ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹ

Team Udayavani, Nov 10, 2020, 3:46 PM IST

ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹ

ಮೈಸೂರು: ಗ್ರಾಪಂ ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಪಂ ಸ್ವತ್ಛತಾ ಕಾರ್ಯ ಸ್ಥಗಿತಗೊಳಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.

ಸೋಮವಾರ ಜಿಪಂ ಕಚೇರಿ ಬಳಿ ದಸಂಸ ಮತ್ತು ಪೌರಕಾರ್ಮಿಕ ಅಸಂಘಟಿತ ಕಾರ್ಮಿಕ ವಿಭಾಗದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಜಿಲ್ಲೆ ವ್ಯಾಪ್ತಿಯ 7 ತಾಲೂಕುಗಳ 236 ಗ್ರಾಪಂಗಳಲ್ಲಿನ ಜನರ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಪೌರಕಾರ್ಮಿಕರರಿಗೆ ಯಾವುದೇ ರೀತಿಯ ಕೆಲಸದ ಭದ್ರತೆ ಇಲ್ಲ. ನೇಮಕಾತಿ ಪ್ರಕ್ರಿಯೆ ಅತ್ಯಾವಶ್ಯಕ. ಈ ಕುರಿತು ಹಲವು ಗೊಂದಲ ಸೃಷ್ಟಿಯಾಗಿವೆ ಎಂದು ಕಿಡಿಕಾರಿದರು.

ಗ್ರಾಪಂನಲ್ಲಿರುವ ಎಲ್ಲಾ ಪೌರಕಾರ್ಮಿಕರನ್ನೂ ಸರ್ಕಾರಿ ನೌಕರರೆಂದು ರಾಜ್ಯ ಸರ್ಕಾರ ಪರಿಗಣಿಸಬೇಕು. ಗ್ರಾಪಂಗಳಲ್ಲಿ ಹಾಲಿ ಪೌರಕಾರ್ಮಿಕರಾಗಿದುಡಿಯುತ್ತಿರುವ ಪೌರಕಾರ್ಮಿಕರಿಗೆ ವಾಸಿಸಲು ಆಯಾ ಪಂಚಾಯತ್‌ನಿಂದ ನಿವೇಶನ ಮಂಜೂರು ಮಾಡಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕು. ಗ್ರಾಪಂನ ಎಲ್ಲಾ ಪೌರ ಕಾರ್ಮಿಕರಿಗೆ ಸರ್ಕಾರದ ಕಾರ್ಮಿಕರ ಇಲಾಖೆ 2020ನೇ ಸಾಲಿನ ಆದೇಶದಂತೆ ಕನಿಷ್ಠ ವೇತನ, ಇಎಸ್‌ಐ, ಪಿಎಫ್ ಸೌಲಭ್ಯ ಕಲ್ಪಿಸಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಹಾಲಿ ವಾಸ ಮಾಡುತ್ತಿರುವ ಪೌರಕಾರ್ಮಿಕರ ನಿವೇಶನಗಳಿಗೆ ಹಕ್ಕುಪತ್ರ, ಸ್ವಾಧೀನ ಪತ್ರ ಮಂಜೂರು ಮಾಡಿಸಲುಕ್ರಮಕೈಗೊಳ್ಳಬೇಕು ಎಂದರು.

ಬೇಡಿಕೆಗಳು: ನಿವೃತ್ತ ಉಪಧನ, ಮರಣ ಉಪಧನ ಹಣ ವಿಳಂಬ ಮಾಡದೆ ಜರೂರಾಗಿ ಕೊಡಿಸಬೇಕು. ತುಟ್ಟಿಭತ್ಯೆ, ಬಾಕಿ ವೇತನ, ಜೀವವಿಮೆ ಭೀಮ ಯೋಜನೆಯ ಆರೋಗ್ಯ ಕಾರ್ಡ್‌ ಕೊಡಿಸಬೇಕು. ಸ್ವತ್ಛತಾ ಕಾರ್ಮಿಕರಿಗೆ ಸೇವಾ ನಿಯಮ ತೆರೆದು, ವಿದ್ಯಾರ್ಹತೆಗನುಗುಣವಾಗಿ ಮುಂಬಡ್ತಿ ನೀಡಿ ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಬೇಕು. ಗ್ರಾಪಂಗಳಲ್ಲಿ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಪೌರಕಾರ್ಮಿಕರ ಕುಟುಂಬಗಳಿಗೆ ಕೆಲಸ ನೀಡಿ ಅವರ ಜೀವನಕ್ಕೆ ಆರ್ಥಿಕ ಭದ್ರತೆ ಕಲ್ಪಿಸಲು ಕ್ರಮವಹಿಸಬೇಕು. ಎಲ್ಲಾ ಗ್ರಾಪಂ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಪೌರಕಾರ್ಮಿಕರಿಗೆ ಕೆಲಸದ ಅವಧಿಯನ್ನು ಬೆಳಗ್ಗೆ 7ರಿಂದ ಮಧ್ಯಾಹ್ನ 2ರವರೆಗೆ ನಿಗದಿಗೊಳಿಸಿ ಆದೇಶ ಹೊರಡಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ದಸಂಸ ರಾಜ್ಯ ಸಂಚಾಲಕ ಹರಿಹರ ಆನಂದಸ್ವಾಮಿ, ಡಾ.ಆಲಗೂಡು ಚಂದ್ರಶೇಖರ್‌, ಆರ್ಟಿಸ್ಟ್‌ ಎಸ್‌.ನಾಗರಾಜ್‌, ಡಿ.ಎನ್‌.ಬಾಬು, ಮೈಸೂರು ಮಹದೇವ, ಮಂಚಯ್ಯ, ಆರ್‌.ರಾಜುಕೆಂಪಯ್ಯನಹುಂಡಿ ಮತ್ತಿತರರಿದ್ದರು.

ವೇತನ ಹೆಚ್ಚಳಕ್ಕೆ ಅಂಗನವಾಡಿ ನೌಕರರ ಪಟ್ಟು :

ಮೈಸೂರು: ಅಂಗನವಾಡಿ ನೌಕರರ ವೇತನವನ್ನು ಕನಿಷ್ಠ 21 ಸಾವಿರಕ್ಕೆ ಏರಿಕೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೂತನ ಶಿಕ್ಷಣ ನೀತಿ ಜಾರಿ ಮಾಡುವಾಗ ಬಿಸಿಯೂಟ ಯೋಜನೆ ಬಲಿಷ್ಠಪಡಿಸಿ ಈಗಿರುವ ಮಾದರಿ ಮುಂದುವರಿಸಬೇಕು. ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ. ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಅಕ್ಷರದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು.

ಕೋವಿಡ್ ಸಂದರ್ಭದ ವೇತನ ಏಪ್ರಿಲ್‌ನಿಂದಲೇಕೊಡಬೇಕು. ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖೀನ ಒಳಗೆ ವೇತನ ಪಾವತಿಯಾಗಬೇಕು. ಬಿಸಿಯೂಟ ಮಹಿಳೆಯರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆಯವರು ಇರಲೇಬೇಕು. ನಿವೃತ್ತಿ ವೇತನ, ಆರೋಗ್ಯ ಸೌಲಭ್ಯ ಒದಗಿಸಬೇಕೆಂದರು. ಸಿಐಟಿಯು ಜಿಲ್ಲಾಧ್ಯಕ್ಷ ಬಾಲಾಜಿರಾವ್‌, ಪ್ರ.ಕಾರ್ಯದರ್ಶಿ ಜಯರಾಂ ಇದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.