Udayavni Special

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Team Udayavani, May 10, 2019, 4:53 PM IST

—-2

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ಸಂಭವಿಸಿದೆ.

ನಗರದ ಹೊರ ವಲಯದಲ್ಲಿರುವ ಲಿಂಗಾಂಬುದಿ ಪಾಳ್ಯದ ರಿಂಗ್‌ ರಸ್ತೆ ಬಳಿಯ ಖಾಸಗಿ ಬಡಾವಣೆಯಲ್ಲಿ ಬುಧವಾರ ರಾತ್ರಿ ಪ್ರಿಯಕರನ ಎದುರೇ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು, ಇಬ್ಬರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಎಚ್.ಡಿ. ಕೋಟೆ ಮೂಲದ 28 ವರ್ಷದ ಯುವಕ ಮತ್ತು ಮೈಸೂರು ನಗರದ 23 ವರ್ಷದ ಯುವತಿಯ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ಗುಂಪು, ಪ್ರಿಯಕರನ ಎದುರೇ ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ವಿವರ: ಮೈಸೂರಿನ ಖಾಸಗಿ ಹೋಟೆ ಲೊಂದರಲ್ಲಿ ನೌಕರರಾಗಿರುವ ಇವರಿಬ್ಬರು ಕಳೆದ ಮೂರ್ನಾಲ್ಕು ತಿಂಗಳಿನಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮೈಸೂರು ನಗರದ ಬಡಾವಣೆಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದ ಇವರಿಬ್ಬರು, ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಸುತ್ತಾಡಲು ತೆರಳಿದ್ದಾರೆ. ಲಿಂಗಾಂಬುದಿ ಪಾಳ್ಯದ ಬಳಿಯ ರಿಂಗ್‌ ರಸ್ತೆಗೆ ಹೊಂದಿಕೊಂಡಂತಿರುವ ಖಾಸಗಿ ಬಡಾವಣೆಯ ಬಳಿ ಬೈಕ್‌ ನಿಲ್ಲಿಸಿ ಏಕಾಂತವಾಗಿ ಕುಳಿತು ಕೊಂಡಿದ್ದಾರೆ. ರಾತ್ರಿ 10 ಗಂಟೆ ಸಮಯದಲ್ಲಿ ಅದೇ ಮಾರ್ಗದಲ್ಲಿ ಕಾರು ಮತ್ತು ಬೈಕ್‌ನಲ್ಲಿ ತೆರಳುತ್ತಿದ್ದ ಮೂರ್ನಾಲ್ಕು ಮಂದಿ ಯುವಕರು, ಬೈಕ್‌ ನಿಂತಿರುವುದನ್ನು ಕಂಡು ಅವರ ಬಳಿ ಬಂದಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ಕೆಲ ವರು ಯುವತಿ ಜತೆ ಅನುಚಿತವಾಗಿ ವರ್ತಿಸಿದ್ದಾರೆ.

ಗಂಭೀರ ಗಾಯ: ಈ ಸಂದರ್ಭ ಯುವತಿಯ ಪ್ರಿಯಕರ ವಿರೋಧವ್ಯಕ್ತಪಡಿಸಿದ್ದಾನೆ. ಇದರಿಂದ ಕೋಪಗೊಂಡ ದುಷ್ಕರ್ಮಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಆತನ ಕಾಲಿನ ಮೇಲೆ ಕಲ್ಲು ಎತ್ತಿ ಹಾಕಿ, ಹಣೆಯ ಭಾಗಕ್ಕೆ ಕಲ್ಲಿನಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ನಂತರ ಗುಂಪಿನಲ್ಲಿದ್ದ ಇಬ್ಬರು ಯುವಕರು, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ವಾಹನಗಳು ಬರುವುದನ್ನು ಕಂಡು ಕಾರು ಮತ್ತು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಈ ವೇಳೆ ತೀವ್ರ ನಿತ್ರಾಣಗೊಂಡಿದ್ದ ಯುವತಿ, ಸುಮಾರು ಅರ್ಧ ಕಿ.ಮೀ. ದೂರದಲ್ಲಿರುವ ರಿಂಗ್‌ ರಸ್ತೆಯ ವರೆಗೂ ಓಡಿ ಬಂದು ದಾರಿಹೋಕರ ನೆರವಿನಿಂದ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜಯಪುರ ಠಾಣೆ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಿಯಕರ ಹಾಗೂ ಯುವತಿಯನ್ನು ಕೆ.ಆರ್‌. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸ್ನೇಹಿತರೊಬ್ಬರಿಗೆ ಹಣ ನೀಡಲು ಲಿಂಗಾಂಬುದಿ ಪಾಳ್ಯದ ಕಡೆ ತೆರಳಿದ್ದು, ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಬೈಕ್‌ ನಿಲ್ಲಿಸಿದಾಗ, ಕಾರು ಮತ್ತು ಬೈಕ್‌ನಲ್ಲಿ ಬಂದು ದುಷ್ಕರ್ಮಿಗಳ ಗುಂಪು ನಮ್ಮ ಮೇಲೆ ಹಲ್ಲೆ ನಡೆಸಿ, ಯುವತಿಯ ಮೇಲೆ ಅತ್ಯಾಚಾರವೆಸಗಿದೆ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ದಕ್ಷಿಣ ವಲಯ ಐಜಿಪಿ ಉಮೇಶ್‌ಕುಮಾರ್‌, ಎಸ್ಪಿ ಅಮಿತ್‌ ಸಿಂಗ್‌, ಹೆಚ್ಚುವರಿ ಎಸ್ಪಿ ಪಿ.ವಿ. ಸ್ನೇಹಾ, ಮೈಸೂರು ಗ್ರಾಮಾಂತರ ಉಪ ವಿಭಾಗದ ಎಎಸ್ಪಿ ಕ್ಷಮಾ ಮಿಶ್ರಾ, ಸಿಪಿಐ ಮಹೇಶ್‌ ಪ್ರಸಾದ್‌ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿ ಟಿವಿ ದೃಶ್ಯಾವಳಿ

