ಮೈಸೂರಲ್ಲಿ ಹೆಚ್ಚಿದ ಮಾನವ-ವನ್ಯಜೀವಿ ಸಂಘರ್ಷ; ಚಿರತೆ, ಹುಲಿ ಉಪಟಳಕ್ಕೆ ಜನ ಹೈರಾಣು

ಮನುಷ್ಯ ವನ್ಯ ಜೀವಿಯೊಂದಿಗೆ ಸಂಘರ್ಷಕ್ಕಿಳಿಯುವ ಅಪಾಯವಿದೆ

Team Udayavani, Dec 16, 2022, 6:00 PM IST

ಮೈಸೂರಲ್ಲಿ ಹೆಚ್ಚಿದ ಮಾನವ -ವನ್ಯಜೀವಿ ಸಂಘರ್ಷ; ಚಿರತೆ, ಹುಲಿ ಉಪಟಳಕ್ಕೆ ಜನ ಹೈರಾಣು

ಮೈಸೂರು: ಇತ್ತೀಚಿನ ದಿನಗಳಲ್ಲಿ ಮೈಸೂರು ಗ್ರಾಮಾಂತರ ಭಾಗ ಸೇರಿದಂತೆ ನಗರ ಪ್ರದೇ ಶಗಳಲ್ಲೂ ಮಾನವ – ವನ್ಯಜೀವಿ ಸಂಘರ್ಷ ಏರ್ಪಡುತ್ತಿರುವುದು ಆತಂಕಕ್ಕೀಡು ಮಾಡಿದೆ.

ಚಿರತೆಯೊಂದು ಕಳೆದ ಒಂದು ತಿಂಗಳ ಅಂತರದಲ್ಲಿ ಇಬ್ಬರನ್ನು ಬಲಿ ಪಡೆದ ಸುದ್ದಿ ಮಾಸುವ ಮುನ್ನವೇ ನಂಜನಗೂಡು ತಾಲೂಕು ವ್ಯಾಪ್ತಿಯಲ್ಲಿ ದನಗಾಹಿಯ ಮೇಲೆ ಹುಲಿ ದಾಳಿ ನಡೆಸಿದೆ. ಹಾಗೆಯೇ ಐದು ದಿನಗಳ ಹಿಂದೆ ಮೈಸೂರು ತಾಲೂಕಿನ ಜಯಪುರ, ಶಿಂಡೇನಹಳ್ಳಿ ವ್ಯಾಪ್ತಿಯಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡು ಆತಂಕ ಸೃಷ್ಟಿಸಿ ಪಕ್ಕದ ಅರಬ್ಬಿತಿಟ್ಟು ಅರಣ್ಯ ಸೇರಿವೆ. ಹೀಗೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ವನ್ಯಜೀವಿಗಳ ಹಾವಳಿ ಹೆಚ್ಚುತ್ತಿರುವುದು ಕಾಂಡ ಚಿನ ಗ್ರಾಮಗಳ ರೈತರಾದಿಯಾಗಿ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಜನವಸತಿ ಪ್ರದೇಶದಲ್ಲಿ ಚಿರತೆ:ಸಾಮಾನ್ಯವಾಗಿ ಚಿರತೆಗಳು ಅರಣ್ಯಗಳಲ್ಲಷ್ಟೇ ಜೀವಿಸುತ್ತವೆ ಎಂದು ಹೇಳಿದರೂ, ಅವು ಅನಾದಿ ಕಾಲದಿಂದಲೂ ಜನವಸತಿ ಪ್ರದೇಶದಲ್ಲಿ ವಾಸಿಸುತ್ತಲೇ ಬಂದಿವೆ. ಸುಲಭವಾಗಿ ಸಿಗುವ ನಾಯಿ, ಮೇಕೆ, ಕುರಿ, ಕೋಳಿಯನ್ನು ಆಹಾರವನ್ನಾಗಿ ಮಾಡಿಕೊಂಡು ಬೆಟ್ಟ, ಗುಡ್ಡ, ಸಾಮಾಜಿಕ ಅರಣ್ಯ, ಹಳ್ಳ-ತೊರೆಗಳಲ್ಲಿ ಜೀವಿಸುತ್ತಿವೆ. ಯಥೇಚ್ಛವಾಗಿ ಆಹಾರ ಲಭ್ಯತೆಯಿಂದ ಚಿರತೆಯ ಸಂತಾನೋತ್ಪತ್ತಿ ಹೆಚ್ಚಿದೆ. ಪರಿಣಾಮ ನಗರ ಪ್ರದೇಶ ಗಳಲ್ಲಿ, ಕೃಷಿ ಜಮೀನುಗಳಲ್ಲಿ ಆಗಾಗ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸುತ್ತಿವೆ ಎಂದು ವನ್ಯ ಜೀವಿತಜ್ಞ ಕೃಪಾಕರ ಸೇನಾನಿ ತಿಳಿಸಿದ್ದಾರೆ. ಹೀಗೆ ಚಿರತೆಗಳು ಜನ -ಜಾನುವಾರುಗಳ ಮೇಲೆ ದಾಳಿ ನಡೆಸಿದ್ದು ಕಂಡು ಬಂದಲ್ಲಿ ಅರಣ್ಯ ಇಲಾಖೆ ಶೀಘ್ರವೇ ಅವುಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರ ಮಾಡಬೇಕು. ಒಂದು ವೇಳೆ ಈ ಕಾರ್ಯ ವಿಳಂಬವಾದರೆ ಮನುಷ್ಯ ವನ್ಯ ಜೀವಿಯೊಂದಿಗೆ ಸಂಘರ್ಷಕ್ಕಿಳಿಯುವ ಅಪಾಯವಿದೆ. ಇದಕ್ಕೆ ಉದಾಹರಣೆಯಂತೆ
ಮೈಸೂರಿನ ಬೆಳವಾಡಿ ಬಳಿ 2021ರಲ್ಲಿ ವಿಷಪ್ರಾಶಣ ಮಾಡಿಸಿ ಮೂರು ಚಿರತೆಯನ್ನು ಕೊಲ್ಲಲಾಗಿತ್ತು.

ವನ್ಯಜೀವಿಗಳ ದಾಳಿಗೆ 6 ಮಂದಿ ಬಲಿ: ಜಿಲ್ಲೆಯಲ್ಲಿ ಕಾಡಾನೆ, ಹುಲಿ ಹಾಗೂ ಚಿರತೆ ದಾಳಿಗೆ ಒಮದು ವರ್ಷದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ದಂಚಿನ ನಂಜನಗೂಡು ತಾಲೂಕು ವ್ಯಾಪ್ತಿಯ ಹಾದನೂರು, ಒಡೆಯನಪುರ, ಬಂಕಳ್ಳಿ ಹಾಗೂ ಬಳ್ಳೂರು  ಹುಂಡಿ ಗ್ರಾಮದಲ್ಲಿ ಹುಲಿ ದಾಳಿ ನಡೆಸಿರುವ ನಾಲ್ಕು ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ ಇಬ್ಬರು ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿದ್ದಾರೆ.

ಹಾಗೆಯೇ ತಿ.ನರಸೀಪುರ ತಾಲೂಕಿನ ಬನ್ನೂರು ಬಳಿ ಚಿರತೆ ದಾಳಿಗೆ ಅ.30 ಹಾಗೂ ಡಿ.1ರಂದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಬಲಿಯಾಗಿದ್ದು, ಚಿರತೆ ಸೆರೆಗೆ ಕಳೆದ 15 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ.

ಹಾಗೆಯೇ ಎಚ್‌.ಡಿ. ಕೋಟೆ ತಾಲೂಕು ಬಂಡೀಪುರ ರಾಷ್ಟ್ರೀಯ ಉದ್ಯಾನದಂಚಿನಲ್ಲಿ ಕಾಡಾನೆ ದಾಳಿಯಿಂದ ಕೇರಳ ಮೂಲದ ರೈತ ಮೃತಪಟ್ಟಿದ್ದರೆ, ಹುಣಸೂರು ತಾಲೂಕು ಕೊಳವಿಗೆ ಹಾಡಿ ಬಳಿ ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದ.

ವಿಶೇಷ ಪಡೆ ರಚನೆ ಅಗತ್ಯ: ಜಿಲ್ಲೆಯ ಯಾವುದೇ ಭಾಗದಲ್ಲಿ ವನ್ಯ ಜೀವಿ ಕಾಣಿಸಿಕೊಂಡಲ್ಲಿ ಅಥವಾ ಜನ-ಜಾನುವಾರು ಮೇಲೆ ದಾಳಿ ನಡೆಸಿದಲ್ಲಿ ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಹ ಬ ದಿಗೆ ತಂದು ವನ್ಯಜೀವಿಯನ್ನು ಕಾಡಿಗಟ್ಟುವ ಅಥವಾ ಸೆರೆ ಹಿಡಿಯುವ ಕೆಲಸವನ್ನು ಮಾಡಲು ಅರಣ್ಯ ಇಲಾಖೆಯಿಂದ ವಿಶೇಷ ಪಡೆ ರಚನೆ ಮಾಡುವ ಅಗತ್ಯವಿದೆ. ಈಗಾಗಲೇ ಹುಲಿ ಮತ್ತು ಆನೆ ದಾಳಿ ತಡೆಯಲು ರಕ್ಷಣಾ ಪಡೆ ಇದ್ದರೂ ಅಷ್ಟು ಪರಿಣಾಮಕಾರಿಯಾಗಿಲ್ಲ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಒಟ್ಟಾರೆ ಕಾಡಿಗೆ ಹೊಂದಿಕೊಂಡಂತಿರುವ ತಾಲೂಕುಗಳಲ್ಲಿ ಹುಲಿ, ಆನೆಗಳ ಉಪಟಳ ನಿರಂತ ರವಾಗಿದ್ದರೆ, ನಗರ ಮತ್ತು ಜನವಸತಿ ಪ್ರದೇಶಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಜನ ಸಾಮಾನ್ಯರು ವನ್ಯಜೀವಿಗಳ ಬಗ್ಗೆ ಮತ್ತಷ್ಟು ಜಾಗೃತರಾಗಬೇಕು ಎಂಬುದು ತಜ್ಞೆ ಸಲಹೆ ಯಾ ಗಿದೆ.

ಕಳೆದ ಎರಡು ವರ್ಷಗಳಲ್ಲಿ 32ಕ್ಕೂ ಹೆಚ್ಚು ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡಲಾಗಿದೆ. ಅವುಗಳ ಸಂತಾನೋತ್ಪತ್ತಿ ಹೆಚ್ಚಿರುವುದರಿಂದ ಎಲ್ಲಾ ಕಡೆ ಕಂಡು ಬರುತ್ತಿದೆ. ತಿ.ನರಸೀಪುರ ತಾಲೂಕಿನಲ್ಲಿ ಇಬ್ಬರನ್ನು ಬಲಿ ಪಡೆದ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದು ವರಿದಿದೆ.
● ಮಾಲತಿ ಪ್ರಿಯಾ, ಮೈಸೂರು ವೃತ್ತ ಸಿಎಫ್

ಕಾಡಿನಲ್ಲಿ ಲಂಟಾನ ವ್ಯಾಪಕವಾಗಿರುವುದರಿಂದ ಕಾಡಾನೆಗಳು ಆಹಾರ ಅರಸಿ ನಾಡಿಗೆ ಬರು ತ್ತಿವೆ. ದುರ್ಬಲ ಹುಲಿಗಳು ಸರಹದ್ದು ಸಿಗದೆ ಕಾಡಂಚಿಗೆ ಬಂದು ನೆಲೆ ಕಂಡುಕೊಂಡು ಸುಲಭ ವಾಗಿ ಸಿಗುವ ಜಾನುವಾರುಗಳನ್ನೇ ಆಹಾರವಾಗಿ ಮಾಡಿಕೊಳ್ಳುತ್ತಿವೆ. ಈ ವೇಳೆ ಮನುಷ್ಯನ ಮೇಲೆ ದಾಳಿಯಾಗುವುದು ಅಪರೂಪ. ಇಂಥ ಘಟನೆಗಳು ಆಗದಂತೆ ಅರಣ್ಯ ಇಲಾಖೆ ಎಷ್ಟು ಮುಂಜಾಗ್ರತೆ ವಹಿಸಬೇಕೊ, ಅಷ್ಟೇ ಎಚ್ಚರಿಕೆಯನ್ನು ಮನುಷ್ಯನು ಅನುಸರಿಸ ಬೇಕು.
● ಕೃಪಾಕರ ಸೇನಾನಿ, ವನ್ಯ ಜೀವಿ ತಜ್ಞರು.

*ಸತೀಶ್‌ ದೇಪುರ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.