಪರವಾಗಿ ರೈತ ದಲಿತಕಾರ್ಮಿಕ ಐಕ್ಯ ಹೋರಾಟದಿಂದ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಬುಧವಾರ ದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ರಾಜ್ಯ ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ ಕುಮಾರ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತಕ್ಕಾಗಿ ಕಾಯ್ದೆ ಜಾರಿಗೆ ತರಲಾಗಿದೆ ಎನ್ನುತ್ತಾರೆ. ಆದರೆ ರೈತರ ಹೋರಾಟತೀವ್ರವಾಗುತ್ತಿದ್ದಂತೆ ತಿದ್ದುಪಡಿ ಮಾಡಲು ಮುಂದಾಗುತ್ತಾರೆ. ಇದರಿಂದಲೇ ಕಾಯ್ದೆಯಲ್ಲಿ ಲೋಪ ದೋಷವಿದೆ ಎಂಬುದುಅರ್ಥವಾಗುತ್ತದೆ. ಕಲ್ಲಿದ್ದಲು, ವಿಮಾನಯಾನ, ರೈಲ್ವೆ, ಟೆಲಿಕಾಂಗಳನ್ನು ಖಾಸಗಿ ವ್ಯವಸ್ಥೆಗೆ ಮಾರಲಾಗಿದೆ. ಈಗ ದೇಶದ ರೈತರನ್ನು ಖಾಸಗಿ ಕಂಪನಿಗಳಿಗೆ ಮಾರಾಮಾಡಲು ಮುಂದಾಗಿದ್ದಾರೆ. ಅದಕ್ಕಾಗಿಯೇ ದೇಶದ ರೈತರು ಜಾಗೃತರಾಗಿ ಬೀದಿಗಿಳಿದಿದ್ದಾರೆ. ವಿರೋಧ ಪಕ್ಷಗಳು ರೈತ ಹೋರಾಟವನ್ನು ಬೆಂಬಲಿಸಿದರೆ ಆಡಳಿತ ಪಕ್ಷಕ್ಕೆ ಆಗುವ ನಷ್ಟವೇನು ಎಂದು ಪ್ರಶ್ನಿಸಿದರು.
ರಾಜ್ಯದ ರೈತ, ದಲಿತಕಾರ್ಮಿಕ ಸಂಘಟನೆ ಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಿ ಬೆಂಬಲ ಸೂಚಿಸಬೇಕು. ಈಹೋರಾಟದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ, ಸರ್ಕಾರಗಳ ವೈಫಲ್ಯದಿಂದ ನಾವು ಚಳವಳಿ ದಾರಿ ಹಿಡಿಯಬೇಕಿದೆ ಎಂದರು.
ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರ್ ಶಂಕರ, ರಾಜಣ್ಣ, ಅಂಕಪ್ಪ, ಪರಶಿವಮೂರ್ತಿ ಮಹಿಳಾ ಸಂಚಾಲಕಿ ರಾಣಿ, ಬರಡನಪುರ ನಾಗ ರಾಜ್,ಆಡ್ಯರವಿ, ಪ್ರಸಾದ್ ನಾಯಕ್ ಮಂಜುನಾಥ್, ಗುರುಸ್ವಾಮಿ, ರಾಮೇಗೌಡ, ಕೃಷ್ಣಗೌಡ, ರಾಜು, ರಂಗರಾಜ್ ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಂಗ್ ರಸ್ತೆ ಸ್ವತ್ಛತೆಗೆ ಆರು ತಂಡ ರಚನೆ
ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ
ಬಣ್ಣಾರಿ ಕಾರ್ಖಾನೆ-ಲಾರಿ ಮಾಲಿಕರ ಸಂಘರ್ಷ ಅಂತ್ಯ
ಆನ್ ಲೈನ್ ಕ್ಲಾಸ್ ಗೂ ಹಾಜರಾತಿ ಕಡ್ಡಾಯ ಮಾಡುವ ಕುರಿತು ನಿರ್ಧಾರ: ಅಶ್ವಥ್ ನಾರಾಯಣ್
ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು ಕೊಡಲು ಸಿಎಂ ಗಮನಕ್ಕೆ ತರುವೆ: ಸೋಮಶೇಖರ್