ಅನಿಯಮಿತ ಲೋಡ್‌ ಶೆಡ್ಡಿಂಗ್‌: ದಿನಪೂರ್ತಿ ಕಿರಿಕಿರಿ

Team Udayavani, Apr 30, 2019, 3:00 AM IST

animiyata

ಎಚ್‌.ಡಿ.ಕೋಟೆ: ಸರಗೂರು ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಭಾಗದಲ್ಲೂ ಕಳೆದ ಮೂರ್‍ನಾಲ್ಕು ದಿನಗಳಿಂದ ಸೆಸ್ಕ್ ಅಧಿಕಾರಿಗಳು ಅನಿಯಮಿತ ಲೋಡ್‌ ಶೆಡ್ಡಿಂಗ್‌ ಕೈಗೊಂಡಿರುವುದರಿಂದ ಸಾಕಷ್ಟು ತೊಂದರೆಯಾಗಿದೆ. ಪಟ್ಟಣದ ವರ್ತಕರು ಹಾಗೂ ತಾಲೂಕು ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಸೇರಿದಂತೆ ತಾಲೂಕಿನ ಜನತೆಗೆ ನಷ್ಟದ ಜೊತೆಗೆ ಕಿರಿಕಿರಿ ಉಂಟಾಗಿದೆ.

ಎಚ್‌.ಡಿ.ಕೋಟೆ ಮತ್ತು ಸರಗೂರು ಉಪವಿಭಾಗದ ಚಾಮುಂಡೇಶ್ವರಿ ವಿದ್ಯುತ್‌ ನಿಗಮ ನಿಯಮದ ಅಧಿಕಾರಿಗಳು ಕಳೆದ ಶುಕ್ರವಾರದಿಂದಲೂ ಒಂದಲ್ಲ ಒಂದು ಕಾರಣ ನೀಡಿ ಅನಿಯಮಿತ ಲೋಡ್‌ ಶೆಡ್ಡಿಂಗ್‌ ನಡೆಸುತ್ತಿರುವುದರಿಂದ ವರ್ತಕರು, ಹೋಟೆಲ್‌ ಮಾಲೀಕರು ನಷ್ಟ ಅನುಭವಿಸಿದರೆ, ಬೆಳಗ್ಗೆ 10 ರಿಂದ ಸಂಜೆ ಸೂರ್ಯ ಮುಳುಗುವವರೆಗೂ ಕರೆಂಟ್‌ ಇರದ ಕಾರಣ ಯಾವ ಕಚೇರಿಗೆ ಹೊದರೂ ಕರೆಂಟ್‌ ಸಮಸ್ಯೆಯಿಂದ ಕಂಪ್ಯೂಟರ್‌ ಆನ್‌ ಅಗುತ್ತಿಲ್ಲ, ನಾಳೆ ಬನ್ನಿ ಎಂಬ ಉತ್ತರ ಸಿಗುತ್ತಿದೆ. ಇದರಿಂದ ಸಾರ್ವಜನಿಕರು ರೋಸಿ ಹೋಗಿದ್ದಾರೆ.

ಮೊಬೈಲ್‌ ಸ್ವಿಚ್‌ ಆಫ್: ಇನ್ನೂ ದಿನೇ ದಿನೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಎಂದು ಕಂಡರಿಯದ ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ. ಕರೆಂಟ್‌ ಇಲ್ಲದ ಕಾರಣ ಮನೆಯಲ್ಲಿ ಫ್ಯಾನ್‌ ಚಾಲನೆ ಕಾಣದೆ ಕುಟುಂಬದ ಜನರು ಮನೆಯಲ್ಲಿ ಕೂರಲಾಗದೆ ತೊಳಲಾಡುವ ಸ್ಥಿತಿ ಎದುರಾಗಿದೆ. ಈ ಬಗ್ಗೆ ಇಲ್ಲಿನ ಸೆಸ್ಕ್ ಅಧಿಕಾರಿಗಳಿಗೆ ಕರೆ ಮಾಡಿದರೆ ಲೈನ್‌ಮ್ಯಾನ್‌ನಿಂದ‌ ಸಹಾಯಕ ಕಾರ್ಯಪಾಲಕರ ವರೆಗೂ ಸ್ವೀಚ್‌ ಆಫ್ ಎನ್ನುವ ಸಂದೇಶ ಕೇಳಿ ಬರುತ್ತದೆ.

