ನನ್ನ ಮೇಲಿನ ದ್ವೇಷಕ್ಕಾಗಿ ಜನರಿಗೆ ತೊಂದರೆ ಕೊಡಬೇಡಿ: ಅಲೋಕ್ ಮೋಹನ್ ವಿರುದ್ಧ ಎಚ್ ಡಿಕೆ ಗರಂ
Team Udayavani, Apr 24, 2020, 3:07 PM IST
ಮೈಸೂರು: ನನ್ನ ಮೇಲಿನ ದ್ವೇಷಕ್ಕಾಗಿ ಜನರಿಗೆ ತೊಂದರೆ ಕೊಡಬೇಡಿ ಎಂದು ಬಂಧಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ ಪ್ರಕರಣದ ಬಗ್ಗೆ ಮಾತನಾಡಿದ ಎಚ್ ಡಿಕೆ, ನಾನು ಮುಖ್ಯಮಂತ್ರಿ ಆಗಿದ್ದಾಗ ಅಲೋಕ್ ಮೋಹನ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಬೇಕೆಂದು ಪ್ರಯತ್ನಿಸಿದ್ದರು. ಅವರ ಹಿನ್ನೆಲೆ ಗೊತ್ತಿದ್ದ ಕಾರಣಕ್ಕೆ ನಾನು ನೇಮಕ ಮಾಡಲಿಲ್ಲ. ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಹೀಗೆಲ್ಲ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನನ್ನ ಮೇಲಿನ ದ್ವೇಷಕ್ಕೆ ಈ ರೀತಿ ಮಾಡಿದ್ದಾರೆ ಅನ್ನಿಸುತ್ತೆ. ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದರೆ ಕೊಟ್ಟಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು. ನಾನು ಈಗಾಗಲೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಹೇಳಿದ್ದೇನೆ. ಇಂತಹ ಅಧಿಕಾರಿಗಳಿಂದಲೇ ಸರ್ಕಾರ ಸಾರ್ವಜನಿಕವಾಗಿ ಪದೇ ಪದೇ ಮುಜುಗರ ಅನುಭವಿಸುತ್ತಿದೆ ಎಂದರು.
ಪ್ರತಿಪಕ್ಷ, ಮಾಧ್ಯಮ ಸೇರಿದಂತೆ ಎಲ್ಲರೂ ಸರ್ಕಾರಕ್ಕೆ ಬೆಂಬಲ ಕೊಡುತ್ತಿದ್ದಾರೆ. ಆದರೆ ಸರ್ಕಾರ ಪದೇ ಪದೇ ತಪ್ಪು ಮಾಡಿದರೆ ಬೆಂಬಲ ನಿಲ್ಲಿಸಿ, ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