ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

Team Udayavani, Oct 20, 2021, 10:02 PM IST

hunasooru news

ಹುಣಸೂರು:ಸರಕಾರದ ನಿರ್ದೇಶನದಂತೆ ಎಲ್ಲರಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸುವ ಸಲುವಾಗಿ  ಗ್ರಾಮ ಪಂಚಾಯ್ತಿ  ಪಿಡಿಓ ಸೇರಿದಂತೆ ಸಿಬ್ಬಂದಿಗಳು ಮನೆ ಮನೆ ಭೇಟಿ, ತಮಟೆ ಹೊಡೆಯುವ ಮೂಲಕ  ಜನರ ಮನವೊಲಿಸುತ್ತಿದ್ದಾದ್ದರೂ ಕಾಡಂಚಿನ ಹಾಡಿಗಳ ಮಂದಿ ಮಾತ್ರ ತಲೆಕೆಡಿಸಿಕೊಂಡಿಲ್ಲ. ಮತ್ತೊಂದೆಡೆ ನಗರದಲ್ಲೇ 10 ಸಾವಿರದಷ್ಟು ಮಂದಿ ಲಸಿಕೆ ಪಡೆಯಬೇಕಿದೆ.

ಕೊರೋನಾ 3 ನೇ ಅಲೆಯ ಪ್ರಭಾವವನ್ನು ತಗ್ಗಿಸುವ ಸಲುವಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಲು ಸರಕಾರದ ಆದೇಶಕ್ಕೆ  ಪೂರಕವಾಗಿ ಹುಣಸೂರು ತಾಲೂಕು ಪಂಚಾಯಿತಿ ಪಣತೊಟ್ಟಿದ್ದು, ಇಓ.ಎಚ್.ಡಿ.ಗಿರೀಶ್ ರ ಸೂಚನೆಯಂತೆ 41 ಗ್ರಾಮ ಪಂಚಾಯಿತಿಗಳ ಪಿಡಿಓಗಳು ಆರೋಗ್ಯ-ಆಶಾ ಕಾರ್ಯಕರ್ತರ  ಸಹಕಾರದೊಂದಿಗೆ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸುವ ನಿಟ್ಟಿನಲ್ಲಿ ಬದ್ದತೆಯಿಂದ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿದೆ.

ವಾಹನ ವ್ಯವಸ್ಥೆ: ವ್ಯಾಕ್ಸಿನ್ ಹಾಕಿಸಿಕೊಳ್ಳಲು ಆರೋಗ್ಯ ಕೇಂದ್ರಕ್ಕೆ ಬಾರದವರಿಗಾಗಿ ಇದೀಗ ವಾಹನ ವ್ಯವಸ್ಥೆ ಸಹ ಮಾಡಿದ್ದು, ಮನೆಯಿಂದ ಆರೋಗ್ಯ ಕೇಂದ್ರಕ್ಕೆ ಕರೆ ತಂದು ಮನೆಗೆ ಬಿಡುವ ವ್ಯವಸ್ಥೆ ಮಾಡಲಾಗಿದೆ.

ಮನೆ ಮುಂದೆ ತಮಟೆ ಸದ್ದು;ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದ ಜನರನ್ನು ಮನವೊಲಿಸುವುದಕ್ಕಾಗಿ ಅಂತವರ ಮನೆ ಮುಂದೆ ತಮಟೆ ಚಳುವಳಿ ಮಾಡುವ ಮೂಲಕ ಎಚ್ಚರಿಸುವ ಕೆಲಸವು ನಡೆದಿದೆ ಜೊತೆಗೆ   ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದರಿಂದ ಅಂಗನವಾಡಿ ಕೇಂದ್ರ ಹಾಗೂ ಗ್ರಾಮದ ಪ್ರಮುಖ ಕೇಂದ್ರಗಳಲ್ಲಿ ಲಸಿಕೆ ನೀಡಲಾಯಿತು. ಆದರೂ ಸಹ ಮತ್ತಷ್ಟು ಜನರಲ್ಲಿ ಭಯವನ್ನಿಟ್ಟುಕೊಂಡಿದ್ದರಿಂದ ಅವರ ಮನವೊಲಿಸಿ ನಿರ್ಭೀತರನ್ನಾಗಿ ಮಾಡುವ ಉದ್ದೇಶದಿಂದ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರೇ ಸ್ವತಃ ಲಸಿಕೆ ಪಡೆಯುವ ಮೂಲಕ ಜನರಲ್ಲಿರುವ ಭಯವನ್ನು ಹೋಗಲಾಡಿಸುತ್ತಿದ್ದಾರೆ.

