ಗಂಗಾಕಲ್ಯಾಣ ಬೋರ್‌ವೆಲ್‌ ಲಾರಿ ಬರೋದು ಡೌಟು!


Team Udayavani, Feb 25, 2020, 3:00 AM IST

gangakalyana

ಎಚ್‌.ಡಿ.ಕೋಟೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಹಿತಾದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಗಂಗಾ ಕಲ್ಯಾಣ ಉಚಿತ ಕೊಳವೆಬಾವಿ ಯೋಜನೆ ಹಳ್ಳ ಹಿಡಿಯುತ್ತಿದೆಯೇ ಎಂಬ ಭಾವನೆ ಕಾಡುತ್ತಿದೆ. ತಾಲೂಕಿನಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ 52 ಫ‌ಲಾನುಭವಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಿ ಪಟ್ಟಿ ಸಿದ್ಧಪಡಿಸಲಾಗಿದೆ. ಇದುವರಿಗೂ ಒಬ್ಬರಿಗೂ ಕಾರ್ಯಾದೇಶ ಬಂದಿಲ್ಲ. ಬರುವ ಲಕ್ಷಣಗಳು ಕೂಡ ಗೋಚಿಸುತ್ತಿಲ್ಲ.

52 ಮಂದಿ ಆಯ್ಕೆ: ಗಂಗಾ ಕಲ್ಯಾಣ ಯೋಜನೆಗೆ 2018ನೇ ಸಾಲಿನಲ್ಲಿ ತಾಲೂಕಿನ 34 ಮಂದಿ ಹಾಗೂ 2019ನೇ ಸಾಲಿನಲ್ಲಿ ಶಾಸಕ ಅನಿಲ್‌ ಚಿಕ್ಕಮಾದು ಅಧ್ಯಕ್ಷತೆಯಲ್ಲಿ 18 ಮಂದಿಯನ್ನು ಆಯ್ಕೆ ಮಾಡಲಾಗಿತ್ತು. ಒಟ್ಟು 52 ಫ‌ಲಾನುಭವಿಗಳು ತಮ್ಮ ಜಮೀನಿಗೆ ಎಂದು ಕೊಳವೆ ಬಾವಿ ಲಾರಿ ಬರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಸರ್ಕಾರಕ್ಕೆ ಪಟ್ಟಿ ಸಲ್ಲಿಕೆ: ಕಳೆದ ಎರಡು ವರ್ಷಗಳ ಹಿಂದೆಯೇ ಶಾಸಕರು 2018ನೇ ಸಾಲಿನಲ್ಲಿ ತಾಲೂಕಿನ ಅರ್ಹ ರೈತರನ್ನು ಆಯ್ಕೆ ಮಾಡಿ ಪಟ್ಟಿ ಸರ್ಕಾರಕ್ಕೆ ಕಳುಹಿಸಿದ್ದರು. 2 ವರ್ಷ, ಎರಡು ಬೇಸಿಗೆ ಕಳೆದರೂ ಯಾವ ರೈತರ ಹೊಲದಲ್ಲೂ ಕೊಳವೆಬಾವಿ ತೆಗೆಸಲು ಸರ್ಕಾರದಿಂದ ಮಂಜೂರಾತಿ ಪ್ರಮಾಣ ಪತ್ರ ಬಂದಿಲ್ಲ. ನೀರಾವರಿ ಕನಸು ಕಂಡಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ರೈತರ ನಿರೀಕ್ಷೆ ಹುಸಿಯಾಗಿದೆ.

ಬೇಸಿಗೆ ಮುಗಿತಾ ಬಂತು: ಪ್ರಸಕ್ತ ಸಾಲಿನಲ್ಲಿ ಫೆಬ್ರವರಿ ತಿಂಗಳು ಮುಗಿಯುವ ಹಂತ ತಲುಪಿದ್ದರೂ ಆಯ್ಕೆಯಾದ ಯಾವ ರೈತರ ಜಮೀನಿನಲ್ಲೂ ಕೊಳವೆ ಬಾವಿ ಕೊರೆಸಿಲ್ಲ. ಮಾರ್ಚ್‌ ಹಾಗೂ ಏಪ್ರಿಲ್‌ ತಿಂಗಳು ಕಳೆದರೆ ಬೇಸಿಗೆಯೇ ಮುಗಿದು ಹೋಗಿ, ಜೂನ್‌ನಲ್ಲಿ ಮುಂಗಾರು ಶುರುವಾಗುತ್ತದೆ. ಈ ಬೇಸಿಗೆ ಅವಧಿಯಲ್ಲಿ ರೈತರಿಗೆ ಗಂಗಾ ಕಲ್ಯಾಣ ಯೋಜನೆಯ ಕೊಳವೆ ಬಾವಿಯನ್ನು ಕೊರೆಸಿಕೊಟ್ಟಿದರೆ ಬೆಳೆ ಬೆಳೆಯಲು ಅನುಕೂಲವಾಗುತ್ತಿತ್ತು.

