ಹುಣಸೂರು ಪಿಎಲ್‌ಡಿ ಬ್ಯಾಂಕ್: 35.55 ಲಕ್ಷ ನಷ್ಟ; 5.29ಕೋಟಿ ರೂ ಸಾಲ ಬಾಕಿ

ಸಾಲ ಮರುಪಾವತಿಗೆ ಅಧ್ಯಕ್ಷ ಶ್ರೀನಿವಾಸೇ ಗೌಡ ಮನವಿ

Team Udayavani, Sep 25, 2022, 5:52 PM IST

1-asdad

ಹುಣಸೂರು: ಪಿಎಲ್ ಡಿ.ಬ್ಯಾಂಕ್‌ವತಿಯಿಂದ 2022-23ನೇ ಸಾಲಿನಲ್ಲಿ ಕೃಷಿಕರಿಗೆ ಮೂರು ಕೋಟಿ ರೂ ಸಾಲ ಸೌಲಭ್ಯ ಕಲ್ಪಿಸಲು ಗುರಿ ಹಾಕಿಕೊಳ್ಳಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶ್ರೀನಿವಾಸೇಗೌಡ ತಿಳಿಸಿದರು.

ಬುಧವಾರದಂದು ಬ್ಯಾಂಕಿನ ಆವರಣದಲ್ಲಿ ನಡೆದ 2021-22ನೇ ಸಾಲಿನ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರೈತರಿಗೆ ಭೂಅಭಿವೃದ್ದಿ, ತಂತಿಬೇಲಿ, ಹೈನುಗಾರಿಕೆ, ತುಂತುರು ನೀರಾವರಿ, ತೆಂಗು, ಮಾವು, ರೇಷ್ಮೆ ತೋಟಗಳ ಭೂ ಅಭಿವೃದ್ದಿ ಹಾಗೂ ಕೃಷಿಯಾಂತ್ರಿಕರಣಕ್ಕೆ ಸಾಲ ಸೌಲಭ್ಯ ಒದಗಿಸಲಾಗುವುದು ಎಂದರು.

5.29ಕೋಟಿ ಸಾಲ ಬಾಕಿ
2022 ರ ಮಾರ್ಚ್ ಅಂತ್ಯಕ್ಕೆ ರೈತರಿಂದ ಶೇ 50.20ರಷ್ಟು ಮಾತ್ರ ವಸೂಲಿಯಾಗಿದ್ದು, 5.29 ಕೋಟಿ ಸಾಲ ಬಾಕಿ ಇದ್ದು, ಬ್ಯಾಂಕ್ ಪ್ರಸ್ತುತ 35.55 ಲಕ್ಷರೂ ನಷ್ಟದಲ್ಲಿದೆ. ಸಾಲ ವಸೂಲಿ ಶೇ.70 ರಷ್ಟಿದ್ದರೆ ಮಾತ್ರ ಕೇಂದ್ರ ಬ್ಯಾಂಕ್ ಹೊಸ ಸಾಲ ನೀಡಲಿದೆ. ಹೀಗಾಗಿ ಸಾಲ ಪಡೆದಿರುವ ರೈತರು ಸಕಾಲದಲ್ಲಿ ಮರುಪಾವತಿ ಮಾಡುವಂತೆ ಹಾಗೂ ರೈತರಿಗೆ ಮನವಿ ಮಾಡಿದರು.

ಸಾಲ ವಸೂಲಾತಿಗೆ ಕ್ರಮವೇನು
ಈ ವೇಳೆ ಹಲವು ಸದಸ್ಯರು ಆಹ್ವಾನ ಪತ್ರಿಕೆಯೊಂದಿಗೆ ಆಡಿಟ್ ವರದಿಯನ್ನು ಏಕೆ ಕಳುಹಿಸಿಲ್ಲ, ಐದು ಕೋಟಿ ಸಾಲ ಬಾಕಿ ವಸೂಲಾತಿಗೆ ಯಾವ ಕ್ರಮವಹಿಸಿದ್ದೀರಾ, ಏಕಿಷ್ಟು ಸಾಲ ಬಾಕಿ ಇದೆ ಎಂಬ ಪ್ರಶ್ನೆಗೆ ಕೋವಿಡ್-೧೯ನಿಂದಾಗಿ ಸರಕಾರದ ಸುತ್ತೋಲೆಯಂತೆ ವಸೂಲಿಗೆ ಕ್ರಮವಹಿಸಿರಲಿಲ್ಲಾ. ಕಳೆದ ಐದಾರು ತಿಂಗಳಿಂದ ಬಾಕಿ ವಸೂಲಾತಿಗೆ ಕ್ರಮವಹಿಸಲಾಗುತ್ತಿದೆ ಎಂದು ಅಧ್ಯಕ್ಷರು ಸಮಜಾಯಿಷಿ ನೀಡಿದರು.

ಮರಣ ನಿಧಿ ಸ್ಥಾಪನೆಗೆ ಒತ್ತಾಯ: ಸಂಘದ ಸದಸ್ಯರಾದ ಬಸವಲಿಂಗಯ್ಯ ಸಂಘದ ಸದಸ್ಯರ ನೆರವಿಗಾಗಿ ಮರಣ ನಿಧಿ ಸ್ಥಾಪಿಸಬೇಕೆಂಬ ಮನವಿಯನ್ನು ನಿರ್ದೇಶಕ ಬಿಳಿಕೆರೆ ಪ್ರಸನ್ನ ಸೇರಿದಂತೆ ಸದಸ್ಯರು ಬೆಂಬಲಿಸಿದರು. ಈ ವೇಳೆ ಮರಣ ನಿಧಿ ಸ್ಥಾಪಿಸುವುದಾಗಿ ಅಧ್ಯಕ್ಷರು ಪ್ರಕಟಿಸಿದರು.

ಸಭೆಯಲ್ಲಿ ಬ್ಯಾಂಕಿನ ಪ್ರಭಾರ ವ್ಯವಸ್ಥಾಪಕ ಮಹದೇವಸ್ವಾಮಿ ಆಡಿಟ್ ವರದಿ, 2021-22 ನೇ ಸಾಲಿನ ಲೆಕ್ಕಪತ್ರ ಮಂಡಿಸಿ, 2022-23 ನೇ ಸಾಲಿನ ಅಂದಾಜು ಆಯುವ್ಯಯ ಮಂಡಿಸಿ, ಸಭೆಯ ಅನುಮೋದನೆ ಪಡೆದರು.

ಸಭೆಯಲ್ಲಿ ಉಪಾದ್ಯಕ್ಷ ಸಿ.ಕುಮಾರ್, ನಿರ್ದೇಶಕರಾದ ದೇವರಾಜು, ರುದ್ರೇಗೌಡ, ಬಿಳಿಕೆರೆಪ್ರಸನ್ನ, ಹೇಮಂತಕುಮಾರ್, ಅಪ್ಪುಗೌಡ, ದೊಡ್ಡೇಗೌಡ, ಉದಯ್‌ಕುಮಾರ್, ರಾಮಕೃಷ್ಣೇಗೌಡ, ಸಿದ್ದನಾಯ್ಕ, ಲಕ್ಷ್ಮಮ್ಮ, ಸತ್ಯನಾರಾಯಣ, ಯಶೋದಮ್ಮ ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.