ಭದ್ರಕೋಟೆ ಕಟ್ಟಿಕೊಂಡಿದ್ದ ಜೆಡಿಎಸ್‌ಗೆ ಅಭದ್ರತೆ ಭೀತಿ

ಜಿಲ್ಲೆಯಲ್ಲಿಸ್ಥಳೀಯ ನಾಯಕರಲ್ಲಿ ಹೊಂದಾಣಿಕೆ ಕೊರತೆ , ವರಿಷ್ಠರ ನಡೆಗೆ ಬೇಸತ್ತ ಜಿಟಿಡಿ ಪಕ್ಷ ತೊರೆಯುವರೆ?

Team Udayavani, Dec 22, 2020, 2:11 PM IST

MYSURU-TDY-1

ಮೈಸೂರು: ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಹಾಗೂ ಹೊಂದಾಣಿ ಚರ್ಚೆ ಕೋಲಾಹಲ ಸೃಷ್ಟಿಸುವುದರ ನಡುವೆ, ಜಿಲ್ಲೆಯಲ್ಲಿ ಜೆಡಿಎಸ್‌ ತನ್ನ ಪ್ರಾಬಲ್ಯವನ್ನು ಕಳೆದುಕೊಳುವ ಲಕ್ಷಣಗಳು ಗೋಚರಿಸುತ್ತಿದೆ.

11 ಕ್ಷೇತ್ರಗಳನ್ನು ಹೊಂದಿರುವ ಮೈಸೂರು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 5 ಕ್ಷೇತ್ರಗಳಲ್ಲಿ ಜಯಭೇರಿ ಬಾರಿದ್ದ ಜೆಡಿಎಸ್‌ ಪಕ್ಷವು ಕಾಂಗ್ರೆಸ್‌ ಹಾಗೂ ಬಿಜೆಪಿಗಿಂತ ಉತ್ತಮ ಸಾಧನೆ ಮಾಡಿತ್ತು. ಅಲ್ಲದೇ ಸೋತಿರುವ ಕ್ಷೇತ್ರಗಳಲ್ಲೂ ಮತಗಳಿಕೆಯಲ್ಲಿ ಉತ್ತಮ ಸಾಧನೆ ಮಾಡಿತ್ತು. ಒಕ್ಕಲಿಗರ ಪ್ರಾಬಲ್ಯವಿರುವ ಈ ಭಾಗದಲ್ಲಿತನ್ನದೇ ಆದ ಭದ್ರಕೋಟೆಯನ್ನು ಕಟ್ಟಿಕೊಂಡಿದ್ದ ತೆನೆ ಹೊತ್ತ ಮಹಿಳೆಯ ಚಿಹ್ನೆಯ ಜ.ದಳ ಇದೀಗ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಆಂತರಿಕ ಭಿನ್ನಮತ, ಪಕ್ಷದ ವರಿಷ್ಠರು ಹಾಗೂ ಸ್ಥಳೀಯ ನಾಯಕರ ಹೊಂದಾಣಿಕೆ ಕೊರತೆ ಹಾಗೂ ಏಕಪಕ್ಷೀಯ ನಿರ್ಧಾರಗಳೇ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಹಾಗೂಬಲ ವರ್ಧನೆಗೆ ಮುಳುವಾಗಿದ್ದು, ಜಿಲ್ಲೆಯಲ್ಲಿ ಜೆಡಿಎಸ್‌ ಶಕ್ತಿ ನಿಧಾನವಾಗಿ ಕುಗ್ಗಲು ಕಾರಣವಾಗಿದೆ ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಒಂದು ಕಾಲದಲ್ಲಿ ಜೆಡಿಎಸ್‌ ಭದ್ರಕೋಟೆಯಾಗಿದ್ದ ಹಳೆ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ನಂತರ ಜಿ.ಟಿ. ದೇವೇಗೌv ‌ ಹಿಡಿತ ಸಾಧಿಸಿದ್ದರು. ಆದರೆ, ಆಗಾಗ ಪಕ್ಷದ ನಾಯಕರು ತೆಗೆದುಕೊಳ್ಳುವ ಕೆಲವೊಂದು ಏಕಪಕ್ಷೀಯ ತೀರ್ಮಾನಗಳು ಪಕ್ಷದ ಬೆಳವಣಿಗೆಗೆ ಮಾರಕವಾಗಿ ಪರಿಣಮಿಸಿರುವುದಲ್ಲದೆ ಕಾರ್ಯಕರ್ತರರಿಗೆ ಸಮರ್ಥ ನಾಯಕನ ಕೊರತೆ ಎದ್ದು ಕಾಣುವಂತೆ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ 11 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲುವು ಸಾಧಿಸಿತ್ತು. ಆದರೆ, ಜಿಲ್ಲೆಯಲ್ಲಿರುವ ಹಿರಿಯ ನಾಯಕರ ನಡುವೆ ಹೊಂದಾಣಿಕೆ ಕೊರತೆ ಹಾಗೂ ಶಾಸಕ ‌ ಜಿಟಿಡಿಯವರನ್ನು ಪಕ್ಷ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವುದು ಮುಂದಿನ ಚುನಾವಣೆಯಲ್ಲಿಇರುವ ಸ್ಥಾನಗಳನ್ನು ಕಳೆದುಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.

