ನಾಯಿ ಮೇಲೆ ಯುವಕನ ಪೈಶಾಚಿಕ ಕೃತ್ಯ
ಪೈಶಾಚಿಕ ಕೃತ್ಯ ಎಸಗಿದ ಆರೋಪಿ ಬಂಧನ , ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್
Team Udayavani, Feb 17, 2021, 2:24 PM IST
ಸಾಂದರ್ಭಿಕ ಚಿತ್ರ
ಮೈಸೂರು: ಬೀದಿ ನಾಯಿಯೊಂದರ ಮೇಲೆ ಯುವಕನೋರ್ವ ಅತ್ಯಾಚಾರ ಮತ್ತು ಪೈಶಾಚಿಕ ಕೃತ್ಯ ಎಸಗಿರುವ ಘಟನೆ ನಗರದಲ್ಲಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ನಗರದ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಬೀದಿ ಹೆಣ್ಣು ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಯುವಕನ ವಿರುದ್ಧ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ. ಬಿ. ಹರೀಶ್ ಅವರು ದೂರು ನೀಡಿದ್ದಾರೆ.
ಪೈಶಾಚಿಕ ಕೃತ್ಯ ಎಸಗಿರುವ ವಿಕೃತ ಯುವಕನ ವಿರುದ್ಧ ಐಪಿಸಿ ಸೆಕ್ಷನ್ 1860 (ಯು /ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 ( ಯು/ಇಎಸ್-11(1)(ಎ)) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ವೇಳೆ ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಬಲವಂತವಾಗಿ ಲೈಂಗಿಕ ಕಿರುಕುಳ ನೀಡುವುದನ್ನು ದಾರಿಹೋಕರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ದುಷ್ಕೃತ್ಯದ ವಿಡಿಯೋವನ್ನು ಈ ಬಳಿಕ ವೈರಲ್ ಮಾಡಿದ್ದರು. ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಪಿಎಫ್ಎ ಅಧಿಕಾರಿ ಕೆ.ಬಿ. ಹರೀಶ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಡಿಯೋ ಆಧರಿಸಿ ಕೃತ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ದೌರ್ಜನ್ಯಕ್ಕೆ ಒಳಗಾದ ನಾಯಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ತನಿಖೆಯ ನಂತರವಷ್ಟೇ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸತ್ಯ ಸಂಗತಿ ಹೊರಬೀಳಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಸಿ.ಡಿಯಿಂದ, ಫೋಟೊದಿಂದಲೋ ಯೋಗೇಶ್ವರ್ ಗೆ ಬಿಜೆಪಿ ಪರಿಷತ್ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ
ಅಪ್ಪು ಸಿನಿ ಪಯಣಕ್ಕೆ 45 ವಸಂತಗಳ ಸಂಭ್ರಮ…ತಾರೆಯರಿಂದ ಶುಭಹಾರೈಕೆಗಳ ಸುರಿಮಳೆ
ಕೋಟೇಶ್ವರದಲ್ಲಿ ವಿ.ನಾಗೇಂದ್ರ ಪ್ರಸಾದ್ ಸಂಗೀತ ಸವಿಸಂಜೆ
ಹೈದರಾಬಾದ್ ನಲ್ಲಿ 100 ಆಕ್ಟೇನ್ ಪ್ರೀಮಿಯಂ ಪೆಟ್ರೊಲ್ ಬಿಡುಗಡೆ ಮಾಡಿದ ಐಒಸಿ
ಇಂದು ‘ಸಲಾರ್’ ಕುರಿತು ಬಿಗ್ ಅಪ್ಡೇಟ್ ನೀಡಲಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್….ಏನದು ?