ಈ ಬಗ್ಗೆ ಸೆಸ್ಕ್ ಕಚೇರಿ ಬಳಿ ಬಂದು ಅಧಿಕಾರಿಗಳನ್ನು ಏಕೆ ಹೀಗೆ ಅನಿಯಮಿತವಾಗಿ ಲೋಡ್‌ ಶೆೆಡ್ಡಿಂಗ್‌ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರೆ, ಲೈನ್‌ಮ್ಯಾನ್‌ ವೈರ್‌ ಕಟ್ಟಾಗಿದೆ ಸರ್‌ ಎಂದರೆ, ಇನ್ನೋರ್ವ ಸಿಬ್ಬಂದಿ ಹೋಗಿ ಜೆಇ ಕೇಳಿ ಎನ್ನುವ ಉಡಾಫೆ ಉತ್ತರ ನೀಡುತ್ತಾರೆ. ಇನ್ನು ಜೆಇ ಅವರನ್ನು ಕೇಳಿದರೇ, “ಸರ್‌ ನಿನ್ನೆ ವೈರ್‌ ಕಟ್ಟಾಗಿತ್ತು, ಇಂದು ವಿದ್ಯುತ್‌ ಪರಿವರ್ತಕ ಸುಟ್ಟು ಹೋಗಿದೆ. ಸಂಜೆ 4 ರವರೆಗೆ ಕರೆಂಟ್‌ ಬರುತ್ತದೆ’ ಎಂದು ಗ್ರಾಹಕರನ್ನು, ಇಲ್ಲಿನ ನಾಗರೀಕರನ್ನು ಅಲೆದಾಡುತ್ತಿದ್ದಾರೆ.

ಇಷ್ಟು ದಿನ ಇಲ್ಲಿನ ಸೆಸ್ಕ್ ಅಧಿಕಾರಿಗಳು ತಾಲೂಕಿನ ರೈತರು ಬೆಳೆಗಳನ್ನು ಬೆಳೆಯಲು ನೀರು ಹಾಯಿಸಲು ಸರಿಯಾಗಿ ಕರೆಂಟ್‌ ಕೋಡದೆ ನಷ್ಟ ಉಂಟು ಮಾಡುತ್ತಿದ್ದರು. ಈಗ ಪಟ್ಟಣ ಪ್ರದೇಶದ ಜನರಿಗೂ, ವರ್ತಕರಿಗೂ ನಷ್ಟವುಂಟು ಮಾಡಲು ಅನಿಯಮಿತ ಲೋಡ್‌ ಶೆೆಡ್ಡಿಂಗ್‌ ನಡೆಸುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಎಚ್‌.ಬಿ.ಶಿವಲಿಂಗಪ್ಪ ಮತ್ತಿತರರು ಕಿಡಿಕಾರಿದ್ದಾರೆ

ಪ್ರತಿಭಟನೆ ಎಚ್ಚರಿಕೆ: ಸೆಸ್ಕ್ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಹಾಗೂ ಅನಿಯಮಿತ ಲೋಡ್‌ ಶೆೆಡ್ಡಿಂಗ್‌ ತಾಲೂಕಿನ ರೈತರು, ವರ್ತಕರು, ಮಿಲ್‌, ಹೋಟೆಲ್‌, ಕಂಪ್ಯೂಟರ್‌ ಸೆಂಟರ್‌ ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನಾಳೆಯೂ ಇದೆ ರೀತಿ ಅನಿಯಮಿತ ಲೋಡ್‌ ಶೆಡ್ಡಿಂಗ್‌ ಕೈಗೊಂಡರೆ ನಾಳೆ ಇಲ್ಲಿನ ಸೆಸ್ಕ್ ಕಚೇರಿ ಮುಂಭಾಗ ಧರಣಿ ನಡೆಸಲಾಗುವುದು ಎಂದು ನಾಗರಿಕರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ರೈತರು ಎಚ್ಚರಿಕೆ ನೀಡಿದ್ದಾರೆ.

ನಂಜನಗೂಡಿನ ಕಡಕೊಳ ಸೆಸ್ಕ್ ಮುಖ್ಯ ವಿದ್ಯುತ್‌ ವಿತರಣೆ ಕೇಂದ್ರದಲ್ಲಿ ಕಳೆದ ಶುಕ್ರವಾರದಿಂದ ಒಂದಲ್ಲ ಒಂದು ದೋಷ ಕಾಣಿಸಿಕೊಳ್ಳುತ್ತಿರುವುದರಿಂದ ಅಲ್ಲಯೇ ಲೈನ್‌ ಆಫ್ ಮಾಡುತ್ತಿದ್ದಾರೆ. ಮಂಗಳವಾರದಿಂದ ಅನಿಯಮಿತ ಲೋಡ್‌ ಶೆಡ್ಡಿಂಗ್‌ ಸಮಸ್ಯೆ ಇರುವುದಿಲ್ಲ.
-ಮಹೇಶ್‌ಕುಮಾರ್‌, ಸೆಸ್ಕ್ ಎಇಇ

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.