ಜಿಟಿಡಿ ಹೊರ ನಡೆದರೆ ಪಕ್ಷಕ್ಕೆ ನಷ್ಟ: ಮೈಸೂರು ಭಾಗದಲ್ಲಿ ಶಾಸಕ ಜಿ.ಟಿ. ದೇವೇಗೌಡ ‌ ಪಕ್ಷದಲ್ಲಿಹಿರಿಯರಾಗಿದ್ದು, ಜಿಲ್ಲೆಯಲ್ಲಿ ತಮ್ಮದೇ ಹಿಡಿತ ಸಾಧಿಸಿದ್ದಾರೆ. ಆದ‌ರೆ, ಕಳೆದೆರೆಡು ವರ್ಷಗಳಿಂದ ‌ ಸಾರಾ ಮಹೇಶ್‌ ಮತ್ತು ಜಿಟಿಡಿ ನಡುವೆಮುಸುಕಿನ ಗುದ್ದಾಟದಿಂದ ಜಿಲ್ಲೆಯಲ್ಲಿಭದ್ರ ನೆಲೆ ಕಂಡಿದ್ದ ಪಕ್ಷ ದುರ್ಬಲವಾಗುವ ಸಾಧ್ಯತೆ ಇದೆ. ಸಮ್ಮಿಶ್ರ ಸರ್ಕಾರ ‌ ರಚನೆಯ ಆರಂಭದಿಂದಲೂ ಪಕ್ಷದ ವರಿಷ್ಠರು ಶಾಸಕ ಸಾರಾ ಮಹೇಶ್ ರೊಂದಿಗೆ ಉತ್ತಮ ಸಂಬಂಧವನ್ನಿರಿಸಿಕೊಂಡು, ಜಿಟಿಡಿಯನ್ನು ದೂರವಿಟ್ಟಿದ್ದು ಹಾಗೂ ಜಿಲ್ಲೆಯಲ್ಲಿ ತಮ್ಮದೇ ಹಿಡಿತ ಸಾಧಿಸಲು ಈ ಇಬ್ಬರೂ ತೆರೆಮರೆಯಲ್ಲಿ ನಡೆಸಿದ ಪ್ರಯತ್ನಗಳು ಮುಸುಕಿನ ‌ ಗುದ್ದಾಟಕ್ಕೆ ಕಾರಣವಾಗಿದ್ದು, ಇಂದು ಜಿಟಿಡಿ ಪಕ್ಷ ತೊರೆಯುವ ‌ ಹಂತಕ್ಕೆ ಬಂದು ನಿಂತಿದೆ. ಒಂದು ವೇಳೆಜಿಟಿಡಿ ಪಕ್ಷ ತೊರೆದರೆ ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ಎಚ್‌.ಡಿ.ಕೋಟೆ, ತಿ.ನರಸೀಪುರ ಹಾಗೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್‌ ಮತಗಳು ಕೈತಪ್ಪುವ ಸಾಧ್ಯತೆ ಇದೆ. ಇದರಿಂದ ‌ ಬಿಜೆಪಿ ಬಲವರ್ಧನೆಗೆ ಸಹಕಾರಿಯಾಗಲಿದೆ.