ಸವಾಲಾದ ಲಸಿಕಾಕರಣ: ಇನ್ನು ಗ್ರಾಮದ ಜನರನ್ನು ಆರೋಗ್ಯ ಕೇಂದ್ರಕ್ಕೆ ಕರೆಸಿಕೊಳ್ಳಲು ಸಾಕಷ್ಟು ಕ್ರಮ ವಹಿಸಿದ್ದು, ಪ್ರಾರಂಭದಲ್ಲಿ ಮೈಕ್ ಮೂಲಕ ಆಟೋ ಪ್ರಚಾರದ ಜೊತೆಗೆ ಸದಸ್ಯರು, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ವಾಟ್ಸ್ ಅಪ್ ಗ್ರೂಪ್ ಮೂಲಕ ನಿರ್ದಿಷ್ಟ ಸ್ಥಳಗಳಲ್ಲಿ ಲಸಿಕೆ ಹಾಕುವ ಮೂಲಕ ಜಾಗೃತಿ ಮೂಡಿಸುತ್ತಿರುವ ಪರಿಣಾಮ  ಕೆಲವು ಪಂಚಾಯ್ತಿ ವ್ಯಾಪ್ತಿಯಲ್ಲಿ ಶೇ.90ರಷ್ಟು ಜನರಿಗೆ ಲಸಿಕೆ ಹಾಕಲಾಗಿದ್ದರೆ, ಎನ್.ಜಿ.ಓ.ಗಳು, ಅಂಗನವಾಡಿ-ಆಶಾ ಕಾರ್ಯಕರ್ತೆಯರ ಮನವಿಗೆ ಇನ್ನೂ ಸಹ  ಹಾಡಿ ಮಂದಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

ನಗರದಲ್ಲಿ 10 ಸಾವಿರ ಮಂದಿ ಬಾಕಿ: ಆದರೆ ನಗರಸಭೆಯ ಎಲ್ಲಾ  ಸಿಬ್ಬಂದಿಗಳು ದೈನಂದಿನ ಕೆಲಸ ಬಿಟ್ಟು ನಿತ್ಯ ವಾರ್ಡ್ಗಳಲ್ಲಿ ಸುತ್ತಾಡಿ ವಾಹನಗಳ ಮೂಲಕ ಪ್ರಚುರ ಪಡಿಸುತ್ತಿದ್ದರೂ ಕೆಲ ವಾರ್ಡ್ಗಳಲ್ಲಿ ಸಿಬ್ಬಂದಿಗಳೊಂದಿಗೆ ಜನರು ಜಗಳಕ್ಕೆ ನಿಲ್ಲುತ್ತಿದ್ದಾರೆ, ಇನ್ನೂ ಸುಮಾರು 10 ಸಾವಿರ ಮಂದಿ ಲಸಿಕೆ ಪಡೆಯಬೇಕಿದೆ ಎನ್ನುತ್ತಿದ್ದಾರೆ ನಗರಸಭೆ ಆಯುಕ್ತ ರಮೇಶ್.

ಪ್ರತಿಯೊಬ್ಬರು ಲಸಿಕೆ ಪಡೆಯಿರಿ; ಕೊರೊನಾ ಮಹಾಮಾರಿ ವಿರುದ್ಧ ಹೋರಾಡುವ ಅಸ್ತ್ರವಾಗಿ ಲಸಿಕೆ ದೊರೆತಿದೆ. ಸರಕಾರ ಉಚಿತವಾಗಿ ಲಸಿಕೆ ನೀಡುತ್ತಿದ್ದು, ಪಡೆದುಕೊಳ್ಳುವುದು ಅತಿ ಮುಖ್ಯವಾಗಿದ್ದು,  ಕೊರೊನಾ ಮುಕ್ತ ದೇಶವನ್ನಾಗಿಸಲು ಎಲ್ಲರ ಸಹಕಾರ ಅತ್ಯವಶ್ಯ. ಗ್ರಾಮದ ಪ್ರತಿಯೊಬ್ಬರೂ ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಕು

ಇ ಓ.ಗಿರೀಶ್.

ಶಾಸಕರ ಎಚ್ಚರಿಕೆ; ಈಗಾಗಲೇ ಶಾಸಕ ಮಂಜುನಾಥರು  ಪಿಡಿಓ, ಕಂದಾಯ ಇಲಾಖಾಕಾರಿಗಳ ಸಭೆ ನಡೆಸಿದ್ದು, ಲಸಿಕಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ಸ್ಪಂದಿಸುತ್ತಿಲ್ಲವೆಂಬ ದೂರಿದ್ದು, ಸಮನ್ವಯತೆಯಿಂದ ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿ, ಸಹಕರಿಸದ ಸರಕಾರಿ ನೌಕರರ ವಿರುದ್ದ  ಜಿಲ್ಲಾಕಾರಿಗಳು ಸೂಕ್ತ ಕ್ರಮವಹಿಸಲಿದ್ದಾರೆಂದು ಎಚ್ಚರಿಸಿದ್ದಾರೆ. ಅಲ್ಲದೆ ತಾಲೂಕಿನ ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.