ಮೇ 16 ರಿಂದ ಅರಣ್ಯ ಪ್ರದೇಶದಲ್ಲಿನ ಆನೆಗಳ ಎಣಿಕೆ 

Team Udayavani, May 13, 2017, 12:14 PM IST

mys2.jpg

ಹುಣಸೂರು: ದಕ್ಷಿಣ ಭಾರತದ ಎಲ್ಲ ಉದ್ಯಾನ ಹಾಗೂ ಅರಣ್ಯ ಪ್ರದೇಶಗಳಲ್ಲಿ ಆನೆಗಳ ಎಣಿಕೆ ಮೇ 16 ರಿಂದ 20ರ ವರೆಗೆ ನಡೆಯಲಿದ್ದು, ಎರಡು ವರ್ಷಕ್ಕೊಮ್ಮೆ ನಡೆಯುವ ಈ ಆನೆಗಳ ಗಣತಿ ಕಾರ್ಯಕ್ಕೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಧಿಕಾರಿಗಳು ಸಿದ್ಧರಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಾವು ಕಡಿತದ ಚುಚ್ಚುಮದ್ದು ಹಾಗೂ ಇತರೆ ಅಗತ್ಯ ಔಷಧಗಳನ್ನು ದಾಸ್ತಾನು ಮಾಡಲಾಗಿದೆ. ಹಿಂದಿನ ಜನಗಣತಿಯಲ್ಲಿ ಒಂದು ಕಿ.ಮೀ.ಗೆ 2.1 ರಂತೆ 950 ರಿಂದ 1690 ಆನೆಗಳು ಕಂಡು ಬಂದಿತ್ತು.

ನಾಗರಹೊಳೆ ಉದ್ಯಾನದಲ್ಲಿ ಇಂಡಿಯನ್‌ ಇನ್ಸ್‌ಟ್ಯೂಟ್‌ ಆಫ್ ಸೆನ್ಸ್‌ನ ಸುಕುಮಾರನ್‌ರ  ಮಾರ್ಗದರ್ಶನದಲ್ಲಿ ಆನೆಗಣತಿ ಕಾರ್ಯಕ್ಕೆ ಇಲಾಖೆ ಸಜ್ಜಾಗಿದೆ. ಲಕ್ಷಣತೀರ್ಥ, ಕಬಿನಿ, ತಾರಕ ಹಾಗೂ ನಾಗರಹೊಳೆ ಉದ್ಯಾನ ವ್ಯಾಪ್ತಿಯೊಳಗಿರುವ 160 ಕೆರೆಗಳ ಬಳಿ ಗಣತಿ ಕಾರ್ಯದಲ್ಲಿ ಮಾತ್ರ ಛಾಯಾಚಿತ್ರ ತೆಗೆಯಲು ಅವಕಾಶ ಕಲ್ಪಿಸಲಾಗಿದ್ದು, ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗಣತಿ ಕಾರ್ಯ ದಾಖಲಿಸುವ ಸಂಬಂಧ ತರಬೇತಿ ನೀಡಲಾಗಿದೆ.

ಉದ್ಯಾನದಲ್ಲಿ 63 ಬೀಟ್‌ ರಚಿಸಲಾಗಿದೆ: 643 ಚ.ಕಿ.ಮೀ ವ್ಯಾಪ್ತಿಯಲ್ಲಿರುವ ನಾಗರಹೊಳೆ ಉದ್ಯಾನದ ನಾಗರಹೊಳೆ, ಮೂರ್ಕಲ್‌(ಕಲ್ಲಹಳ್ಳ), ವೀರನಹೊಸಹಳ್ಳಿ, ಮಮತ್ತಿಗೋಡು, ಹುಣಸೂರು, ಡಿ.ಬಿ.ಕುಪ್ಪೆ, ಅಂತರಸಂತೆ ಹಾಗೂ ಮೇಟಿಕುಪ್ಪೆ ವಲಯಗಳಲ್ಲಿ ಗಣತಿ ನಡೆಸಲು ಒಟ್ಟಾರೆ 63 ಬೀಟ್‌ಗಳನ್ನು ರಚಿಸಲಾಗಿದೆ. ಈಗಾಗಲೇ ತಯಾರಿಸಿರುವ ಮಾಹಿತಿ ಪಟ್ಟಿಯಲ್ಲಿ ನಿತ್ಯ ಗಣತಿಗೆ ತೆರಳುವ ಸಂದರ್ಭದಲ್ಲಿ ಕಣ್ಣಿಗೆ ಕಾಣುವ ಹೆಣ್ಣು, ಗಂಡು, ಮರಿ ಆನೆಗಳನ್ನು ಪ್ರತ್ಯೇಕವಾಗಿ ದಾಖಲು ಮಾಡುತ್ತಾರೆ. ಈಗಾಗಲೇ ಸಿಬ್ಬಂದಿಗೆ ದಾಖಲು ಮಾಡುವ ಕುರಿತು ತರಬೇತಿ ನೀಡಲಾಗಿದೆ.

