ಬಸ್ ನಿಲ್ದಾಣದ ಮೇಲಿನ ಗುಂಬಜ್ ನಾನೇ ತೆರವು ಮಾಡುತ್ತೇನೆ: ಪ್ರತಾಪ್ ಸಿಂಹ
Team Udayavani, Nov 15, 2022, 11:52 AM IST
ಮೈಸೂರು: ಬಸ್ ನಿಲ್ದಾಣದ ಮೇಲಿನ ಗುಂಬಜ್ ತೆರವಿಗೆ ನಾನು ನೀಡಿದ ಎರಡು ದಿನದ ಗಡುವು ಮುಗಿದಿದೆ. ಇನ್ನೂ ಎರಡು ದಿನ ಬಾಕಿ ಇದೆ. ಎರಡು ದಿನದಲ್ಲಿ ತೆರವು ಮಾಡದೆ ಇದ್ದರೆ ಮೊದಲೇ ಹೇಳಿದಂತೆ ನಾನೇ ತೆರವು ಮಾಡುತ್ತೇನೆ. ಬಸ್ ಸ್ಟ್ಯಾಂಡ್ ತೆರವು ಮಾಡವುದಿಲ್ಲ. ಬಸ್ ಸ್ಟ್ಯಾಂಡ್ ಮೇಲಿನ ಗುಂಬಜ್ ಮಾತ್ರ ತೆರವು ಮಾಡುತ್ತೇನೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳಿಕೆ ಕೊಡುವ ಮುನ್ನ ಬರೀ ಗುಂಬಜ್ ಇತ್ತು. ನಂತರ ರಾತ್ರೋರಾತ್ರಿ ಅದರ ಮೇಲೆ ಕಳಸ ಹೇಗೆ ಬಂತು? ಮೈಸೂರು ಅರಮನೆ ಮೇಲಿನ ಗೋಪುರಕ್ಕೂ ಮಸೀದಿ ಮೇಲಿನ ಗುಂಬಜ್ ಗೂ ವ್ಯತ್ಯಾಸ ಇಲ್ವಾ ಎಂದು ಪ್ರಶ್ನಿಸಿದರು.
ಅರಮನೆ ಗೋಪುರಕ್ಕೂ ಗುಂಬಜ್ ಗೂ ಹೋಲಿಕೆ ಮಾಡುವ ಮುನ್ನ ವಾಸ್ತುಶಿಲ್ಪ ಓದಿ ಕೊಳ್ಳಿ. ಅರಮನೆ ಗೋಪುರ ಇಂಡೋ- ಸಾರ್ಸೆನಿಕ್ ವಾಸ್ತುಶಿಲ್ಪದ್ದು. ಬಸ್ ಸ್ಟ್ಯಾಂಡ್ ಮೇಲೆ ಇವರು ಯಾವ ವಾಸ್ತುಶಿಲ್ಪ ಸೃಷ್ಟಿಸುತ್ತಾರೆ ಹೇಳಿ. ಗುಂಬಜ್ ಕಟ್ಟಿದ್ದು ಪ್ರಶ್ನಿಸದಿದ್ದರೆ ಅರ್ಧ ಚಂದ್ರವನ್ನು ಕಟ್ಟಿ ಬಿಡುತ್ತಿದ್ದರು. ಬಸ್ ಸ್ಟ್ಯಾಂಡ್ ಕಟ್ಟಿದ ಗುತ್ತಿಗೆದಾರ ತನ್ನ ಮೇಲೆ ಬೇಕಾದರೆ ಗುಂಬಜ್, ಮಿನಾರ್ ಕಟ್ಟಿಕೊಳ್ಳಲಿ ಎಂದು ಕಿಡಿಕಾರಿದರು.
ಇದನ್ನೂ ಓದಿ: ಕೆವೈಸಿ ಅಪ್‌ಡೇಟ್ ನೆಪದಲ್ಲಿ ನೌಕರನಿಗೆ 10 ಲಕ್ಷ ರೂ. ವಂಚನೆ
ಶಾಸಕ ರಾಮದಾಸ್ ಅವರು ಅರಮನೆ ಮಾದರಿಯಲ್ಲಿ 20 ಬಸ್ ಸ್ಟ್ಯಾಂಡ್ ಕಟ್ಟಲಿ. ನಾನು ಗುಂಬಜ್ ಬಗ್ಗೆ ಧ್ವನಿ ಎತ್ತಿದ್ದಕ್ಕೆ ರಾಮದಾಸ್ ಅವರು ಮೌನವಹಿಸಿದ್ದಾರೆ ಎಂದರೆ ಅದರ ಅರ್ಥ ನನ್ನ ಮಾತಿಗೆ ಅವರ ಸಮ್ಮತಿ ಇದೆ. ಅವರು ಹಿಂದುತ್ವದ ಹಿನ್ನೆಲೆಯಲ್ಲಿ ಬಂದವರು. ಬಹುಶಃ ಗುತ್ತಿಗೆದಾರ ಅವರ ದಾರಿ ತಪ್ಪಿಸಿದರೆ ಗೊತ್ತಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಂಬೈ ಇಂಡಿಯನ್ಸ್‌ಗೆ 4 ವಿಕೆಟ್ ಗೆಲುವು: ಸೋಲಿನೊಂದಿಗೆ ಡಬ್ಲೂಪಿಎಲ್ ಮುಗಿಸಿದ ಮಂಧನಾ ಪಡೆ
ಮೈಸೂರು ಪ್ರಾಂತಗಳಲ್ಲಿ ಚಾಂದ್ರಮಾನ ಯುಗಾದಿ ಹೆಚ್ಚು ಪ್ರಸಿದ್ಧ..ಚಿರನವೀನವಾದ ಪ್ರಾಚೀನ ಯುಗಾದಿ
ಬೆಂಜ್,ಮಾರುತಿ,ಬೈಕ್ ಮತ್ತು ಪರಾರಿ….ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ ಅಮೃತ್‌ಪಾಲ್
ಬಾಲಕಿ ಮೇಲೆ ಅತ್ಯಾಚಾರ: ಬಸ್ ಚಾಲಕನಿಗೆ 20 ವರ್ಷ ಜೈಲು
ಕ್ಲಸ್ಟರ್ ಹಂತದಲ್ಲೇ 5, 8ನೇ ತರಗತಿ ಮೌಲ್ಯಮಾಪನ