ಪಿರಿಯಾಪಟ್ಟಣ ಆಸ್ಪತ್ರೆ 7 ಸಿಬ್ಬಂದಿಗೆ ಸೋಂಕು


Team Udayavani, Sep 16, 2020, 4:15 PM IST

ಪಿರಿಯಾಪಟ್ಟಣ ಆಸ್ಪತ್ರೆ 7 ಸಿಬ್ಬಂದಿಗೆ ಸೋಂಕು

ಪಿರಿಯಾಪಟ್ಟಣ: ಪಟ್ಟಣ‌ ತಾಲೂಕು ಸಾರ್ವಜನಿಕ ಆಸ್ಪತ್ರೆಯ7 ಸಿಬ್ಬಂದಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯನ್ನು ಮೂರು ದಿನಗಳ ‌ಕಾಲ ಸೀಲ್‌ ಮಾಡಲಾಗಿದೆ.

ತಾಲೂಕಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ‌ ಕೋವಿಡ್  ವೈರಸ್‌ ಇದೀಗ ತಾಲೂಕು ಆಸ್ಪತ್ರೆಯ ಸಿಬ್ಬಂದಿಗೂ ತಗುಲಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ತುರ್ತು ಫೀವರ್‌ ಕ್ಲಿನಿಕ್‌ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಸೋಮವಾರ ಸಂಜೆ4ಗಂಟೆಯ ಸಮಯದಲ್ಲಿ 66 ವರ್ಷದ ವೃದ್ಧೆಯೊಬ್ಬರು ಜ್ವರ, ನೆಗಡಿ ಶೀತ‌ ಸಮಸ್ಯೆಯಿಂದ ‌ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ವೈದ್ಯರು ಈಕೆಯನ್ನು ಪರೀಕ್ಷಿಸಿದಾಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಪರೀಕ್ಷೆ ನಡೆಸಿದ ಕೆಲವೇ ಕ್ಷಣದಲ್ಲಿ ಈಕೆ ಸಾವನ್ನಪ್ಪಿದ್ದರು. ಇದೇ ವೇಳೆ ಆಸ್ಪತ್ರೆಯ ಮೂವರು ಸಿಬ್ಬಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ಮಂಗಳವಾರ ಸಂಜೆಯೂ ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗುವುದು. ಜೊತೆಗೆ ಆಸ್ಪತ್ರೆಯಲ್ಲಿ ಹೊರರೋಗಿಗಳ ‌ ವಿಭಾಗವನ್ನು ಮೂರು ದಿನಗಳ ‌ಕಾಲ ಬಂದ್‌ ಮಾಡಲಾಗಿದೆ. ಕೇವಲ ತುರ್ತು ಚಿಕಿತ್ಸೆ ಐಸೊಲೇಷನ್‌ ವಿಭಾಗ ಹಾಗೂ ಫೀವರ್‌ ಕ್ಲಿನಿಕ್‌ಗಳು ಮಾತ್ರ ಕಾರ್ಯ ನಿರ್ವಹಿಸಲಿವೆ ಎಂದು ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ತಿಳಿಸಿದ್ದಾರೆ.

……………………………………………………………………………………………………………………………………………………

ಕೋವಿಡ್‌: ಆದೇಶ ಉಲ್ಲಂಘಿಸಿದರೆ ಕ್ರಮ : ಮೈಸೂರು: ಕೋವಿಡ್‌-19 ವಿಚಾರದಲ್ಲಿ ಸರ್ಕಾರದ ಆದೇಶಗಳನ್ನು ಉಲ್ಲಂಘಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ. ಶರತ್‌ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆಮಾತನಾಡಿದ ಅವರು, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂಬಂಧ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಆದೇಶ ಇದೆ. ಸೋಂಕಿತರನ್ನು ಆಸ್ಪತ್ರೆಗೆ ಸೇರಿಸುವುದರಿಂದಬಿಡುಗಡೆಯಾಗುವವರೆಗೂಒಂದಷ್ಟು ನಿಯಮ ಗಳನ್ನು ಪಾಲಿಸಬೇಕು. ಆ ನಿಯಮ ಗಳನ್ನು ಆಸ್ಪತ್ರೆಗಳು ಕಟ್ಟುನಿಟ್ಟಾಗಿ ಪಾಲಿಸ ದಿದ್ದರೆಅವರ ವಿರುದ್ಧ ಕ್ರಮ ಜರುಗಿಸ ಬೇಕಾಗುತ್ತದೆ ಎಂದು ಹೇಳಿದರು.

ಸಾಮಾನ್ಯವಾಗಿ ಎಲ್ಲಾ ಸೋಂಕಿತ ರಿಗೂ ವೆಂಟಿಲೇಟರ್‌ ಬಳಸುವುದಿಲ್ಲ.ಅತ್ಯಂತ ಅವಶ್ಯಕತೆ ಇರುವವರಿಗೆ ಮಾತ್ರ ಬಳಸಲಾಗುತ್ತದೆ. ಯಾರಿಗೆ ಶ್ವಾಸಕೋಶಬಲಹೀನವಾಗಿರುತ್ತದೋಅಂತಹವರಿಗೆ ಮಾತ್ರ ಆಮ್ಲಜನಕ ಪೂರೈಕೆ ಮಾಡ ಬೇಕು. ಆಗ ಮಾತ್ರ ವೆಂಟಿಲೇಟರ್‌ಬಳಕೆಗೆ ಬರುತ್ತದೆ ಎಂದರು.ಸೋಂಕಿತರ ಸಂಖ್ಯೆ ಹೆಚ್ಚು ಮಾಡುತ್ತೇವೋ, ಕಡಿಮೆ ಮಾಡುತ್ತೇವೋ ಎಂಬುದು ನಮ್ಮಕೈಲಿದೆ. ನಾನು ನೋಡಿದ ಹಾಗೆ ಮಾರುಕಟ್ಟೆ ಮತ್ತಿತರ ಕಡೆ ಓಡಾಡುವವರು ಮಾಸ್ಕ್ ಧರಿಸುವುದೇ ಇಲ್ಲ. ಎಲ್ಲರೂ ಕಡ್ಡಾಯವಾಗಿಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇಲ್ಲವಾದರೆ ಸೋಂಕಿತರಸಂಖ್ಯೆನಿರಂತರವಾಗಿಹೆಚ್ಚಾಗುತ್ತಿರುತ್ತದೆ.ಯಾರೂ ಮುನ್ನೆಚ್ಚರಿಕೆ ಕ್ರಮ ತೆಗೆದು ಕೊಳ್ಳದೆ ಉದಾಸೀನದಿಂದ ಇರಬೇಡಿ ಎಂದು ಮನವಿ ಮಾಡಿದರು.

ಈ ವರ್ಷ ಚಾಮುಂಡಿ ಬೆಟ್ಟ, ಅರಮನೆ ಆವರಣದಲ್ಲಿ ಮಾತ್ರ ದಸರಾ ನಡೆಯತ್ತದೆ.ಆದಷ್ಟೂಕಡಿಮೆಜನರನ್ನುಸೇರಿಸಿಕೊಂಡು ಕಾರ್ಯಕ್ರಮನಡೆಸುತ್ತೇವೆ. ಎಲ್ಲರಿಗೂ ತಪಾಸಣೆ ಮಾಡಿ ನಂತರ ಒಳಗೆ ಬಿಡಲಾಗುವುದು ಎಂದರು

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.