ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ


Team Udayavani, Oct 17, 2021, 6:59 PM IST

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಪಿರಿಯಾಪಟ್ಟಣ: ಶಾಸಕ ಕೆ.ಮಹದೇವ್ ಹಾಗೂ ಸಂಸದ ಪ್ರತಾಪ್ ಸಿಂಹರವರು ಒಳ ಒಪ್ಪಂದ ಮಾಡಿಕೊಂಡು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಅಧಿಕಾರವನ್ನು ಮೊಟಕುಗಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ವೆಂಕಟೇಶ್ ಆರೋಪಿಸಿದರು.

ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದಲ್ಲಿ ಭಾನುವಾರ ನಡೆದ ಪ್ರಜಾಪ್ರತಿನಿಧಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸ್ಥಳೀಯ ಸಂಸ್ಥೆಗಳಿಗೆ ಪರಮಾಧಿಕಾರ ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಕೊಡುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಸಿದರು. ಆದರೆ ಸಂಸದ ಪ್ರತಾಪ್ ಸಿಂಹ ನರೇಗಾ ಯೋಜನೆಗಳಿಗೆ ಚಾಲನೆ ನೀಡುವುದೇ  ದೊಡ್ಡ ಸಾಧನೆ ಎಂದು ಭಾವಿಸಿ ಜನರ ಕಣ್ಣಿಗೆ ಬಟ್ಟೆಕಟ್ಟಲು ಹವಣಿಸುತ್ತ ಈ ಯೋಜನೆಯನ್ನು ನಾನೇ ಜಾರಿಗೊಳಿಸಿದ್ದು ಎಂಬಂತೆ  ಬಿಂಬಿಸಿಕೊಳ್ಳಲು ಹೊರಟಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರವಿದ್ದಾಗ ತಾಲ್ಲೂಕಿನ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ನೀಡಲಾಗಿ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತು ಕೆಲಸ ನಡೆಯುತ್ತಿತ್ತು ಇದರ ನಡುವೆ ಸರ್ಕಾರ ಬದಲಾದ ನಂತರ ಶಾಸಕ ಕೆ.ಮಹದೇವ್ ಸಮ್ಮಿಶ್ರ ಸರ್ಕಾರದಲ್ಲಿ ಅಲ್ಪಸ್ವಲ್ಪ ಅನುದಾನ ತಂದದ್ದು ಬಿಟ್ಟರೆ ಬಿಜೆಪಿ ಸರ್ಕಾರದಲ್ಲಿ ಬಿಡಿಗಾಸು ತರಲು ಸಾಧ್ಯವಾಗಿಲ್ಲ ಎಂದರು.

ಹಣವನ್ನು ಕೊಳ್ಳೆ ಹೊಡೆಯುವ ಉದ್ದೇಶದಿಂದ ಮನರೇಗಾ ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ಪಂಚಾಯಿತಿ ಜನಪ್ರತಿನಿಧಿಗಳಿಗೆ ಮೀಸಲಾದ ಯೋಜನೆಗಳಿಗೆ ಗುದ್ದಲಿಪೂಜೆ ಮಾಡುವ ನಾಟಕ ಮಾಡುವ ಮೂಲಕ ಸ್ಥಳೀಯ ಜನಪ್ರತಿನಿಧಿಗಳ ಅಧಿಕಾರವನ್ನು ಕಬಳಿಸಿ ಲೂಟಿ ಮಾಡುತ್ತಿದ್ದಾರೆ. ನಾನು ಇಲ್ಲಿಯ ವರೆಗೂ ಏನು ಅಭಿವೃದ್ದಿ ಕೆಲಸ ಮಾಡಿದ್ದೇನೆ ಎಂದು ದಾಖಲೆ ಸಮೇತ ನೀಡುತ್ತೇನೆ ಗ್ರಾಪಂ ಅಧ್ಯಕ್ಷರು ಚಾಲನೆ ನೀಡಬೇಕಾದ ಕಾಮಗಾರಿಗಳಿಗೆ ಅಧಿಕಾರಿಗಳಿಂದ ಒತ್ತಡಹಾಕಿಸಿ ಚಾಲನೆ ನೀಡುವುದೇ ದೊಡ್ಡ ಕೆಲಸವಲ್ಲ ಇವರು ಯಾವುದಾದರೂ ಶಾಸ್ವತವಾದ ಯೋಜನೆಯನ್ನು ಜಾರಿಗೆ ತಂದು ತಮ್ಮ ತಾಲ್ಲೂಕಿಗೆ ಕೊಡುಗೆ ನೀಡಿದ್ದರೆ ಬಹಿರಂಗ ಪಡಿಸುವ ಮೂಲಕ ತಮ್ಮ ಪೌರುಷವನ್ನು ತೋರಿಸಲಿ ಎಂದು ಸವಾಲೆಸದರು.

