ಸಾಲ ವಸೂಲಾತಿಗೆ ಗೂಂಡಾ ವರ್ತನೆ: ಪ್ರತಿಭಟನೆ

Team Udayavani, Jan 23, 2020, 3:00 AM IST

saala-vasula

ಮೈಸೂರು: ರೈತರಿಂದ ಟ್ರ್ಯಾಕ್ಟರ್‌ ಸಾಲ ವಸೂಲಾತಿ ಮಾಡಲು ಬ್ಯಾಂಕ್‌ ಅಧಿಕಾರಿಗಳ ಗೂಂಡಾಗಳಂತೆ ವರ್ತಿಸುತ್ತಿರುವುದನ್ನು ಖಂಡಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ‌ ಪ್ರತಿಭಟನೆ ನಡೆಯಿತು. ನಗರದ ನಜರ್‌ಬಾದ್‌ನಲ್ಲಿರುವ ಜಿಲ್ಲಾ ಪಿಕಾರ್ಡ್‌ ಬ್ಯಾಂಕ್‌ ಬಳಿ ಬುಧವಾರ ಸಮಾವೇಶಗೊಂಡ ನೂರಾರು ರೈತರು, ಬ್ಯಾಂಕ್‌ ಅಧಿಕಾರಿಗಳ ವರ್ತನೆ ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ರೈತರ ಬೆಳೆಸಾಲ ಮನ್ನಾ ಮಾಡಿ ಇತರೆ ಸಾಲಗಳನ್ನು ಮನ್ನಾ ಮಾಡುವುದಾಗಿ ಘೋಷಣೆ ಮಾಡಿತ್ತು. ಅಲ್ಲದೇ ರೈತರು ಬರಗಾಲ ಹಾಗೂ ಅತಿವೃಷ್ಟಿ ಹೊಡೆತಕ್ಕೆ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲ ತೀರಿಸುವುದಾದರೂ ಹೇಗೆ?

ಈಗ ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲ ವಸೂಲಾತಿಗಾಗಿ ನೋಟಿಸ್‌ ನೀಡಿದ್ದು, ಪಿಕಾರ್ಡ್‌ ಬ್ಯಾಂಕ್‌ ಅಧಿಕಾರಿಗಳು ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದ್ದಾರೆ. ಇದು ಖಂಡನೀಯ ಎಂದು ಕಿಡಿಕಾರಿದರು. ವಸೂಲಾತಿ ತಂಡ ಖಾಲಿ ಚೆಕ್‌ ಅನ್ನು ರೈತರಿಗೆ ವಾಪಸ್‌ ನೀಡಬೇಕು. ವಸೂಲಾತಿಗಾಗಿ ದಬ್ಟಾಳಿಕೆ, ಗುಂಡಾವರ್ತನೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ವಿಳಂಬ: ಭತ್ತ ಖರೀದಿ ಕೇಂದ್ರ ಆರಂಭಿಸುವ ಕಾರ್ಯ ವಿಳಂಬ ಮಾಡುವುದು ಕುತಂತ್ರದ ನೀತಿಯಾಗಿದೆ. ರೈತರ ಭತ್ತ ಕಡಿಮೆ ಬೆಲೆಗೆ ಮಾರಾಟ ಮಾಡಿ ಖಾಲಿಯಾಗಿದೆ. ಸರ್ಕಾರದ ಇಂತಹ ನೀತಿಯಿಂದಲೂ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಮೋಜು: ಜಲಪಾತೋತ್ಸವ ಮಾಡುವ ಮೋಜಿನ ಕಾರ್ಯಕ್ರಮಕ್ಕೆ ಬದಲಾಗಿ ಅನವಶ್ಯಕವಾಗಿ ನೀರನ್ನು ತಮಿಳುನಾಡಿಗೆ ಹರಿಸುವ ಬದಲು ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಹರಿಸಿ ಕೆರೆಕಟ್ಟೆಗಳನ್ನು ತುಂಬಿಸಿ. ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಕಲ್ಪಿಸಿ ಎಂದು ಒತ್ತಾಯಿಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸಾಲ ವಸೂಲಾತಿ ನೆಪದಲ್ಲಿ ಗೂಂಡಾ ವರ್ತನೆ ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಜಿಲ್ಲಾ ಕಾರ್ಯದರ್ಶಿ ಕಿರಗಸೂರ್‌ ಶಂಕರ್‌, ಕುರುಬೂರು ಸಿದ್ದೇಶ್‌, ರಂಗಸಮುದ್ರ ಸುರೇಶ್‌, ಬಿ.ಪಿ.ಪರಶಿವಮೂರ್ತಿ, ರಂಗಸಮುದ್ರ ರೇವಣ್ಣ, ರಂಗರಾಜ್‌, ಮಹದೇವ ಪ್ರಸಾದ್‌ ಇತರರಿದ್ದರು.

ಬಜೆಟ್‌ನಲ್ಲಿ ಸಾಲಮನ್ನಾ ಗೊಂದಲ ನಿವಾರಿಸಿ: ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ರಾಜ್ಯ ಸರ್ಕಾರ ಮಾರ್ಚ್‌ನಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ರೈತರ ಸಾಲಮನ್ನಾ ಗೊಂದಲ ನಿವಾರಿಸಬೇಕು. ಕೃಷಿ ಉತ್ಪನ್ನಗಳಿಗೆ ಸ್ವಾಮಿನಾಥನ್‌ ವರದಿಯಂತೆ ಬೆಂಬಲ ಬೆಲೆ ನಿಗದಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ತು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.