ದುಷ್ಕರ್ಮಿಗಳು ಕಾರು ಮತ್ತು ಬೈಕ್‌ನಲ್ಲಿ ಬಂದಿರುವ, ಪರಾರಿಯಾಗಿರುವ ಬಗ್ಗೆ ಸಂತ್ರಸ್ತ ಯುವತಿಯಿಂದ ಮಾಹಿತಿ ಪಡೆದ ಪೊಲೀಸರು, ರಿಂಗ್‌ ರಸ್ತೆ ಸೇರಿದಂತೆ ಕೃತ್ಯ ನಡೆದ ಸ್ಥಳ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ದುಷ್ಕರ್ಮಿಗಳ ಗುಂಪೊಂದು ಮೈಸೂರು ನಗರದ ಹೊರ ವಲಯದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿ, ಜತೆಯಲ್ಲಿದ್ದ
ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿ ಯಾಗಿದೆ. ಯುವಕನ ಕಾಲಿನ ಮೇಲೆ ಕಲ್ಲು ಎತ್ತಿ ಹಾಕಿರುವುದರಿಂದ ಮೂಳೆ ಮುರಿದಿದೆ. ಆರೋಪಿಗಳ ಪತ್ತೆಗೆ ಎಎಸ್ಪಿ ನೇತೃತ್ವದಲ್ಲಿ ಎಂಟು ತಂಡಗಳನ್ನು ರಚಿಸಲಾಗಿದೆ. ಸ್ಥಳದಲ್ಲಿ ಸಿಕ್ಕ ಸಾಕ್ಷಾಧಾರ ಮತ್ತು ಸಿಸಿ ಟಿವಿ ದೃಶ್ಯಾವಳಿ ಆಧರಿಸಿ, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
●ಅಮಿತ್‌ ಸಿಂಗ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪದ ಹತ್ತಿರ ಬಂದು ಶಾಖದಿಂದ ಕೋವಿಡ್-19 ವೈರಸ್ ಸಾಯುತ್ತದೆ: ಬಿಜೆಪಿ ಶಾಸಕ ರಾಮದಾಸ್

ದೀಪದ ಹತ್ತಿರ ಬಂದು ಶಾಖದಿಂದ ಕೋವಿಡ್-19 ವೈರಸ್ ಸಾಯುತ್ತದೆ: ಬಿಜೆಪಿ ಶಾಸಕ ರಾಮದಾಸ್

ಮನೆ ಬಾಗಿಲಿಗೆ ಪಡಿತರ: ಮೈಸೂರಿನಲ್ಲಿ ವಿನೂತನ ವ್ಯವಸ್ಥೆ

ಮನೆ ಬಾಗಿಲಿಗೆ ಪಡಿತರ: ಮೈಸೂರಿನಲ್ಲಿ ವಿನೂತನ ವ್ಯವಸ್ಥೆ

ಎರಡು ತಿಂಗಳ ಪಡಿತರ ವಿತರಣೆ

ಎರಡು ತಿಂಗಳ ಪಡಿತರ ವಿತರಣೆ

ಮೈಸೂರಿನಲ್ಲಿ ಮತ್ತೆ ನಾಲ್ಕು ಕೋವಿಡ್-19 ಪಾಸಿಟಿವ್

ಮೈಸೂರಿನಲ್ಲಿ ಮತ್ತೆ ನಾಲ್ಕು ಕೋವಿಡ್-19 ಪಾಸಿಟಿವ್: ಒಟ್ಟು 12 ಜನ ಸೋಂಕಿತರು

ಕರ್ನಾಟಕ ಲಾಕ್ ಡೌನ್ : ಮನೆ ಕೆಲಸದಲ್ಲಿ ಪತ್ನಿಗೆ ಸಹಾಯ ಮಾಡುವ ಮೂಲಕ ಮಾದರಿಯಾದ ಶಾಸಕರು

ಕರ್ನಾಟಕ ಲಾಕ್ ಡೌನ್ : ಮನೆ ಕೆಲಸದಲ್ಲಿ ಪತ್ನಿಗೆ ಸಹಾಯ ಮಾಡುವ ಮೂಲಕ ಮಾದರಿಯಾದ ಶಾಸಕರು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

3-4 ದಿನ ಗುಡುಗು ಸಹಿತ ಮಳೆ ಸಾಧ್ಯತೆ

3-4 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಆರೋಗ್ಯ ಯೋಧರು: 10 ಲಕ್ಷ ಮಾಸ್ಕ್ ತಯಾರಿಸಿದ ಮಹಿಳೆಯರು

ಆರೋಗ್ಯ ಯೋಧರು: 10 ಲಕ್ಷ ಮಾಸ್ಕ್ ತಯಾರಿಸಿದ ಮಹಿಳೆಯರು

ಮಧ್ಯಪ್ರದೇಶದಲ್ಲಿ 26,00 ಜನರಿಗೆ ಗೃಹ ನಿರ್ಬಂಧ ; ಇದಕ್ಕೆ ಕಾರಣ ಇಲ್ಲಿದೆ!