Udayavni Special

ಸ್ವಾಮಿನಾಥನ್‌ ವರದಿ ಜಾರಿಗೆ ಒತ್ತಾಯಿಸಿ ಹೆದ್ದಾರಿ ಬಂದ್‌


Team Udayavani, Aug 5, 2017, 12:33 PM IST

mys4.jpg

ಮೈಸೂರು: ರೈತರ ಕೃಷಿ ಸಾಲ ಮನ್ನಾ ಹಾಗೂ ಕೃಷಿ ಉತ್ಪನ್ನಗಳಿಗೆ ಡಾ. ಎಂ.ಎಸ್‌.ಸ್ವಾಮಿನಾಥನ್‌ ವರದಿ ಜಾರಿ ಮೂಲಕ ವೈಜಾnನಿಕ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸಿ ರಾಷ್ಟ್ರೀಯ ಕಿಸಾನ್‌ ಮಹಾಸಂಘದ ಆಶ್ರಯದಲ್ಲಿ ದೇಶಾದ್ಯಂತ 153ಕ್ಕೂ ಹೆಚ್ಚು ರೈತ ಸಂಘಟನೆಗಳ ವತಿಯಿಂದ ಆ.9ರಂದು ಹೆದ್ದಾರಿ ಬಂದ್‌ ಮಾಡಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಬಂದ್‌ ಮಾಡಲಾಗುವುದು. ಸರ್ಕಾರ ಪೊಲೀಸರ ಮೂಲಕ ಚಳವಳಿ ಹತ್ತಿಕ್ಕಲು ಯತ್ನಿಸಿದರೆ ಜೈಲ್‌ ಭರೋ ಮಾಡಲಾಗುವುದು ಎಂದು ಎಚ್ಚರಿಸಿದರು.

ರೈತರ ನೈಜ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫ‌ಲವಾಗಿರುವ ಸರ್ಕಾರಗಳು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ಬಿಂಬಿಸಿ, ಜನರನ್ನು ಪ್ರಚೋದಿಸಿ ರಾಜಕಾರಣ ಮಾಡುವ ಮೂಲಕ ಹೊಣೆಗೇಡಿತನ ತೋರಿಸುತ್ತಿವೆ. ಆದ್ದರಿಂದ ರೈತರು ಹಳ್ಳಿ ಹಳ್ಳಿಗಳಲ್ಲಿ ಶಾಂತಿಯುತವಾಗಿ ಸ್ವಯಂ ಪ್ರೇರಿತರಾಗಿ ಚಳವಳಿ ನಡೆಸಿ, ಸರ್ಕಾರಗಳ ಕಣ್ಣು ತೆರೆಸಲು ದೇಶಾದ್ಯಂತ ಏಕಕಾಲದಲ್ಲಿ ಹೆದ್ದಾರಿ ಬಂದ್‌ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದರು.

ಸತತ ಬರಗಾಲದಿಂದ ರೈತರು ತತ್ತರಿಸಿದ್ದು, ಈ ಬಾರಿಯೂ ಮಳೆ ಇಲ್ಲದೆ ಜಲಾಶಯಗಳು ಬರಿದಾಗಿವೆ. ರಾಜ್ಯ ಸರ್ಕಾರ ಮಾಡಿರುವ ಸಾಲಮನ್ನಾ ರೈತರ ಕಣ್ಣೊರೆಸುವ ತಂತ್ರವಾಗಿದ್ದು ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಸಕ್ತ ಸಾಲಿನಲ್ಲಿ ಬೆಳೆ ತೆಗೆಯಲು ನೀರಿಲ್ಲದ ಕಾರಣ ಬೆಳೆ ನಷ್ಟದ ಬದಲಿಗೆ, ಬರ ನಷ್ಟ ಪರಿಹಾರ ಘೋಷಿಸಿ ರೈತ ಕುಟುಂಬದ ನಿರ್ವಹಣೆಗಾಗಿ ಬಡ್ಡಿ ರಹಿತ ಸಾಲ ನೀಡುವ ಯೋಜನೆ ಜಾರಿಗೊಳಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ಎಸ್‌ಎಪಿ ಬೆಲೆ ನಿರ್ಧಾರವಾಗದ ಕಾರಣ ಕಾರ್ಖಾನೆಗಳು ರೈತರ ಕಬ್ಬಿಗೆ ಅಂತಿಮ ಕಂತಿನ ಹಣ ಪಾವತಿಸಿಲ್ಲ. ಮುಂದಿನ ಸಾಲಿಗೂ ದರ ನಿಗಧಿಯಾಗದೆ ರೈತರಿಗೆ ತೊಂದರೆಯಾಗಿದೆ, ತಕ್ಷಣವೇ ದರ ನಿಗಧಿಗೊಳಿಸಬೇಕೆಂದರು.

ಜಲಾಶಯಗಳಲ್ಲಿ ಈಗಿರುವ ನೀರನ್ನು ಕೆರೆ ಕಟ್ಟೆಗಳಿಗೆ ತುಂಬಿಸಿ, ನಾಲೆಗಳಿಗೆ ಬಿಡುವ ಮೂಲಕ ಅಂತರ್ಜಲ ಹೆಚ್ಚಿಸಲು ಸರ್ಕಾರ ಮುಂದಾಗಬೇಕು. ರಾಜ್ಯದ ರೈತರ ನೈಜ ಸಮಸ್ಯೆಗಳನ್ನು ಬಗೆಹರಿಸಲು ವಿಫ‌ಲವಾಗಿರುವ ಸಿಎಂ ಸಿದ್ದರಾಮಯ್ಯ  ತಮ್ಮ ತಪ್ಪು ಮುಚ್ಚಿಕೊಳ್ಳಲು ತಮಿಳುನಾಡಿಗೆ ಕದ್ದು ಮುಚ್ಚಿ ನೀರು ಬಿಡುತ್ತಿದ್ದಾರೆ. ಇವರು ರಾಜ್ಯದ ಮುಖ್ಯಮಂತ್ರಿಯೋ, ತಮಿಳುನಾಡಿನ ಮುಖ್ಯಮಂತ್ರಿಯೋ ಎಂಬುದು ತಿಳಿಯುತ್ತಿಲ್ಲ ಎಂದು ಲೇವಡಿ ಮಾಡಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್‌, ಜಿಲ್ಲಾ ಸಂಚಾಲಕ ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌, ಬರಡನಪುರ ನಾಗರಾಜ್‌ ಇದ್ದರು.

ಟಾಪ್ ನ್ಯೂಸ್

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

shrikrishna gmail com movie review

ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

hjguyu

ಜಂಬೂ ಸವಾರಿ ಸಂಪನ್ನದ ಬೆನ್ನಲ್ಲೆ ಮೈಸೂರಿನಲ್ಲಿ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು

ಉದಯವಾಣಿ ಫಲಶ್ರುತಿ

ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಕಾಯಕಲ್ಪ ಭಾಗ್ಯ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ ಚಾಲನೆ

ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು‌ ಪ್ರಶಸ್ತಿ

ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು‌ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.