ಸ್ವಗ್ರಾಮದಲ್ಲೇ ಹಿನ್ನಡೆ ಅನುಭವಿಸಿದ ಕಳಲೆ


Team Udayavani, May 18, 2018, 12:58 PM IST

m6-swagrama.jpg

ನಂಜನಗೂಡು: ಉಪಚುನಾವಣೆಯಲ್ಲಿ ಈ ಭಾಗದ ಪ್ರಭಾವಿ ನಾಯಕರೆಂದೇ ಬಿಂಬಿತವಾಗಿದ್ದ ಮಾಜಿ ಸಚಿವ ಶ್ರೀನಿವಾಸ್‌ ಪ್ರಸಾದ್‌ರನ್ನು 21 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಳಿಸಿದ್ದ ಕಳಲೆ ಕೇಶವ ಮೂರ್ತಿ ಈ ಬಾರಿ ಪ್ರಸಾದರ ಅಳಿಯ ಹರ್ಷವರ್ಧನರಿಗೆ ತಲೆ ಬಾಗಿ ಸೋಲುಂಡಿದ್ದಾರೆ.

ಬರೋಬ್ಬರಿ ಒಂದು ವರ್ಷದ ಹಿಂದೆ  ಕ್ಷೇತ್ರದ ಬಹುತೇಕ 232 ಮತಗಟ್ಟೆಯಲ್ಲೂ ಅತ್ಯಧಿಕ ಮತ ಗಳಿಸಿದ್ದ ಕಳಲೆ, ಕಳೆದ ಬಾರಿ ಎಲ್ಲಾ ಮತಪೆಟ್ಟಿಗಳಲ್ಲೂ ಅಭೂತಪೂರ್ವ ಯಶಸ್ಸು ಸಾಧಿಸಿದ್ದರು. ಆದರೆ ಈ ಬಾರಿ ಅವರ ಸ್ವಗ್ರಾಮದ ಮೂರು ಮತಗಟ್ಟೆಯಲ್ಲೂ  ಹಿನ್ನಡೆ ಅನುಭವಿಸಿದ್ದಾರೆ.

ನಗರದಲ್ಲೂ ಕಳಪೆ ಸಾಧನೆ: ಉಪಚುನಾವಣೆಯಲ್ಲಿ ಮಾಜಿ ಸಚಿವ ಶ್ರೀನಿವಾಸ ಪ್ರಸಾದರಿಗಿಂತ 9 ಸಾವಿರಕ್ಕೂ ಹೆಚ್ಚು ಮತಗಳ ಬಹುಮತ ಗಳಿಸಿದ್ದ ಕಳಲೆ ಈ ಬಾರಿ ಕೇವಲ 1860 ಮತಗಳ ಮುನ್ನಡೆ ಕಾಪಾಡಿಕೊಳ್ಳಲು ಶಕ್ತರಾಗಿದ್ದು ಒಂದೇ ವರ್ಷದಲ್ಲಿ 7000 ಮತಗಳ ಹಿನ್ನಡೆಯಾಗಿದ್ದಾರೆ. ಇದಕ್ಕೆ ಕಾರಣವೇನೆಂಬ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ಮಾವನಿಗಿಂತ ಮುನ್ನಡೆ ಸಾಧಿಸಿದ ಅಳಿಯ: ಮಾಜಿ ಸಚಿವ ಶ್ರೀನಿವಾಸ ಪ್ರಸಾದ್‌ ಸೋಲಿಗೆ ಕಾರಣವಾಗಿದ್ದ ಮತಗಟ್ಟೆಗಳಲ್ಲೆಲ್ಲಾ ಈ ಬಾರಿ ಅವರ ಅಳಿಯ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ ಮುನ್ನಡೆ ಸಾಧಿಸುವುದರೊಂದಿಗೆ ಕಳಲೆಗೆ ಸೋಲಿನ ಕಹಿ ಉಣಿಸುವಲ್ಲಿ ಸಫ‌ಲರಾಗಿದ್ದಾರೆ. 

ಬ್ಲಾಕ್‌ ಅಧ್ಯಕ್ಷರಿಲ್ಲ: ಉಪಚುನಾವಣೆಯಲ್ಲಿ ಪ್ರಚಾರ ಮಾಡಿದ ಮಂತ್ರಿ ಮಹೋದಯರಿಲ್ಲ, ಮಂಚೂಣಿ ನಾಯಕರಿಲ್ಲ, ಉಪ ಚುನಾವಣೆಯಲ್ಲಿ ನೀಡಿದ ಸೌಲಭ್ಯಗಳನ್ನೂ ಈ ಬಾರಿ ನೀಡುವಲ್ಲಿ ಕಳಲೆ ವಿಫ‌ಲರಾಗಿದ್ದು, ಅಲ್ಲದೆ ತಮ್ಮೊಂದಿಗೆ ಕಾಂಗ್ರೆಸ್‌ಗೆ ವಲಸೆ ಬಂದ ಗುಂಪನ್ನೇ ನೆಚ್ಚಿಕೊಂಡು ಕೆಲಸ ಮಾಡಿದ್ದು ಕಳಲೆಯ ಸೋಲಿಗೆ ಕಾರಣ ಎನ್ನಲಾಗುತ್ತಿದೆ.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ನೇಮಕ ಹಾಗೂ ಶ್ರೀಕಂಠೇಶ್ವರ ದೇವಾಲಯದ ಆಡಳಿತ ಮಂಡಳಿಯ ನೇಮಕ ಸೇರಿದಂತೆ ಪಕ್ಷದಲ್ಲಿನ ಆಂತರಿಕ ಭಿನ್ನತೆ ಮುಗಿಲು ಮುಟ್ಟಿದ್ದೂ ಸೇರಿದಂತೆ ಅನೇಕ ಕಾರಣಗಳನ್ನು ಈಗ ಪಟ್ಟಿ ಮಾಲಾಗುತ್ತಿದೆ. ಸೋಲು ಗೆಲುವಿನ ಮಧ್ಯೆ ತಾಲೂಕು ಕಾಂಗ್ರೆಸ್‌ ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.