Gundlupet; ಅಸ್ವಸ್ಥಗೊಂಡಿದ್ದ ಮರಿಯಾನೆ ಚಿಕಿತ್ಸೆ ಫಲಿಸದೆ ಮೃತ್ಯು

Team Udayavani, Aug 28, 2023, 6:17 PM IST

1—–sAS

ಗುಂಡ್ಲುಪೇಟೆ(ಚಾಮರಾಜನಗರ): ತಲೆಗೆ ಗಾಯವಾಗಿ ಅಸ್ವಸ್ಥಗೊಂಡಿದ್ದ ಮರಿ ಗಂಡಾನೆಯೊಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕರೆ ವಲಯ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಉಪ ವಿಭಾಗದ ಕುಂದುಕರೆ ವಲಯ ವ್ಯಾಪ್ತಿಯ ಹೊನ್ನೆಮರದ ತಿಟ್ಟಿನಿಂದ ಡೊಂಕಿದಾರಿ ಡಿ ಲೈನ್‍ನ ಆಲದಮರದ ತಿರುವಿನಲ್ಲಿ ಆ.24ರಂದು ಸುಮಾರು 3-4 ವರ್ಷದ ಗಂಡಾನೆ ಮರಿಯೊಂದು ಅಸ್ವಸ್ಥಗೊಂಡು ನಿತ್ರಾಣದಿಂದ ಜಾನುವಾರು ತಡೆ ಕಂದಕ ನಿಂತಿತ್ತು. ಇದನ್ನು ಗಸ್ತು ಸಮಯದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಗಮನಿಸಿ ವಲಯ ಅರಣ್ಯಾಧಿಕಾರಿ ದೀಪಾ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ಗಮನಕ್ಕೆ ತಂದಿದ್ದಾರೆ.

ತತ್ ಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ಅಸ್ವಸ್ಥತೆಯಿಂದ ನಿತ್ರಾಣಗೊಂಡು ಕಂದಕದಲ್ಲಿ ನಿಂತಿದ್ದು ಗಂಡಿ ಮರಿಯಾನೆ ತಲೆಗೆ ಗಾಯವಾಗಿರುವುದನ್ನು ಗಮನಿಸಿ ಇಲಾಖಾ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಅವರನ್ನು ಬರಮಾಡಿಕೊಂಡು ಚಿಕಿತ್ಸೆ ಕೊಡಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟು, ಆನೆಯ ಚಲನವಲನದ ಮೇಲೆ ನಿಗಾ ವಹಿಸಿ ಗಮನಿಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿತ್ತು. ನಂತರ ಆ.27ರಂದು ಮತ್ತೆ ಕಂದಕಕ್ಕೆ ಇಳಿದು ನಿತ್ರಾಣಗೊಂಡಿದ್ದ ಮರಿ ಆನೆಗೆ ಇಲಾಖಾ ಪಶು ವೈದ್ಯಾಧಿಕಾರಿ ಚಿಕಿತ್ಸೆ ಕೊಟ್ಟು ಕಬ್ಬು, ಬಾಳೆ, ಜೋಳಗಳನ್ನು ಆಹಾರವಾಗಿ ನೀಡಿದ್ದರು. ಆದರೆ ಆನೆಯು ಆಹಾರ ಸೇವಿಸಲಾಗದೆ ಹಾಗೂ ಚಿಕಿತ್ಸೆಗೆ ಸ್ಪಂದಿಸದೇ ಆ.28ರ ಮಧ್ಯಾಹ್ನ ಮೃತಪಟ್ಟಿದೆ ಎಂದು ಬಂಡೀಪುರ ಅರಣ್ಯಾಧಿಕಾರಿ ಡಾ.ಪಿ.ರಮೇಶಕುಮಾರ್ ಮಾಹಿತಿ ನೀಡಿದ್ದಾರೆ.

ನಂತರ ಬಂಡೀಪುರ ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಕಳೆಬರವನ್ನು ನಿಯಮಾನುಸಾರ ಅರಣ್ಯ ಪ್ರದೇಶದಲ್ಲಿ ವನ್ಯಪ್ರಾಣಿಗಳ ಆಹಾರಕ್ಕಾಗಿ ಬಿಡಲಾಯಿತು.

ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಕುಂದುಕೆರೆ ವಲಯದ ವಲಯ ಅರಣ್ಯಾಧಿಕಾರಿ ಡಿ.ಶ್ರೀನಿವಾಸ, ಇಲಾಖಾ ಪಶು ವೈಧ್ಯಾಧಿಕಾರಿ ಡಾ.ಮಿರ್ಜಾ ವಾಸೀಂ, ಆರ್.ರಘುರಾಂ, ಉಪ ವಲಯ ಅರಣ್ಯಾಧಿಕಾರಿ ಬಿ.ಮನೋಹರ, ಗಸ್ತು ವನಪಾಲಕ ಡಿ.ಮಹೇಶ, ವಿಶ್ವನಾಥ ಹಾಗೂ ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.