ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ
ತುರ್ತು ಔಷಧ ಕೊರತೆ ನೀಗಿಸಲು ಶಾಸಕರ ನಿಧಿ ಬಳಕೆ! ಜಿಪಂ ಕೆಡಿಪಿ ಸಭೆಯಲ್ಲಿ ಡಿಎಚ್‌ಒ ಡಾ.ಅಮರನಾಥ್ ಮಾಹಿತಿ
Team Udayavani, May 14, 2021, 4:33 PM IST
ಮೈಸೂರು: ಜಿಲ್ಲೆಯಲ್ಲಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ಸಾಮಾನ್ಯ ಕಾಯಿಲೆ ಗಳಿಗೆ ಅಗತ್ಯವಿರುವ ಔಷಧ ಕೊರತೆ ಉಂಟಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್ ಹೇಳಿದರು.
ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಎಂ. ಜಯರಾಮ್ ಅಧ್ಯಕ್ಷತೆಯಲ್ಲಿ ವರ್ಚುವಲ್ ಆಗಿ ನಡೆದ ಜಿಪಂ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಆಸ್ಪತ್ರೆಗಳಲ್ಲೂ ಜ್ವರ, ಕೆಮ್ಮು ಇನ್ನಿತರ ಸಾಮಾನ್ಯ ಕಾಯಿಲೆಗಳಿಗೆ ಕಳೆದ 2-3 ದಿನಗಳಿಂದ ಔಷಧದ ಕೊರತೆ ಎದುರಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಿಗೆ ಔಷಧ ಪೂರೈಸುವ ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ಸ್ ಆ್ಯಂಡ್ ವೇರ್ ಹೌಸಿಂಗ್ ಸೊಸೈಟಿಯಿಂದ ನಾಲ್ಕೈದು ದಿನಗಳಲ್ಲಿ ಔಷಧ ಪೂರೈಕೆಯಾಗಲಿದ್ದು, ಸಮಸ್ಯೆ ಬಗೆಹರಿಯಲಿದೆ ಎಂದು ಮಾಹಿತಿ ನೀಡಿದರು.
ಸದ್ಯಕ್ಕೆ ಔಷಧ ಕೊರತೆ ನೀಗಿಸುವ ಸಲುವಾಗಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 25 ಲಕ್ಷ ರೂ. ವೆಚ್ಚದಲ್ಲಿ ಔಷಧ ಖರೀದಿ ಮಾಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಆಡಳಿತಾಧಿಕಾರಿ ಎಂ.ಜಯರಾಮ್, ಟೆಂಡರ್ ಕರೆಯದೇ ಹೇಗೆ ಔಷಧ ಖರೀದಿ ಮಾಡುತ್ತೀರಿ? ಇದಕ್ಕೆ ಸರ್ಕಾರ ರಿಯಾಯಿತಿ ಕೊಟ್ಟಿದೆಯೇ? ಈ ವಿಷಯದಲ್ಲಿ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳ ಬೇಕು. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು. ಆರ್ಥಿಕ ವರ್ಷ ಏಪ್ರಿಲ್ 1ರಿಂದ ಆರಂಭವಾದರೂ, ನವೆಂಬರ್, ಡಿಸೆಂಬರ್‌ನಲ್ಲಿ ವಿವಿಧ ಕಾಮಗಾರಿಗಳು ಶುರುವಾಗುತ್ತವೆ. ಮಾರ್ಚ್, ಏಪ್ರಿಲ್‌ನಲ್ಲಿ ಕಾಮಗಾರಿ ಗಳನ್ನು ತರಾತುರಿಯಲ್ಲಿ ಮುಗಿಸಲಾಗುತ್ತದೆ. ಇದು ಪ್ರತಿ ವರ್ಷ ನಡೆದು ಬಂದಿರುವ ಅಲಿಖೀತ ನಿಯಮದಂತಾಗಿದೆ. ಈ ಕೆಟ್ಟ ಪದ್ಧತಿ ನಿಲ್ಲಬೇಕು. ಪ್ರಸ್ತಕ ಸಾಲಿನಲ್ಲಿ ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
2020-21ನೇ ಸಾಲಿನ ವರ್ಷದಲ್ಲಿ ರಸ್ತೆ ಕಾಮಗಾರಿ ಶೇ.70ರಷ್ಟು ಅನುದಾನ ಬಂದಿಲ್ಲ. ಜತೆಗೆ, ಪ್ರಸ್ತುತ 2021-22ನೇ ಸಾಲಿನಲ್ಲಿ 5.96 ಕೋಟಿ ರೂ.ವೆಚ್ಚದಲ್ಲಿ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಉದ್ದೇಶಿಸಲಾಗಿದೆ. ಆದರೆ, ಕಳೆದ ವರ್ಷದ ಮುಂದುವರಿದ ಕಾಮಗಾರಿಗೆ ಮತ್ತು ಹೊಸ ಕಾಮಗಾರಿಗಳಿಗೂ ಅನುದಾನ ನಿಗದಿಯಾಗಿಲ್ಲ ಎಂದು ಅಧಿಕಾರಿಗಳು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಆಡಳಿತಾಧಿಕಾರಿ, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು : ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯಕ್ಕೆ ಹೋದ ಯುವತಿ ನಾಪತ್ತೆ
ಪ್ರಧಾನಿ ಕಚೇರಿ ಅಧಿಕಾರಿ ಎಂದು ಡಿಸಿಗೆ ಕರೆ : ದೂರು ದಾಖಲು!
ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರು : ಓರ್ವ ನಿರುಪಾಲು, ನಾಲ್ವರ ರಕ್ಷಣೆ
ಮಂಗಳೂರು: ಗೋಮಾಂಸ ಮಾರಾಟ ದಂಧೆ ಭೇದಿಸಿದ ಪೊಲೀಸರು; ಆರೋಪಿ ಪರಾರಿ
ಹೆದ್ದಾರಿ ಅತಿಕ್ರಮಣಕ್ಕಿಲ್ಲಿ ರಹದಾರಿ ನೀಡಿದವರ್ಯಾರು : ಹೆದ್ದಾರಿ ಸವಾರಿ ಆಯೋಮಯ..
MUST WATCH
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
ಎಂ.ಎಸ್ ಧೋನಿಯ 17 ವರ್ಷ ಹಿಂದಿನ ದಾಖಲೆ ಮುರಿದ ರಿಷಭ್ ಪಂತ್
ಮಲ್ಪೆಯಲ್ಲಿ ಲಂಗರು ಹಾಕಿದ್ದ ದೋಣಿಯ ಅವಶೇಷ ಕಾಪು ಪರಿಸರದಲ್ಲಿ ಪತ್ತೆ… ಅಪಾರ ನಷ್ಟ
ಹುಣಸೂರು : ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂಪಾಯಿ ನಷ್ಟ… ಕಂಗಾಲಾದ ಮಾಲೀಕ
ಹೊಸ ಸೇರ್ಪಡೆ
ಉದಯಪುರ-ಅಮರಾವತಿ ಹತ್ಯೆಗಳನ್ನು ಖಂಡಿಸಿದ ದೆಹಲಿ ಸಿಎಂ ಕೇಜ್ರಿವಾಲ್
ಮಂಗಳೂರು : ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯಕ್ಕೆ ಹೋದ ಯುವತಿ ನಾಪತ್ತೆ
ಪ್ರಧಾನಿ ಕಚೇರಿ ಅಧಿಕಾರಿ ಎಂದು ಡಿಸಿಗೆ ಕರೆ : ದೂರು ದಾಖಲು!
ಮಂಕುಬೂದಿ ಎರಚಿ…; ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೆಚ್ ಡಿಕೆ ಕಿಡಿ
ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರು : ಓರ್ವ ನಿರುಪಾಲು, ನಾಲ್ವರ ರಕ್ಷಣೆ