ಮಾಜಿ ತಾ.ಪಂ.ಅಧ್ಯಕ್ಷ ಐಲಾಪುರ ರಾಮು ಮಾತನಾಡಿ ದೇಶದಲ್ಲಿ ದಲಿತ,ಹಿಂದುಳಿದ ಹಾಗೂ ಅಲ್ಪಸಂಖ್ಯಾತರನ್ನು ಸಾಮಾಜಿಕ ನ್ಯಾಯದಡಿ ಕೊಂಡೊಯ್ಯುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ, , ಸಿದ್ದರಾಮಯ್ಯನವರ ಸರ್ಕಾರವಿದ್ದಾಗ ಪ್ರತಿಯೊಂದು ಸಮಾಜಕ್ಕೂ ಸಮಾನ ಅನುದಾನ ಮತ್ತು ಅವಕಾಶ ನೀಡುವ ಮೂಲಕ ಅಭಿವೃದ್ಧಿಯತ್ತ ಕೊಂಡೊಯ್ಯಲಾಗಿತ್ತು. ಆದರೆ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಕೋಮುಗಲಭೆ, ಮಹಿಳೆಯರ ಮೇಲೆನ ಅತ್ಯಚಾರ, ಉದ್ಯೋಗ ಕೇಳುವ ನಿರುದ್ಯೋಗಿ ಯುವಕರ ಮೇಲೆ ಎಐಆರ್ ಪ್ರಕರಣ ದಾಖಲಿಸುವುದು ಮುಷ್ಕರ ಮಾಡುವ ರೈತರನ್ನು ಕೊಲೆ ಮಾಡುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ ಕಳೆದ 10 ತಿಂಗಳಿಂದ ರೈತರು ಸತ್ಯಗ್ರಹ ನಡೆಸಿ ಈಗಾಗಲೇ 75 ರೈತರು ಅಸುನೀಗಿದ್ದರೂ ದಾವಿಸದ ಪ್ರಧಾನಿ ಮೋದಿ ರೈತ ವಿರೋಧಿ ನೀತಿಯನ್ನು ಅನುಸರಿಸಿ ಜನಸಾಮಾನ್ಯರನ್ನು ಬೀದಿಗೆ ಶ್ರೀಮಂತರ ಕಪಿಮುಷ್ಠಿಯತ್ತ ದೇಶವನ್ನ ಕೊಂಡೋಯ್ಯುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಎಂ.ಎಸ್.ಮೀನಾಕ್ಷಿಮ್ಮ, ಉಪಾಧ್ಯಕ್ಷ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್‌ಜಾನ್‌ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಮುತ್ತುರಾಣಿ, ಪುರಸಭಾ ಮಾಜಿ ಅಧ್ಯಕ್ಷ ಪಿ.ಎಸ್.ವಿಷಕಂಠಯ್ಯ, ಮುಖಂಡರಾದ ಅನಿಲ್ ಕುಮಾರ್, ವಿಜಯಕುಮಾರ್, ಕಾಮರಾಜು, ಸೀಗೂರು ವಿಜಯಕುಮಾರ್, ಹಿಟ್ನಳ್ಳಿ ಪರಮೇಶ್, ಪಿ.ಮಹದೇವ್, ಲೋಕೇಶ್, ಹೆಚ್.ಬಿ.ಶಿವರುದ್ರ, ಅಮೃತೇಶ್, ಜಯಶಂಕರ್, ಅಣ್ಣಯ್ಯ, ಕುಮಾರ್, ಮುರುಳೀಧರ್, ಜೆ.ಮೋಹನ್, ಪದ್ಮಲತಾ,  ಮಹದೇಂದ್ರಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

farmer

78,303 ರೈತರ ಆತ್ಮಹತ್ಯೆ;ತೋಮರ್ ಸರ್, ವೈಫಲ್ಯ ಮರೆಮಾಡಬೇಡಿ ಎಂದ ಸುರ್ಜೆವಾಲಾ

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ರೈತರ ಸಾವಿನ ಅಂಕಿಅಂಶ ನಮ್ಮ ಬಳಿ ಇಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೂ ಇಲ್ಲ: ಕೇಂದ್ರ

ರೈತರ ಸಾವಿನ ಅಂಕಿಅಂಶ ನಮ್ಮ ಬಳಿ ಇಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೂ ಇಲ್ಲ: ಕೇಂದ್ರ

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

1-sfdsf

ಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಚಿದ್ದ 5 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ

ದೋಚಿದ್ದ 5 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ

girls hostel

ಹಾಸ್ಟೆಲ್‌ನಲ್ಲಿ ಓದಲು ಕರೆಂಟಿಲ್ಲ, ಸ್ನಾನ, ಶೌಚಾಲಯಕ್ಕೂ ನೀರಿಲ್ಲ!

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

9lake

23 ವರ್ಷದ ನಂತರ ತುಂಬಿದ ಹಳೇಬೀಡು ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ

2drugs

ಅರ್ಧ ಕೆ.ಜಿ. ಗಾಂಜಾ ವಶ ಆರೋಪಿ ಬಂಧನ

MUST WATCH

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

ಹೊಸ ಸೇರ್ಪಡೆ

ಆನೆಗಳ ಹಿಂಡು

ಆನೇಕಲ್‌ನಲ್ಲಿ ಕಾಡಾನೆ ಹಿಂಡು ದಾಳಿ: ರಾಗಿ ಬೆಳೆ ನಾಶ

ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

farmer

78,303 ರೈತರ ಆತ್ಮಹತ್ಯೆ;ತೋಮರ್ ಸರ್, ವೈಫಲ್ಯ ಮರೆಮಾಡಬೇಡಿ ಎಂದ ಸುರ್ಜೆವಾಲಾ

aids victims in benglore rural

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ 3,771 ಮಂದಿ ಏಡ್ಸ್‌ ಪೀಡಿತರು..

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.