ನರ್ಮ್ ಅನುದಾನ ದುರ್ಬಳಕೆ: ತನಿಖೆಗೆ ಒತ್ತಾಯ

Team Udayavani, Jun 24, 2018, 11:51 AM IST

m4-narm.jpg

ಮೈಸೂರು: ಜೆ-ನರ್ಮ್ ಯೋಜನೆಯಡಿ ಮೈಸೂರು ನಗರದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಶಾಸಕ ತನ್ವೀರ್‌ಸೇಠ್ ಹೇಳಿದರು.

ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜೆ-ನರ್ಮ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಮೈಸೂರು ನಗರಕ್ಕೆ ಕೋಟ್ಯಂತರ ರೂ. ಅನುದಾನ ಬಂದರೂ ಸಮರ್ಪಕವಾಗಿ ಬಳಸಿಕೊಳ್ಳಲಾಗಿಲ್ಲ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಕುಸಿಯುವ ಭೀತಿ: ಜೆ-ನರ್ಮ್ ಯೋಜನೆಯಡಿ ನಿರ್ಮಿಸಲಾದ ಮನೆಗಳು ಕಳಪೆ ಕಾಮಗಾರಿಯಿಂದಾಗಿ ಕುಸಿಯುವ ಭೀತಿ ಎದುರಾಗಿದ್ದು, ಈ ಮನೆಗಳನ್ನು ಕೆಡವಿ ಮತ್ತೆ ನಿರ್ಮಿಸಬೇಕಾಗಿದೆ. ನರ್ಮ್ ಯೋಜನೆಯಡಿ 195 ಕೋಟಿ ರೂ. ವೆಚ್ಚದಲ್ಲಿ ನಗರಕ್ಕೆ 24/7 ನೀರು ಪೂರೈಕೆ ಮಾಡುವ ಯೋಜನೆಯ ಕಾಮಗಾರಿ ಕೈಗೆತ್ತಿಕೊಂಡ ಜಸ್ಕೋ ಸಂಸ್ಥೆ ಕಾಮಗಾರಿ ಪೂರ್ಣಗೊಳಿಸಲಿಲ್ಲ,

ಬದಲಿಗೆ ಕುಡಿಯುವ ನೀರಿನ ಪೈಪ್‌ಲೈನ್‌ ಅಳವಡಿಕೆ ಹೆಸರಲ್ಲಿ ರಸ್ತೆಗಳನ್ನೆಲ್ಲ ಅಗೆದು ಹಾಳುಗೆಡವಿದೆ. ಇದೀಗ ಕಾಮಗಾರಿ ಪೂರ್ಣಗೊಳಿಸಲು ಅಮೃತ್‌ ಯೋಜನೆಯಡಿ 247 ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಈ ರೀತಿಯ ದುಂದುವೆಚ್ಚ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕ್ಷೇತ್ರದಲ್ಲಿ ವಸತಿ ರಹಿತ ಹಾಗೂ ಗುಡಿಸಲು ವಾಸಿಗಳನ್ನು ಗುರುತಿಸಿ ಅವರಿಗೆ ನಿವೇಶನ ಹಾಗೂ ಮನೆ ಕಟ್ಟಿಕೊಡಲು ಯೋಜನೆ ರೂಪಿಸಬೇಕು. ಈ ಹಿಂದೆಯೇ ವಸತಿ ಸೌಲಭ್ಯ ಪಡೆದುಕೊಂಡಿದ್ದರೂ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದರೆ, ಅಂಥವರನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು.

ಕ್ಷೇತ್ರದಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಭೂಮಿ ಒದಗಿಸುವಂತೆ ಮುಡಾ ಆಯುಕ್ತ ಕಾಂತರಾಜ್‌ಗೆ ತಿಳಿಸಿದರು. 

ಪಾಲಿಕೆ ಅಧಿಕಾರಿಗೆ ತರಾಟೆ: ಕಳೆದ 12 ವರ್ಷಗಳಿಂದ ತ್ಯಾಜ್ಯ ವಿಲೇವಾರಿಗೆ ಟೆಂಡರ್‌ ಕರೆಯದೆ ಹಳೆಯ ಗುತ್ತಿಗೆದಾರರನ್ನೇ ಮುಂದುವರಿಸಿರುವ ಬಗ್ಗೆ ಸಮರ್ಪಕ ಉತ್ತರ ನೀಡದ ಪಾಲಿಕೆ ಅಧಿಕಾರಿಯನ್ನು  ತರಾಟೆಗೆ ತಗೆದುಕೊಂಡ ಶಾಸಕರು, ಹಳೆಯ ಗುತ್ತಿಗೆದಾರರನ್ನೇ ಮುಂದುವರಿಸದೆ ಟೆಂಡರ್‌ ಕರೆದು ಹೊಸ ಗುತ್ತಿಗೆದಾರರನ್ನು ನೇಮಿಸುವಂತೆ ತಿಳಿಸಿದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.