ಕಾರ್ಯಕರ್ತರಲ್ಲಿ ಗೊಂದಲ: ಜಿಟಿಡಿ ಮತ್ತು ಸಾರಾ ನಡುವಿನ ಮುಸುಕಿನ ಗುದ್ದಾಟದ ಪರಿಣಾಮಜಿಲ್ಲೆಯ ಜಿಡಿಎಸ್‌ ಕಾರ್ಯಕರ್ತರು ಮತ್ತುಸ್ಥಳೀಯ ಮುಖಂಡರಲ್ಲಿ ಗೊಂದಲ ಏರ್ಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಎರಡು ಬಣಗಳು ಸೃಷ್ಟಿಯಾಗಿದ್ದು, ಕಾರ್ಯಕರ್ತರು ಯಾವ ಬಣದಲ್ಲಿ

ಗುರುತಿಸಿಕೊಳ್ಳುವುದು ಎಂಬ ಗೊಂದಲಕ್ಕೀಡಾಗಿದ್ದಾರೆ. ಅಲ್ಲದೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ‌ ಮೂಲಕ ಜಿಟಿಡಿ ಕಡೆಗಣನೆ ಬಗ್ಗೆ ಬಹಿರಂಗವಾಗಿಯೇ ಅಸಮಧಾನ ‌ ವ್ಯಕ್ತಪಡಿಸಿದ್ದರೆ. ಇನ್ನೂ ಕೆಲವರು ಗ್ರಾಪಂ ಚುನಾವಣೆಯಿಂದ ವಿಮುಖರಾಗಿ ತಟಸ್ಥರಾಗಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ‌ ಪ್ರಬಲವಾಗಿ ಬೆಳೆದಿದ್ದಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.

ದೈಹಿಕವಾಗಿಯಷ್ಟೇ ಜೆಡಿಎಸ್‌ನಲ್ಲಿ: ಜಿಲ್ಲೆಯಲ್ಲಿ ಪಕ್ಷದ ಪ್ರಭಾವಿ ಮುಖಂಡರಾಗಿರುವ ಜಿ.ಟಿ. ದೇವೇಗೌಡ ‌ ವರಿಷ್ಠರ ನಿರ್ಲಕ್ಷ್ಯ, ಸಾರಾ ಮಹೇಶ್‌ ಅವರೊಂದಿಗಿನ ಮುಸುಕಿನ ಗದ್ದಾಟದಿಂದ ಬೇಸತ್ತುಈಗಾಗಲೇ ಮಾನಸಿಕವಾಗಿ ಪಕ್ಷದಿಂದ ಹೊರಗಿದ್ದು,ದೈಹಿಕವಾಗಿಯಷ್ಟೇ ಪಕ್ಷದಲ್ಲಿ ಉಳಿದಿದ್ದಾರೆ. ತಮ್ಮ ಮುಂದಿನ ರಾಜಕೀಯ ಭವಿಷ್ಯ ಗಮನ ‌ದಲ್ಲಿರಿಸಿಕೊಂಡು ಬಿಜೆಪಿ ಅಥವಾ ಕಾಂಗ್ರೆಸ್‌ ಸೇರುವಬಗ್ಗೆ ತೀರ್ಮಾನಿಸಿದಂತಿದೆ.

ಕುಸಿಯುತ್ತಿರುವ ಸ್ಥಾನ :

11 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮೈಸೂರು ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿಜೆಡಿಎಸ್‌ ಗೆಲುವು ಸಾಧಿಸಿತ್ತು. ಹುಣಸೂರು ಕ್ಷೇತ್ರದ ಶಾಸಕರಾಗಿದ್ದ ಎಚ್‌.ವಿಶ್ವನಾಥ್‌ ರಾಜೀ ನಾಮೆಯಿಂದ ಜೆಡಿಎಸ್‌ ಶಾಸಕರ ಸಂಖ್ಯೆ 4ಕ್ಕೆ ಇಳಿದಿದೆ. ಇದೀಗ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯಅವರನ್ನೇಸೋಲಿಸಿ ಜ ಲ್ಲೆಯಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿದ್ದ ಜಿ.ಟಿ.ದೇವೇಗೌಡ ಅವರು ಪಕ್ಷ ಚಟುವಟಿಕೆಗಳಿಂದ ದೂರವಿದ್ದು, ತಾಂತ್ರಿಕ ವಾಗಿಯಷ್ಟೇ ಜೆಡಿಎಸ್‌ನಲ್ಲಿ