ಪ್ರತಿ ಐದು ಮಂದಿಗೊಂದು ತಂಡ ರಚನೆ: ಈ ಬಾರಿ ಗಣತಿ ಕಾರ್ಯಕ್ಕೆ ನಾಗರಹೊಳೆ ಉದ್ಯಾನಕ್ಕೆ ಸ್ವಯಂ ಪ್ರೇರಿತರಾಗಿ ಆನ್‌ಲೈನ್‌ ಮೂಲಕ ನೋಂದಾಯಿಸಿ ಕೊಂಡಿರುವ 50 ಮಂದಿ ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುತ್ತಿದೆ.ಅಲ್ಲದೆ ಪ್ರತಿ ತಂಡದಲ್ಲಿ ತಲಾ ಒಬ್ಬರು ಎಆರ್‌ಎಫ್ಒ, ಗಾರ್ಡ್‌, ಇಬ್ಬರು ವಾಚರ್‌ ಹಾಗೂ ಸ್ವಯಂ ಸೇವಕರು ಸೇರಿದಂತೆ ಐದು ಮಂದಿ ಇರಲಿದ್ದಾರೆ.

ಮೂರು ಮಾದರಿಯಲ್ಲಿ ಗಣತಿ: ಮೊದಲ ದಿನ ಮೇ 16 ಮಂಗಳವಾರ ಹುಲಿ ಯೋಜನೆ ನಿರ್ದೇಶಕರ ಹುಣಸೂರು ಕಚೇರಿಯಲ್ಲಿ ಬಳಿ ಸ್ವಯಂ ಸೇವಕರು ಹಾಗೂ ಸಿಬ್ಬಂದಿಗೆ ಮಾಹಿತಿ ಕಾರ್ಯಾಗಾರ, ಎಲ್ಲ ವಲಯದಲ್ಲೂ ಗುರುತಿಸಿದ ಪ್ರದೇಶದಲ್ಲಿ ಬೀಟ್‌ ನಡೆಸಿ ಟ್ರಾÂಂಜಾಕ್ಟ್ ಲೈನ್‌ ಮಾರ್ಗದಲ್ಲಿ ತಂಡದವರು ಸಂಚರಿಸಿ ಬ್ಲಾಕ್‌ ಕೌಂಟ್‌ ಮೂಲಕ ಲೆಕ್ಕ ಮಾಡಲಿದ್ದಾರೆ.

ನಂತರದಲ್ಲಿ ಎರಡನೇ ದಿನ ಆನೆ ಲದ್ದಿ ಮೂಲಕ ಗುರುತು ಪತ್ತೆ, ಮೂರನೇ ದಿನ ಕೆರೆ, ನದಿ ಬಳಿ ಕುಳಿತು ಗಣತಿ ನಡೆಸುತ್ತಾರೆ. ಈ ಬಾರಿ ಶೇ.100 ರಷ್ಟು ಗಣತಿ ಕಾರ್ಯ ನಡೆಸುವ ಉದ್ದೇಶ ಹೊಂದಲಾಗಿದೆ. 

ಗಣತಿ ಕಾರ್ಯಕ್ಕೆ ಆಗಮಿಸುವ ಎಲ್ಲ ಸ್ವಯಂ ಸೇವಕರು ಹಾಗೂ ಸಿಬ್ಬಂದಿಗೆ ಎಲ್ಲ ಬೇಟೆ ತಡೆ ಶಿಬಿರ, ವಸತಿ ಗಹ ಸೇರಿದಂತೆ ಎಲ್ಲ ಕೊಠಡಿಗಳನ್ನು ಬಳಸಿಕೊಳ್ಳಲಾಗುವುದು. ಸಕಾಲದಲ್ಲಿ ಊಟ-ತಿಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ಇದು ಎಲ್ಲ ಸಹಾಯಕ ಅರಣ್ಯ ಸಂರಕ್ಷಣಾಕಾರಿಗಳು,  ವಲಯ ಅರಣ್ಯಾಕಾರಿಗಳು ಗಣತಿ ಕಾರ್ಯದ ಉಸ್ತುವಾರಿ ವಹಿಸುವರು.
-ಮಣಿಕಂಠನ್‌, ನಾಗರಹೊಳೆ ಹುಲಿಯೋಜನೆ ಕ್ಷೇತ್ರ ನಿರ್ದೇಶಕ 

* ಸಂಪತ್‌ಕುಮಾರ್‌ 

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.