ಆರ್ಥಿಕ ಅಭಿವೃದ್ಧಿ ಹೊಂದಲು ನೆರವಾಗುತ್ತಿತ್ತು. ಆದರೆ, ಈ ಯೋಜನೆಯ ಆಶಯವೇ ಸಕಾರ ಆಗುತ್ತಿಲ್ಲ. ಈ ವಿಳಂಬ ಧೋರಣೆ ಕುರಿತು ಯಾರನ್ನು ಕೇಳಬೇಕು ಎಂಬುದು ಗೊತ್ತಾಗುತ್ತಿಲ್ಲ ಎಂದು ಫ‌ಲಾನುಭವಿಗಳು ಅಲವತ್ತುಕೊಂಡಿದ್ದಾರೆ. ಇಂತಹ ಅವ್ಯವಸ್ಥೆ ಯೋಜನೆಗೆ ಏತಕ್ಕಾದರೂ ನಮ್ಮನ್ನು ಆಯ್ಕೆ ಮಾಡಬೇಕಿತ್ತು? ಕೈಗೆ ಬಂದು ತುತ್ತು ಬಾಯಿಗೆ ಬಂದಿಲ್ಲ ಎಂದು ತಾಲೂಕಿನ ರೈತರು ಪ್ರಶ್ನಿಸುತ್ತಿದ್ದಾರೆ.

ಈಗ ಬಿಟ್ಟರೆ ಮತ್ತೆ 1 ವರ್ಷ ಬೇಕು: ಬೇಸಿಗೆ ಕಾಲ ಮುಗಿದರೆ ಮಳೆಗಾಲ ಆರಂಭಗೊಳ್ಳುತ್ತಿದ್ದಂತೆಯೇ ಎಲ್ಲಾ ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಬಿತ್ತನೆಗೆ ಭೂಮಿ ಹದ ಮಾಡಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಜಮೀನಿನ ಮಾರ್ಗವಾಗಿ ಬೋರ್‌ವೆಲ್‌ ಲಾರಿ ಫ‌‌ಲಾನುಭವಿಗಳ ಜಮೀನು ಸೇರಲು ಇತರ ರೈತರು ಸಹಕಾರ ನೀಡುವುದಿಲ್ಲ. ಹದಮಾಡಿಕೊಂಡ ಭೂಮಿ ಮೇಲೆ ಭಾರೀ ಗಾತ್ರದ ಲಾರಿಗಳು ಸಂಚರಿಸಿದರೆ ಬಿತ್ತನೆಗೆ ಅಡಚಣೆಯಾಗುತ್ತದೆ

ಹಾಗೂ ಭೂಮಿ ಕೂಡ ಗಟ್ಟಿಗೊಂಡು ಉಳುಮೆಗೂ ತೊಂದರೆ ಆಗುತ್ತದೆ. ಹೀಗಾಗಿ ಬೇಸಿಗೆ ಅವಧಿಯಲ್ಲಿ ಕೊಳವೆ ಬಾವಿ ಕೊರೆಸಿದರೆ ಅನುಕೂಲ ಆಗುತ್ತದೆ. ಈ ಅವಧಿ ಪೂರ್ಣಗೊಂಡರೆ ಮತ್ತೆ ಒಂದು ವರ್ಷ ಕಳೆಯಬೇಕಾಗುತ್ತದೆ. ಹೀಗಾಗಿ ಕ್ಷೇತ್ರದ ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಸಂಬಂಧಪಟ್ಟ ಇಲಾಖೆಗಳ ಮೇಲಧಿಕಾರಿಗಳ ಗಮನಕ್ಕೆ ತಂದು ಕೊಳವೆಬಾವಿ ಕೊರೆಸಿಕೊಡಬೇಕು ಎಂದು ಫ‌ಲಾನುಭವಿ ರೈತರು ಆಗ್ರಹಿಸಿದ್ದಾರೆ.

