ಸಾಂಸ್ಕೃತಿಕ ನಗರಿಯಲ್ಲಿ ಹನುಮನ ಮೆರವಣಿಗೆ

Team Udayavani, Dec 15, 2019, 3:00 AM IST

samskrutika

ಮೈಸೂರು: ಹನುಮಂತೋತ್ಸವ ಸಮಿತಿವತಿಯಿಂದ ಹನುಮ ಜಯಂತಿ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಆಂಜನೇಯ ಸ್ವಾಮಿಯ ಭವ್ಯ ಮೆರವಣಿಗೆ ನಡೆಯಿತು. ಆಂಜನೇಯ ಸ್ವಾಮಿಯ ಮೂರ್ತಿಗಳು ಹಾಗೂ ಉತ್ಸವ ಮೂರ್ತಿಗಳು, ನಂದಿಕಂಬ, ವೀರಗಾಸೆ, ಕಂಸಾಳೆ ತಮಟೆ, ನಗಾರಿ, ಕೀಲು ಕುದುರೆ ಮುಂತಾದ ಕಲಾತಂಡಗಳ ಜೊತೆಗೆ ವೈಭವದ ಮೆರವಣಿಗೆ ನಡೆಯಿತು.

ಎಲ್ಲರಿಗೂ ಒಳಿತು ಮಾಡಲಿ: ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಹನುಮ ಜಯಂತಿ ಮೆರವಣಿಗೆಗೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಬೆಳ್ಳಿ ರಥದಲ್ಲಿದ್ದ ಆಂಜನೇಯ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ ಹನುಮಜಯಂತಿಯ ಶುಭಾಶಯಗಳು. ಹನುಮಾನ್‌ ಸ್ವಾಮಿ ಎಲ್ಲರಿಗೂ ಆಯುರಾರೋಗ್ಯವನ್ನು ಕೊಟ್ಟು ಕಾಪಾಡಲಿ, ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹಾರೈಸಿದರು.

ತುಂಬಾ ಖುಷಿ ತಂದಿದೆ: ಚಲನಚಿತ್ರ ನಟ ವಸಿಷ್ಠ ಮಾತನಾಡಿ, ಮೈಸೂರು ಮಹಾರಾಜರಿಂದ ಹನುಮಜಯಂತಿ ಮೆರವಣಿಗೆಗೆ ಚಾಲನೆ ಸಿಕ್ಕಿರುವುದು ಬಹಳ ಖುಷಿ ನೀಡಿದೆ. ಈ ರೀತಿಯ ಕಾರ್ಯಕ್ರಮ ಹುಣಸೂರಿನಲ್ಲಿ ನಡೆದಿತ್ತು. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವುದು ತುಂಬಾ ಖುಷಿ ನೀಡಿದೆ ಎಂದರು.

ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿ ಮೆರವಣಿಗೆಯು ಅಶೋಕ ರಸ್ತೆ, ನ್ಯೂ ಸಯ್ನಾಜಿ ರಾವ್‌ ರಸ್ತೆ, ಇರ್ವಿನ್‌ ರಸ್ತೆ, ದೇವರಾಜ ಅರಸು ರಸ್ತೆ, ನಾರಾಯಣ ಶಾಸ್ತ್ರಿ ರಸ್ತೆ, ಚಾಮರಾಜ ಜೋಡಿ ರಸ್ತೆ ಮೂಲಕ ಸಾಗಿ ಮಹಾರಾಜ ಕಾಲೇಜು ಮೈದಾನದ ಬಳಿ ಸಮಾಪ್ತಿಗೊಂಡಿತು.

ಮೆರವಣಿಗೆಯಲ್ಲಿ ಕೇಸರಿ ಬಾವುಟಗಳನ್ನು ಹಿಡಿದಿದ್ದ ಯುವ ಜನರು ಜೈ ಶ್ರೀರಾಮ್‌, ಜೈ ಹನುಮಾನ್‌ ಘೋಷಣೆಗಳನ್ನು ಮೊಳಗಿಸಿದರು. ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಮೆರವಣಿಗೆಯಲ್ಲಿ ಬಿಜೆಪಿಯ ಶಾಸಕರು, ನಗರಪಾಲಿಕೆ ಸದಸ್ಯರು, ಮಾಜಿ ಸದಸ್ಯರು ಸೇರಿದಂತೆ ವಿವಿಧ ಪಕ್ಷಗಳ-ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಮೈಸೂರು ಹನುಮಂತೋತ್ಸವ ಸಮಿತಿಯ ಮುಖಂಡರು, ಸದಸ್ಯರುಗಳು ಭಾಗವಹಿಸಿದ್ದರು.

ಮೆರವಣಿಗೆ ಸಾಗುವ ಮಾರ್ಗ ಹಾಗೂ ವೃತ್ತಗಳನ್ನು ಕೇಸರಿ ತೋರಣ ಹಾಗೂ ಧ್ವಜಗಳಿಂದ ಸಿಂಗರಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್‌ ಬಂದೋಬಸ್ತ್ ಹಾಕಲಾಗಿತ್ತು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.