ಸಚಿವ ಸ್ಥಾನ ಕೊಟ್ಟರೆ ಉತ್ತಮವಾದ ಕೆಲಸ ಮಾಡುವೆ: ಎನ್.ಮಹೇಶ್
Team Udayavani, Jan 11, 2021, 1:40 PM IST
ಮೈಸೂರು: ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರುವುದಿಲ್ಲ ಹೇಳಿ. ಸಚಿವ ಸ್ಥಾನ ಕೊಟ್ಟರೆ ಉತ್ತಮವಾದ ಕೆಲಸ ಮಾಡುವೆ. ಆದರೆ ಕೊಡೋದು ಬಿಡೋದು ಅವರಿಗೆ ಬಿಟ್ಟಿದ್ದು ಎಂದು ಮೈಸೂರಿನ ಸುತ್ತೂರಿನಲ್ಲಿ ಕೊಳ್ಳೆಗಾಲ ಕ್ಷೇತ್ರದ ಬಿ.ಎಸ್.ಪಿ ಶಾಸಕ ಎನ್. ಮಹೇಶ್ ಹೇಳಿದರು.
ನನಗೆ ಸಚಿವ ಸ್ಥಾನ ಸಿಗುತ್ತದೆಯೋ ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಆದರೆ ನಾನು ಯಡಿಯೂರಪ್ಪನವರ ಜೊತೆ ಇರುವ ನಿರ್ಧಾರ ಮಾಡಿದ್ದೇನೆ ಎಂದರು.
ಇದನ್ನೂ ಓದಿ:ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಲು ಸಿದ್ದರಾಮಯ್ಯ ಬಿಜೆಪಿ ವಕ್ತಾರರೇ?: ಶೆಟ್ಟರ್
ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಇದೆ. ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟಿದ್ದು. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿ ಮಾಡುವೆ ಎಂದು ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟರು.