ದೇಶದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದ ಆಕ್ರಮಣ: ವಿಷಾದ


Team Udayavani, Aug 16, 2017, 12:27 PM IST

mys2.jpg

ಕೆ.ಆರ್‌.ನಗರ: ಅನೇಕ ಮಹನೀಯರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯದೊರೆತಿದ್ದು, ಇಂದು 71ನೇ ಸ್ವಾತಂತ್ರ್ಯೋತ್ಸವ ಆಚರಿಸುತಿದ್ದೇವೆ. ಆದರೂ ಈಗಲೂ ದೇಶದ ಗಡಿಯಲ್ಲಿ ಪರಕೀಯರು ಆಕ್ರಮಣ ನಡೆಸಲು ಸಂಚು ರೂಪಿಸುತ್ತಿದ್ದಾರೆ. ಇದಕ್ಕಿಂತ ಅಪಾಯಕಾರಿಯಾಗಿ ದೇಶದಲ್ಲಿ ಭ್ರಷ್ಟಾಚಾರದ ಆಕ್ರಮಣ ದಿನೇ ದಿನೆ ಹೆಚ್ಚುತ್ತಿದೆ ಎಂದು ಶಾಸಕ ಸಾ.ರಾ.ಮಹೇಶ್‌ ವಿಷಾದಿಸಿದರು.

ಪಟ್ಟಣದ ಡಾ.ರಾಜ್‌ ಬಾನಂಗಳದಲ್ಲಿ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ನನ್ನ ಅಧಿಕಾರದ ಅವಧಿಯಲ್ಲಿ ತಾಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡುತಿದ್ದು, ಮೊರಾರ್ಜಿ ವಸತಿ ಶಾಲೆ, ಸ್ನಾತಕ್ಕೋತ್ತರ ಪದವಿ, ಮಹಿಳಾ ಹಾಸ್ಟೆಲ್‌ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ರಸ್ತೆಗಳ ಅಭಿವೃದ್ಧಿ, ನಾಲೆಗಳ ಹೂಳೆತ್ತುವಿಕೆ, ಶಾಲಾಕಾಲೇಜು ಹಾಸ್ಟೆಲ್‌ಗ‌ಳಿಗೆ ನೂತನ ಕಟ್ಟಡಗಳು, 13 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ  ಮೊದಲಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಶಾಲಾಮಕ್ಕಳಿಗೆ ಕಳೆದ 13 ವರ್ಷಗಳಿಂದ ಸಾ.ರಾ.ಸ್ನೇಹ ಬಳಗದ ವತಿಯಿಂದ ನೋಟ್‌ ಪುಸ್ತಕಗಳನ್ನು ಹಂಚಲಾಗುತ್ತಿದೆ. ಸ್ವಾತಂತ್ರ್ಯೊ ತ್ಸವದಂದು 32 ಸಾವಿರ ಶಾಲಾ ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ಲಾಡು ವಿತರಿಸಲಾಗುತ್ತಿದೆ. ಈ ತಿಂಗಳ 26,27 ಅಥವಾ ಮುಂದಿನ ತಿಂಗಳ 2, 3ರಂದು ತಾಲೂಕಿನ ಚುಂಚನಕಟ್ಟೆಯಲ್ಲಿ ಜಲಪಾತೋತ್ಸವ ಆಯೋಜಿಸಲಾಗಿದ್ದು, ಚಿತ್ರನಟರಾದ ರಾಧಿಕಾ ಪಂಡಿತ್‌ ಮತ್ತು ಯಶ್‌ ಹಾಗೂ ಸಾಧು ಕೋಕಿಲ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸ್ವಾತಂತ್ರ್ಯಹೋರಾಟಗಾರರಾದ ಲಕ್ಕಯ್ಯ, ನಂಜುಂಡಪ್ಪ ಮತ್ತು ಸತ್ಯಮೂರ್ತಿ ಪರವಾಗಿ ಮೊಮ್ಮಗ ಶರಣ್‌ರನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್‌ ಜಿ.ಎಚ್‌.ನಾಗರಾಜ್‌, ತಾಪಂ ಅಧ್ಯಕ್ಷ ಎಚ್‌.ಟಿ.ಮಂಜುನಾಥ್‌, ಪುರಸಭಾ ಅಧ್ಯಕ್ಷೆ ಕವಿತಾವಿಜಯಕುಮಾರ್‌, ಬಿಇಒ ರೇವಣ್ಣ, ಕಾರ್ಯ ನಿರ್ವಹಣಾಧಿಕಾರಿ ಚಂದ್ರು, ಮಾಜಿ ವಿಧಾನಪರಿಷತ್‌ ಸದಸ್ಯ ಟಿ.ಕೆ.ಚಿನ್ನಸ್ವಾಮಿ ಇತರರು ಇದ್ದರು. ಸೇಂಟ್‌ ಜೋಸೆಫ್ ಕಾನ್ವೆಂಟ್‌, ಸಾಯಿ ನಳಂದ ವಿದ್ಯಾಸಂಸ್ಥೆ, ಲಯನ್ಸ್‌ ಶಾಲೆ ಸೇರಿದಂತೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.