ಉಳಿದುಕೊಂಡಿದ್ದಾರೆ. ಒಂದು ವೇಳೆ ಜಿಟಿಡಿ ಪಕ್ಷ ತೊರೆದರೆ ಮೈಸೂರು ನಗರ ಭಾಗಗಳು ಹಾಗೂ ಹುಣಸೂರು ಹಾಗೂ ಪಿರಿಯಾಪಟ್ಟಣದಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವಸಾಧ್ಯತೆಇದೆ.ಕೆ.ಆರ್‌.ನಗರದಲ್ಲಿಕಡಿಮೆ ಅಂತರದಿಂದ ಗೆದ್ದಿರುವ ಸಾ.ರಾ.ಮಹೇಶ್‌ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪ್ರಬಲವಾಗುತ್ತಿದೆ.ಅಲ್ಲಿ ರವಿಶಂಕರ್‌ ಹಾಗೂ ದೊಡ್ಡಸ್ವಾಮೇಗೌಡರುಪಕ್ಷದ ಹಿಡಿತ ಸಾಧಿಸಿ, ಈಗಿನಿಂದಲೇ ಮುಂದಿನವಿಧಾನ ಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಇನ್ನು ಪಿರಿಯಾಪಟ್ಟಣ, ತಿ.ನರಸೀಪುರದಲ್ಲಿ ಜೆಡಿಎಸ್‌ ಗೆದ್ದಿದ್ದು, ಆ ಕ್ಷೇತ್ರಗಳಲ್ಲಿ ಮುಂದಿನ ಚುನಾವಣೆಯಲ್ಲಿ ಯಾರ ರೀತಿ ವಿದ್ಯಮಾನಗಳುಬೇಕಾದರೂಜರುಗಬಹುದು.ಅಲ್ಲದೇಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಬೇರೂರುತ್ತ ಹಿಡಿತ ಸಾಧಿಸುತ್ತಿದೆ. ಇಂತಹ ಸನ್ನಿವೇಶದಲ್ಲಿ ಜೆಡಿಎಸ್‌ ತನ್ನ ಸ್ಥಾನಉಳಿಸಿಕೊಳ್ಳುವುದು ಕಷ್ಟ ಸಾಧ್ಯವಾಗಿದೆ

ಪಕ್ಷಕ್ಕೆ ಮುಳುವಾದ ವರಿಷ್ಠರ ನಡೆ… :

ಆರಂಭದಿಂದ ಜೆಡಿಎಸ್‌ ಪಕ್ಷದ ವರಿಷ್ಠ ಎಚ್‌.ಡಿ. ಕುಮಾರಸ್ವಾಮಿ ತೆಗೆದುಕೊಳ್ಳುವ ಏಕಪಕ್ಷೀಯ ನಿರ್ಧಾರಗಳು ಪಕ್ಷದ ಹಿನ್ನಡೆಗೆ ಕಾರಣವಾಗಿದೆ. ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಗೆಲ್ಲುವಅಭ್ಯರ್ಥಿಗೆ ಟಿಕೆಟ್‌ ನೀಡದೆ, ತಮ್ಮ ಸಂಬಂಧಿಗೆನೀಡಿದ್ದು, ಎಚ್‌.ಡಿ.ಕೋಟೆಯಲ್ಲಿ ಪಕ್ಷದ ಶಾಸಕ ಚಿಕ್ಕಮಾದು ಮೃತರಾದ ಬಳಿಕ ಅವರ ಮಗನಿಗೆಟಿಕೆಟ್‌ ನೀಡದೆ ಮತ್ತೂಬ್ಬರಿಗೆ ಮಣೆ ಹಾಕಿದ್ದು ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಸೋಲಿಗೆ ಕಾರಣವಾಯಿತು. ಪ್ರಸ್ತುತ ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವಜಿಟಿಡಿಯವರನ್ನುಕಡೆಗಣಿಸಿರುವುಸು ಅಲ್ಲದೆ, ಪಕ್ಷದಲ್ಲಿ ಇದ್ದರೆ ಇರಿ, ಇಲ್ಲವಾದರೆ ಹೊರ ನಡೆಯಿರಿ ಎಂಬ ಪರೋಕ್ಷ ಸಂದೇಶರವಾನಿಸಿರುವುದು ಮುಂಬರುವ ಚುನಾವಣೆಯಲ್ಲಿ ಇರುವಕ್ಷೇತ್ರಗಳನ್ನು ಜೆಡಿಎಸ್‌ ಕಳೆದುಕೊಳ್ಳುವ ಸಾಧ್ಯತೆ ಇದೆ.

 

ಸತೀಶ್‌ ದೇಪುರ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.