ಗ್ರಾಮೀಣ ಜನತೆ ಸಬಲರಾದರೆ ದೇಶ ಸದೃಢ 

Team Udayavani, Aug 29, 2017, 12:13 PM IST

mys2.jpg

ಮೈಸೂರು: ದೇಶದ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸದಿದ್ದರೆ ದೇಶ ಆರ್ಥಿಕವಾಗಿ ಸದೃಢಗೊಳ್ಳಲು ಸಾಧ್ಯವಿಲ್ಲ ಎಂದು ದಾವಣಗೆರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಸ್‌.ಇಂದುಮತಿ ಅಭಿಪ್ರಾಯಪಟ್ಟರು. ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದಿಂದ ಸೋಮವಾರ ಆಯೋಜಿಸಿದ್ದ “ಸುಸ್ಥಿರ ಗ್ರಾಮೀಣಾಭಿವೃದ್ಧಿಗೆ ಸವಾಲುಗಳು ಮತ್ತು ಅವಕಾಶಗಳು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಭಾರತ ಶೇ.70 ಗ್ರಾಮೀಣ ಪ್ರದೇಶಗಳನ್ನು ಹೊಂದಿರುವುದರಿಂದ ದೇಶದ ಅರ್ಥ ವ್ಯವಸ್ಥೆ ಗ್ರಾಮೀಣ ಪ್ರದೇಶಗಳನ್ನು ಅವಲಂಬಿಸಿದೆ. ಹೀಗಾಗಿ ಕೇವಲ ಶ್ರೀಮಂತ ಜನರ ಸಮಸ್ಯೆಗಳನ್ನು ಬಗೆಹರಿಸುವುದರಿಂದ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಾಧ್ಯವಿಲ್ಲ. ಆದರೆ ಪ್ರಸ್ತುತ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಆರ್ಥಿಕ ಪರಿಸ್ಥಿತಿ ಹಾನಿಗೊಳಗಾಗಿದೆ ಎಂದು ವಿಷಾದಿಸಿದರು.

ಪ್ರಸ್ತುತ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ನೀರು, ನೈರ್ಮಲ್ಯ ಸಮಸ್ಯೆಗಳನ್ನು ಮಾತ್ರ ಕೇಂದ್ರೀಕರಿಸಲಾಗುತ್ತಿದೆ. ಇದರ ಹೊರತಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಯಾವುದೇ ಸಮಸ್ಯೆಗಳ ಬಗ್ಗೆ ಹೆಚ್ಚಿನ ನಿಗಾವಹಿಸುತ್ತಿಲ್ಲ. ಈ 1990ರ ದಶಕದಲ್ಲಿ ಅರ್ಥಶಾಸ್ತ್ರಜ್ಞ ಮತ್ತು ಹಣಕಾಸು ಸಚಿವ ಮೆಹಬೂಬ್‌ ಉಲ್‌ ಹಕ್‌ ಅವರು ಗ್ರಾಮೀಣಾಭಿವೃದ್ಧಿ ಬಗ್ಗೆ ಸ್ಪಷ್ಟ ಚಿತ್ರಣ ನೀಡಿದ್ದರು. 

ಇದರಿಂದಾಗಿ 1990 ಮತ್ತು 1999ರ ನಡುವೆ ದೇಶದ ಗ್ರಾಮೀಣಾಭಿವೃದ್ಧಿ ಸರಿಯಾಗಿ ನಡೆಯಿತು ಎಂದು ಹೇಳಿದರು. ಇದೇ ವೇಳೆ ಮೈಸೂರು ವಿವಿ ಕುಲಸಚಿವರಾದ ಡಿ.ಭಾರತಿ ನಡಾವಳಿ ಪುಸ್ತಕ ಬಿಡುಗಡೆಗೊಳಿಸಿದರು. ಕೀನ್ಯಾ, ಎಮನ್‌, ನೇಪಾಳ, ಆಸ್ಟ್ರೇಲಿಯಾ, ಆಪಾ^ನಿಸ್ತಾನ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಮೈಸೂರು ವಿವಿ ಪ್ರಭಾರ ಕುಲಪತಿ ಪೊ›.ದಯಾನಂದ ಮಾನೆ, ಈಜಿಪ್ಟ್ನ ಡೆಸರ್ಟ್‌ ಸಂಶೋಧನಾ ಕೇಂದ್ರದ ಆಲಾ ಸಾಮಿ ಹಫೀಜ್‌ ಮೆಗಾಹದ್‌, ರಾಜ್ಯ ಯೋಜನಾ ಆಯೋಗದ ಸದಸ್ಯ ಡಾ.ಕೆ.ಶಿವಚಿತ್ತಪ್ಪ, ಕಾರ್ಯಾಗಾರದ ಸಂಚಾಲಕ ಡಾ.ರಂಗಸ್ವಾಮಿ, ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಎಸ್‌.ಶಿವರಾಜಪ್ಪ, ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ಎನ್‌.ಸರಸ್ವತಿ ಇದ್ದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.