ಬಜೆಟ್‌ನಲ್ಲಿನ ಅಂಶಗಳನ್ನು ತಿಳಿಸಲು ಪುಸ್ತಕ ಮುದ್ರಣ

Team Udayavani, Feb 15, 2021, 6:38 PM IST

ಬಜೆಟ್‌ನಲ್ಲಿನ ಅಂಶಗಳನ್ನು ತಿಳಿಸಲು ಪುಸ್ತಕ ಮುದ್ರಣ

ಮೈಸೂರು: ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವ ಸಾಕಷ್ಟು ಯೋಜನೆಗಳಿದ್ದು, ಅವುಗಳನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಪುಸ್ತಕ ಹೊರತರಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ನಗರ ಬಿಜೆಪಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಕೇಂದ್ರ ಸರ್ಕಾರದ 2021-22ನೇ ಸಾಲಿನ ಆಯವ್ಯಯ ಕುರಿತ ವಿಮರ್ಶೆ ಮತ್ತು ವಿಶ್ಲೇಷಣೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ಸಾಕಷ್ಟು ಉತ್ತಮ ಅಂಶಗಳಿವೆ. ಅವುಗಳ ಜಾರಿ ಹಾಗೂ ಅನುಕೂಲದ ಬಗ್ಗೆ ತಿಳಿಸುವ ಅಗತ್ಯವಿದೆ. ಇದಕ್ಕಾಗಿ ಕನ್ನಡದಲ್ಲಿ ಪುಸ್ತಕ ಮುದ್ರಿಸಲಾಗುವುದು ಎಂದರು.

ಮೈಸೂರಿಗೆ ಈ ಬಜೆಟ್‌ನಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ವಿಸ್ತರಣೆ, ವರುಣಾ ಕ್ಷೇತ್ರದ ವ್ಯಾಪ್ತಿಗೆ ಬರುವ ಇಮ್ಮಾವು ಬಳಿ 160 ಎಕರೆ ಜಾಗದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಅನುದಾನ ಕಲ್ಪಿಸಬೇಕೆಂಬ ಪಕ್ಷದ ಹಾಲಿ, ಮಾಜಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರ ಗಮನಕ್ಕೆ ‌ಲುಪಿಸಲಾಗುತ್ತಿದೆ. ಮೈಸೂರಿಗೆ ಏನೇನು ಕೊಡುಗೆಗಳನ್ನು ನೀಡಬೇಕು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಸಿಎಂ ಕರೆಯುವ ಸಭೆಯಲ್ಲಿ ಎಲ್ಲವನ್ನು ಪ್ರಸ್ತಾಪಿಸಲಾಗುವುದು ಎಂದರು.

ಎಪಿಎಂಸಿ ಮಾರುಕಟ್ಟೆ ಹೊರತಾಗಿ ರೈತರು ಬೆಳೆದಿರುವ ಬೆಳೆಗಳನ್ನು ಮಾರಾಟ ಮಾಡಲು ಯಾವುದೇ ಪರವಾನಗಿ ಅಗತ್ಯವಿಲ್ಲ ಎಂಬ ಬದಲಾವಣೆ ಮಾಡಲಾಗಿದೆ. ಇದರ ಉದ್ದೇಶ ರೈತರಿಗೆ ಒಳ್ಳೆಯ ಬೆಲೆ ಸಿಗಲಿ ಎಂಬುದಾಗಿದೆ. ರೈತರಿಗೆ ಯಾವುದೇ ನಿರ್ಬಂಧ ಇರದಂತೆ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಬೆಂಬಲ ಬೆಲೆಯನ್ನು ರದ್ದುಪಡಿಸುವುದಿಲ್ಲ. ಎಪಿಎಂಸಿ ಮುಚ್ಚುವುದಿಲ್ಲ. ಎಪಿಎಂಸಿ ತಿದ್ದುಪಡಿ ಕಾಯಿದೆಯಲ್ಲಿ ಏನಾದರೂ ತೊಂದರೆ ಇದ್ದರೆ ಈಗಲೂ ಸರಿಪಡಿಸಲು ಮುಖ್ಯಮಂತ್ರಿಗಳು ಸಿದ್ಧವಿದ್ದಾರೆ ಎಂದು ಹೇಳಿದರು.

ಕೇಂದ್ರ ಬಜೆಟ್‌ ವಿಶ್ಲೇಷೆ‌ಣೆ, ವಿಮರ್ಶೆ ಕುರಿತಂತೆ ನಡೆದ ಈ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು. ಹಲವರು ಬಜೆಟ್‌ ವಿಷಯ ಹೊರತಾಗಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಿ ಸಚಿವರ ಗಮನಕ್ಕೆ ತಂದರು. ಮಾಜಿ ‌ ಶಾಸಕ ಡಾ.ಭಾರತಿಶಂಕರ್‌, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್‌, ಪಕ್ಷದ ‌ ಮುಖಂಡ ಗಂಗಾಧರ್‌ಪ್ರಸಾದ್‌ ಇತರರಿದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.