ಮಿನಿ ಎಟಿಎಂ, ಬೆರಳಚ್ಚು ಯಂತ್ರ ಬಳಸಿ ಮೋಸ

Team Udayavani, Feb 26, 2022, 2:28 PM IST

Untitled-1

ಮೈಸೂರು: ವೃದ್ಧೆಯೊಬ್ಬರ ಹೆಬ್ಬೆಟ್ಟಿನ ಗುರುತುಪಡೆದು, ಅವರ ಬ್ಯಾಂಕ್‌ ಖಾತೆಯಿಂದ ಹಣಎಗರಿಸಿದ್ದ ಆರೋಪಿಯನ್ನು ಮೈಸೂರು ಜಿಲ್ಲಾಸಿಇಎನ್‌ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದಾರೆಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿಯಿಂದ 1 ಸ್ಮಾರ್ಟ್‌ ಫೋನ್‌,1 ಕೀ ಪ್ಯಾಡ್‌ ಮೊಬೈಲ್‌, 1 ಮಿನಿ ಎಟಿಎಂ ಯಂತ್ರ, 1ಬೆರಳಚ್ಚು ಯಂತ್ರ, 1 ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳ ಲಾಗಿದೆ ಎಂದರು.

ಬಂಧಿತ ಆರೋಪಿ ಫೆ.1ರಂದು ಮೈಸೂರು ತಾಲೂಕು ಕಡಕೊಳದ ಪುಟ್ಟನಂಜಮ್ಮಎಂಬುವರ ತೋಟದ ಮನೆಗೆ ಹೋಗಿದ್ದು, “ತಾನು ಬ್ಯಾಂಕಿನಿಂದ ಬಂದಿದ್ದು, ಕಾರ್ಡ್‌ ಮಾಡಿಕೊಡುತ್ತೇನೆ. ತಿಂಗಳಿಗೆ 3 ಸಾವಿರ ರೂ. ಮೋದಿ ದುಡ್ಡು ಬರುತ್ತೆ’ ಎಂದು ಹೇಳಿ ಆಧಾರ್‌ ಕಾರ್ಡ್‌ ಪಡೆದು 1 ಯಂತ್ರದಮೇಲೆ ಎಡಗೈ ಹೆಬ್ಬರಳನ್ನು ಸ್ಕ್ಯಾನ್‌ ಮಾಡಿಕೊಂಡಿದ್ದಾನೆ. ಫೆ.2 ರಂದು ಪುಟ್ಟ ನಂಜಮ್ಮ ಬ್ಯಾಂಕಿಗೆ ಹೋದಾಗ,4100 ರೂ.ಡ್ರಾ ಆಗಿತ್ತು.ಈ ಸಂಬಂಧ ಕ್ರಮ ವಹಿಸುವಂತೆ ಜಿಲ್ಲಾ ಸಿಇಎನ್‌ ಕ್ರೈಂ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಆರೋಪಿ ಉಪಯೋಗಿಸಿದ್ದ ಎಇಪಿಎಸ್‌ (ಆಧಾರ್‌ಎನೆಬಲ್‌ ಪೇಮೆಂಟ್‌ ಸಿಸ್ಟಂ) ಯಂತ್ರ ಹಾಗೂಮೊಬೈಲ್‌ ನಂಬರ್‌ಗಳ ಆಧಾರದ ಮೇಲೆ ಆರೋಪಿ ಯನ್ನು ಗುರುವಾರ ಬಂಧಿಸಲಾಗಿದೆ ಎಂದರು.

ಆರೋಪಿಯು ಈ ಹಿಂದೆ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಮಿನಿ ಎಟಿಎಂ ಯಂತ್ರ, ಬೆರಳಚ್ಚುಯಂತ್ರ ಬಳಸಿಕೊಂಡು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿಸಾಕಷ್ಟು ಜನಕ್ಕೆ ಮೋಸ ಮಾಡಿರುವುದು ತನಿಖೆಯಿಂದಕಂಡು ಬಂದಿದೆ. ಅಲ್ಲದೆ, ಕಳೆದ ವರ್ಷ ಬೆಟ್ಟದಪುರ ಠಾಣೆಯಲ್ಲಿ ದಾಖಲಾಗಿದ್ದ ಹರದೂರು ಗ್ರಾಮದಲ್ಲಿ ಮೋಸ ಮಾಡಿರುವ ಪ್ರಕರಣ ಸಹ ಪತ್ತೆಯಾಗಿದೆ ಎಂದರು.

ಜಿಲ್ಲಾ ಸಿಇಎನ್‌ ಕ್ರೈಂ ಠಾಣೆಯ ಇನ್ಸ್‌ಪೆಕ್ಟರ್‌ಶಬ್ಬೀರ್‌ ಹುಸೇನ್‌, ಎಸ್‌ಐಗಳಾದ ಯಶ್ವಂತ್‌ಕುಮಾರ್‌,ಕೃಷ್ಣಕಾಂತ್‌ ಕೋಳಿ, ಸಿಬ್ಬಂದಿ ಎಂ.ಎಸ್‌. ಮಂಜುನಾಥ,ಎಚ್‌.ವಿ.ರಂಗಸ್ವಾಮಿ, ಅಭಿ ಷೇಕ್‌, ಮಹದೇವಸ್ವಾಮಿ,ಬಿ.ವಿ. ಮಂಜುನಾಥ, ವೆಂಕ ಟೇಶ್‌, ನಾಗರಾಜ್‌ಕಾರ್ಯಾಚರಣೆ ನಡೆಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಆರ್‌.ಶಿವಕುಮಾರ್‌ ದಂಡಿನ ಇದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.