ಶಾಸಕ ಅನಿಲ್‌ ಚಿಕ್ಕಮಾದು ಏನಂತಾರೆ?: ರಾಜ್ಯ ಸರ್ಕಾರದ ಆದೇಶದಂತೆ ಕಳೆದ 2018ನೇ ಸಾಲಿನಲ್ಲಿ ತಾಲೂಕಿನ ಸಣ್ಣ ಅತಿಸಣ್ಣ ರೈತರು ಕೃಷಿಯಲ್ಲಿ ಸಬಲೀಕರಣರಾಗಬೇಕು ಎಂಬ ಉದ್ದೇಶದಿಂದ ಗಂಗಾ ಕಲ್ಯಾಣ ಕೊಳವೆಬಾವಿ ಯೋಜನೆಗೆ ತಾಲೂಕಿನಿಂದ ಅರ್ಹ ಫ‌ಲಾನುಭವಿಗಳನ್ನು ಆಯ್ಕೆ ಮಾಡಿ ಪಟ್ಟಿ ಸಲ್ಲಿಸಿದ್ದೇನೆ. ಆದರೆ, ಸರ್ಕಾರದಲ್ಲಿ ಅನುದಾನ ಇಲ್ಲದ ಕಾರಣ ಬೋರ್‌ವೆಲ್‌ ಕೊರೆಸಲು ಸಾಧ್ಯವಾಗಿಲ್ಲ, ಈ ಕುರಿತು ಸಂಬಂಧಿಸಿದ ಇಲಾಖೆಗಳ ಜೊತೆ ಚರ್ಚೆ ನಡೆಸಿ, ಅತೀ ಶೀಘ್ರದಲ್ಲಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕ್ಷೇತ್ರದ ಶಾಸಕ ಅನಿಲ್‌ ಚಿಕ್ಕಮಾದು ಭರವಸೆ ನೀಡಿದ್ದಾರೆ.

ಫ‌ಲಾನುಭವಿಗಳು ಏನಂತಾರೆ?: ಕಳೆದ 2 ವರ್ಷಗಳ ಹಿಂದೆ ನನಗಿದ್ದ 3.10 ಎಕರೆ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ವೆಲ್‌ ಕೊರೆಸುವ ಯೋಜನೆಗೆ ಅರ್ಜಿ ಸಲ್ಲಿಸಿದ್ದೆ. ಶಾಸಕರು ಯೋಜನೆಗೆ ನನ್ನನ್ನು ಆಯ್ಕೆ ಮಾಡಿ ಎರಡು ವರ್ಷ ವರ್ಷ ಕಳೆದೆರೂ ಇನ್ನೂ ಕೊಳವೆಬಾವಿ ಕೊರೆಸಿಲ್ಲ. ನನ್ನ ಜಮೀನಿಗೆ ಬೋರ್‌ವೆಲ್‌ ಲಾರಿ ಬರಲು ಇತರ ಮೂವರು ರೈತರ ಜಮೀನು ಹಾದು ಬರಬೇಕು.

ಕೊಂಚ ಮಳೆಯಾದರೂ ರೈತರು ತಮ್ಮ ಜಮೀನಿನಲ್ಲಿ ತಿರುಗಾಡಲು ಬಿಡುವುದಿಲ್ಲ. ಆಗ ಕೊಳವೆಬಾವಿ ಕೊರೆಸಲು ಸಾಧ್ಯವಾಗದೇ ಮತ್ತೆ ಮುಂದಿನ ವರ್ಷದ ತನಕ ಕಾಯಬೇಕು. ಇದು ನನ್ನೊಬ್ಬನ ಸ್ಥಿತಿಯಲ್ಲ, ತಾಲೂಕಿನಲ್ಲಿ ಬಹುತೇಕ ರೈತರ ಸಮಸ್ಯೆ ಇದಾಗಿದ್ದು, ಕೂಡಲೇ ಶಾಸಕರು ಮಳೆ ಬೀಳುವ ಮುನ್ನ ಆಯ್ಕೆಪಟ್ಟಿಯಂತೆ ಬೋರ್‌ವೆಲ್‌ ಕೊರೆಸಲು ಕ್ರಮ ಕೈಗೊಳ್ಳಬೇಕು ಎಂದು ಫ‌ಲಾನುಭವಿ ರೈತ ಬಸವರಾಜು ಮತ್ತಿತರರು ಆಗ್ರಹಿಸಿದ್ದಾರೆ.

* ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.