Udayavni Special

ಪಾರಂಪರಿಕ ಕಟ್ಟಡ: ಜನಾಭಿಪ್ರಾಯ ಸಂಗ್ರಹ


Team Udayavani, Feb 20, 2019, 7:30 AM IST

m5-paramparika.jpg

ಮೈಸೂರು: ಮೈಸೂರಿನ ದೇವರಾಜ ಮಾರುಕಟ್ಟೆಯನ್ನು ನಂಬಿಕೊಂಡು ಹಲವಾರು ವ್ಯಾಪಾರಸ್ಥರು ತಮ್ಮ ಬದುಕನ್ನು ನಡೆಸುತ್ತಿದ್ದಾರೆ ಹಾಗೂ ಸಾವಿರಾರು ಜನರು ಪ್ರತಿನಿತ್ಯ ಅಗತ್ಯ ವಸ್ತುಗಳನ್ನು ಕೊಳ್ಳಲು ಆಗಮಿಸುವ ಸ್ಥಳವಾದ್ದರಿಂದ ಸಾರ್ವಜನಿಕರ ಸುರಕ್ಷತೆ ಕಾಪಾಡುವುದು ನನ್ನ ಮುಖ್ಯ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಮಂಗಳವಾರ ಬೆಳಗ್ಗೆ ನಗರದ ದೇವರಾಜ ಮಾರುಕಟ್ಟೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು, ಮೈಸೂರು ರಾಜಮನೆತನದವರು ನಿರ್ಮಿಸಿರುವ ಹಲವಾರು ಪಾರಂಪರಿಕ ಕಟ್ಟಡಗಳು ಇಂದು ಮಳೆ ಬಂದರೆ ಕುಸಿಯುತ್ತಿವೆ. ಇದರಿಂದ ಸಾರ್ವಜನಿಕರು ಆತಂಕದಲ್ಲಿ ಓಡಾಡುವಂತಾಗಿದೆ. ಹೀಗಾಗಿ ಇದನ್ನು ಖುದ್ದು ವೀಕ್ಷಣೆ ಮಾಡಿ ಇವುಗಳ ಉಳಿವಿಗೆ ಕ್ರಮ ಕೈಗೊಳ್ಳಲು ಬಂದಿರುವುದಾಗಿ ತಿಳಿಸಿದರು.

ಮೈಸೂರು ನಗರವು ಪಾರಂಪರಿಕ ಕಟ್ಟಡಗಳ ತಾಣವಾಗಿದೆ. ಹಾಗಾಗಿ ಈ ಕಟ್ಟಡಗಳನ್ನು ನೆಲಸಮಗೊಳಿಸುವುದು ಜನರಿಗೆ ಇಷ್ಟವಿಲ್ಲ ಹಾಗೂ ಸರ್ಕಾರದ ಉದ್ದೇಶವು ಸಹ ಆಗಿರುವುದಿಲ್ಲ. ಈ ಕುರಿತು ಮುಂದಿನ ದಿನಗಳಲ್ಲಿ ನಾಗರಿಕರ ಸಭೆಯನ್ನು ಕರೆದು ಸಾರ್ವಜನಿಕರ ಮತ್ತು ತಜ್ಞರ ಅಭಿಪ್ರಾಯವನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು.

ನಮಗೆ ಕಟ್ಟಡ ಒಡೆಯುವ ಉದ್ದೇಶವಿಲ್ಲ. ಪಾರಂಪರಿಕ ಕಟ್ಟಡಗಳು ಉಳಿಯಬೇಕು ಹಾಗೂ ಸುಭದ್ರವಾಗಬೇಕು ಮತ್ತು ಸಾರ್ವಜನಿಕರು ಸುರಕ್ಷತೆಯಿಂದ ಇರುವ ಹಾಗೆ ಈ ಕಟ್ಟಡಗಳು ಮರು ಜೀವ ಪಡೆದುಕೊಳ್ಳಬೇಕು. ಇದಕ್ಕಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಸೂಚಿಸಿದ್ದೇನೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್‌, ಮೈಸೂರು ಮಹಾ ನಗರಪಾಲಿಕೆ ಮೇಯರ್‌ ಪುಷ್ಪಲತಾ ಜಗನ್ನಾಥ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು. 

ಶಾಸಕ ನಾಗೇಂದ್ರ ಗರಂ: ದೇವರಾಜ ಮಾರುಕಟ್ಟೆ ವೀಕ್ಷಣೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಆಗಮಿಸುವ ವಿಚಾರವನ್ನು ಅಧಿಕಾರಿಗಳು ಸ್ಥಳೀಯ ಶಾಸಕರಾದ ಬಿಜೆಪಿಯ ಎಲ್‌.ನಾಗೇಂದ್ರ ಅವರಿಗೆ ತಿಳಿಸಿರಲಿಲ್ಲ. ಹೀಗಾಗಿ ವಿಷಯ ತಿಳಿದು ಸ್ಥಳಕ್ಕೆ ಬಂದ ಶಾಸಕರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಟಾಪ್ ನ್ಯೂಸ್

congress

ಅಲ್ಪಸಂಖ್ಯಾತರ ಕಾಳಜಿ ಎಚ್ ಡಿಕೆಗೆ ಫಲ ನೀಡುವುದಿಲ್ಲ: ಕೈ ನಾಯಕರು ಕಿಡಿ

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

dinesh-gu

ಭಾಗವತ್‌ರ ಹೇಳಿಕೆ ಅರ್ಚಕರ ಬದುಕಿಗೆ ಕೊಳ್ಳಿ‌ ಇಡಲಿದೆ : ದಿನೇಶ್ ಗುಂಡೂರಾವ್

vghggy

ಇನ್ಮುಂದೆ ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ !

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

hjguyu

ಜಂಬೂ ಸವಾರಿ ಸಂಪನ್ನದ ಬೆನ್ನಲ್ಲೆ ಮೈಸೂರಿನಲ್ಲಿ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು

MUST WATCH

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಹೊಸ ಸೇರ್ಪಡೆ

chikkamagalore news

ಕಾಫಿನಾಡಲ್ಲಿ ಪ್ರವಾಸಿ ತಾಣಕ್ಕೆ ಮುಗಿ ಬಿದ್ದ ಜನ

congress

ಅಲ್ಪಸಂಖ್ಯಾತರ ಕಾಳಜಿ ಎಚ್ ಡಿಕೆಗೆ ಫಲ ನೀಡುವುದಿಲ್ಲ: ಕೈ ನಾಯಕರು ಕಿಡಿ

jgjuyuy

3ನೇ ಬಾರಿ ಇಡಿ ವಿಚಾರಣೆಗೆ ಬಾರದ ಜಾಕ್ವೆಲಿನ್‌! 

shivamogga news

ಸಿದ್ದು ಅಲ್ಪಸಂಖ್ಯಾತರಿಗೆ ಉತ್ತರ ನೀಡಲಿ: ಎಚ್ಡಿಕೆ

hampi news

ಹಂಪಿಗೆ ಹರಿದು ಬಂದ ಜನಸಾಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.