

Team Udayavani, Jun 21, 2024, 11:59 AM IST
ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು. ಡಿ.ಕೆ ಶಿವಕುಮಾರ್ ಅವರ ಮಾತಲ್ಲಿ ರಾಜಕೀಯ ತಂತ್ರಗಾರಿಕೆ ಇದೆಯಷ್ಟೇ. ಡಿ.ಕೆ ಸುರೇಶ್ ಅವರನ್ನು ಸ್ಪರ್ಧೆಗೆ ಇಳಿಸುವ ದೃಷ್ಟಿಯಿಂದ ನಾನು ಬಂದರೆ ಮತ ಹಾಕುತ್ತೀರಾ ಎಂದು ಜನರನ್ನು ಕೇಳುತ್ತಿದ್ದಾರೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ಚನ್ನಪಟ್ಟಣ ಉಪಚುನಾವಣೆ ಅಖಾಡ ಎಲ್ಲಾ ಕ್ಷೇತ್ರಗಿಂತ ಜೋರಾಗಿರಲಿದೆ. ಜಿದ್ದಾಜಿದ್ದಿನ ಫೈಟ್ ನಡೆಯುತ್ತದೆ. ನಿಖಿಲ್ ನಾನೇ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಸಿ.ಪಿ ಯೋಗೇಶ್ವರ ಜನಗಳ ಅಭಿಪ್ರಾಯ ನನ್ನ ಪರವಾಗಿದ್ದಾರೆ ಎಂದಷ್ಟೇ ಹೇಳಿದ್ದಾರೆ. ಅಂತಿಮವಾಗಿ ಮೈತ್ರಿ ನಾಯಕರು ಕುಳಿತು ತೀರ್ಮಾನ ಮಾಡುತ್ತೇವೆ. ಎಲ್ಲಾ ಉಪಚುನಾವಣೆಗಳು ಸರ್ಕಾರದ ಪರವಾಗಿಯೇ ಇರುವುದಿಲ್ಲ. ಒಂದೊಂದು ಬಾರಿ ಒಂದೊಂದು ಟ್ರೆಂಡ್ ನಡೆಯುತ್ತದೆ ಎಂದರು.
ನಮ್ಮ ಅಭ್ಯರ್ಥಿ ಯಾರು ಎಂಬುದನ್ನು ನಾವಿನ್ನೂ ತೀರ್ಮಾನ ಮಾಡಿಲ್ಲ. ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಾನೇ ಅದನ್ನು ಹೇಳುತ್ತೇನೆ. ಕೋರ್ ಕಮಿಟಿಯ ಅಧ್ಯಕ್ಷ ನಾನೇ ಆಗಿರುವ ಕಾರಣ ಅಭ್ಯರ್ಥಿ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯ ಹೇಳಲು ಬರುವುದಿಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ರೀತಿ ಕೆಲಸ ಮಾಡುತ್ತಿದ್ದಾರೆ. ಪೊಲೀಸರ ಮೇಲೆ ನಂಬಿಕೆಯಿದೆ. ಅವರ ಮೇಲೆ ಗೌರವ ಹೆಚ್ಚಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳೇ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಮಾಡಿದ್ದಾರೆ. ಸ್ವತಃ ನಾನೇ ವೀಡಿಯೋ ನೋಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಇದರಿಂದ ಯಾರು ಪರ ಮಾತನಾಡಬಾರದು ಎಂದು ಸೂಚನೆ ನೀಡಿದ್ದಾರೆ. ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದು ಜಿಟಿಡಿ ಹೇಳಿದರು.
Ad
BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ
Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್ ಸಿಂಹ
IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ
ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ
ರಾಜ್ಯ ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.