Hunsur; ಗಾಂಜಾ ಸಾಗಾಟ: ಮಾಲು ಸಹಿತ ಆರೋಪಿ ಬಂಧನ
Team Udayavani, Jun 21, 2023, 9:02 PM IST
ಹುಣಸೂರು: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಅರೋಪಿಯನ್ನು ನಗರ ಠಾಣೆ ಪೋಲಿಸರು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿರುವ ಘಟನೆ ನಡೆದಿದೆ.
ನಗರದ ವಿ.ಪಿ,ಬೋರೆ ನಿವಾಸಿ ಸೈಯದ್ ಕಲೀಂ ಬಂಧಿತ ಆರೋಪಿ. ನಗರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ದರ್ಮೇಂದ್ರ ಹಾಗೂ ಸಿಬಂದಿಗಳು ರತ್ನಪುರಿ ರಸ್ತೆಯ ಸಲೀಂ ಪ್ಯಾಲೆಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಂದ ಖಚಿತ ಮಾಹಿತಿ ಮೇರೆಗೆ ರತ್ನಪುರಿ ಕಡೆಯಿಂದ ನಗರಕ್ಕೆ ಬರುತ್ತಿದ್ದ ಸುಜುಕಿ ಬೈಕ್ನ್ನು ನಿಲ್ಲಿಸಲು ಪೊಲೀಸರು ಸೂಚಿಸುತ್ತಿದ್ದಂತೆ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಬೆನ್ನಟ್ಟಿ ನಿಲ್ಲಿಸಿ ತಪಾಸಣೆ ನಡೆಸಿದ ವೇಳೆ ಬೈಕಿನಲ್ಲಿ ಸುಮಾರು 950 ಗ್ರಾಂ.ನಷ್ಟು ಮಾರಾಟ ಮಾಡಲು ಹದಮಾಡಿದ್ದ ಗಾಂಜಾ ಪುಡಿ ಪತ್ತೆಯಾಗಿದ್ದು, ಬೈಕ್ ಸಹಿತ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಚರಣೆಯಲ್ಲಿ ಇನ್ಸ್ಪೆಕ್ಟರ್ ಧರ್ಮೆಂದ್ರ, ಪಿಎಸ್ ಐ ನಾಗಯ್ಯ, ಸಿಬಂದಿಗಳಾದ ಅನಿಲ್, ಮಂಜುನಾಥ್, ಚಾಲಕ ಅಲೀಂ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