ರಾಜಕೀಯ ಒತ್ತಡ ಇರುವುದು ಸತ್ಯ.. ಎಲ್ಲಾ ಪಕ್ಷಗಳ ಹಿತಕಾಯಬೇಕಿದೆ: ಸಿಎಂ ಬೊಮ್ಮಾಯಿ
Team Udayavani, Nov 28, 2022, 3:47 PM IST
ಮೈಸೂರು: ಒಕ್ಕಲಿಗ ಸಮುದಾಯದ ಮೀಸಲಾತಿ ವಿಚಾರವಾಗಿ ಡೆಡ್ ಲೈನ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಅವರ ಪತ್ರ ನನ್ನ ಕೈ ಸೇರಲಿ. ನಾನು ಮುಂದೆ ಏನು ಮಾಡಬೇಕೆಂದು ಮುಂದೆ ನಿರ್ಧಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಜಕೀಯ ಒತ್ತಡ ಇರುವುದು ಸತ್ಯ. ನಾನು ಎಲ್ಲಾ ಪಕ್ಷಗಳ ಹಿತಕಾಯಬೇಕಿದೆ. ಆ ಕಾರಣಕ್ಕೆ ನಾನು ಎಲ್ಲಾ ರೀತಿಯ ಆಲೋಚನೆ ಮಾಡಬೇಕಾಗುತ್ತದೆ ಎಂದರು.
ಇದನ್ನೂ ಓದಿ:ಆಕೆಗೆ 72 ವರ್ಷ ಆತನಿಗೆ 78 ವರ್ಷ: ಭೇಟಿಯಾದ ಗ್ರೋಸರಿ ಸ್ಟೋರ್ ನಲ್ಲೇ ಮದುವೆಯಾದ ಜೋಡಿ.!
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕೇಂದ್ರದ ತಯಾರಿ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನನ್ನೊಂದಿಗೆ ಕೇಂದ್ರದಿಂದ ಯಾರೂ ಸಮಾಲೋಚನೆ ಮಾಡಿಲ್ಲ. ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಬೇಕೆಂದು ನಮ್ಮ ಪಕ್ಷ 30 ವರ್ಷಗಳಿಂದ ನಿಲುವು ಹೊಂದಿದೆ. ಈ ಬಗ್ಗೆ ನಾನು ಸಹ ಎಲ್ಲಾ ರೀತಿಯ ಮಾಹಿತಿ ಕಲೆ ಹಾಕುತ್ತಿದ್ದೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.