ಹುಣಸೂರು: ಹಾವು ಕಚ್ಚಿ ಯುವಕ ಸಾವು
Team Udayavani, Dec 19, 2020, 4:16 PM IST
ಹುಣಸೂರು: ಹಾವು ಕಚ್ಚಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕಿನ ಕಾಳಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಸಂತೋಷ್ (21) ಎಂದು ಗುರುತಿಸಲಾಗಿದೆ. ಈತ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದು, ಜಮೀನಿನಲ್ಲಿ ರಾಗಿ ಬೆಳೆ ಕಟಾವು ಮಾಡುವಾಗ ಘಟನೆ ಸಂಭವಿಸಿತ್ತು.
ಕೂಡಲೇ ಹನಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗಾಗಿ ದಾಖಲಿಸಲಾಗಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಕೆ. ಆರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಆದರೇ ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಮೃತಪಟ್ಟಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಎಚ್.ಪಿ ಮಂಜುನಾಥ್ ಮೈಸೂರಿನ ಶವಾಗಾರಕ್ಕೆ ಭೇಟಿ ನೀಡಿ, ಮೃತ ಯುವಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದನ್ನೂ ಓದಿ: ಬದಲಾದ ಜೀವನ ಶೈಲಿ, ಜಂಕ್ಫುಡ್ ಸಂಸ್ಕೃತಿ…ಇದು ಹೃದಯಾಘಾತಕ್ಕೆ ಕಾರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!