ಉಕ್ಕಿ ಹರಿಯುತ್ತಿರುವ ಕಪಿಲಾ, ಕಾವೇರಿ


Team Udayavani, Aug 18, 2018, 12:22 PM IST

m1-ukki.jpg

ಮೈಸೂರು: ಕೇರಳ ಹಾಗೂ ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾವೇರಿ ಕಣಿವೆಯ ಜಲಾಶಯಗಳೆಲ್ಲವೂ ತುಂಬಿ ಹರಿಯುತ್ತಿವೆ. ಹಾರಂಗಿ, ಹೇಮಾವತಿ, ಕಬಿನಿ, ಕೆಆರ್‌ಎಸ್‌ ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಹರಿಯ ಬಿಡಲಾಗುತ್ತಿದೆ.

ಇದರ ಪರಿಣಾಮ ಕಾವೇರಿ ಮತ್ತು ಕಪಿಲಾ ನದಿಗಳು ಉಕ್ಕಿ ಹರಿಯುತ್ತಿವೆ ನದಿ ಪಾತ್ರದ ಎಚ್‌.ಡಿ.ಕೋಟೆ, ನಂಜನಗೂಡು, ತಿ.ನರಸೀಪುರ ತಾಲೂಕುಗಳಲ್ಲಿ ವಾರದಲ್ಲಿ ಎರಡನೇ ಬಾರಿಗೆ ಪ್ರವಾಹ ಎದುರಾಗಿದೆ. ಕೇರಳ ಗಡಿಯ ಎಚ್‌.ಡಿ.ಕೋಟೆ ತಾಲೂಕಿನ ಮಚ್ಚಾರು, ಡಿ.ಬಿ.ಕುಪ್ಪೆ, ಆನೆಮಾಳ, ವಡಕನಮಾಳ ಸೇರಿದಂತೆ ಗಿರಿ ಹಾಡಿಗಳಿಗೆ ನೀರು ನುಗ್ಗಿ, ನಿರಾಶ್ರಿತರಿಗೆ ತಾಲೂಕು ಆಡಳಿತ ಡಿ.ಬಿ.ಕುಪ್ಪೆಯ ಸರ್ಕಾರಿ ಶಾಲೆಯಲ್ಲಿ ಆಶ್ರಯ ಕಲ್ಪಿಸಿದೆ. 

ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ 79,577 ಕ್ಯೂಸೆಕ್‌ ಒಳ ಹರಿವು ಬರುತ್ತಿದೆ. 77,500 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ತಾರಕ ಜಲಾಶಯಕ್ಕೆ 3,066 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು, 600 ಕ್ಯೂಸೆಕ್‌ ಹೊರ ಬಿಡಲಾಗುತ್ತಿದೆ. ನುಗು ಜಲಾಶಯಕ್ಕೆ 5,586 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು,

5,529 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಈ ಮೂರು ಜಲಾಶಯಗಳಿಂದ ಒಟ್ಟಾರೆ 83,629 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಕಪಿಲಾ ನದಿ ದಡದಲ್ಲಿರುವ ಹಳ್ಳಿ, ಜಮೀನುಗಳನ್ನೆಲ್ಲಾ ಆಪೋಶನ ತೆಗೆದುಕೊಳ್ಳುತ್ತಾ ಮೈದುಂಬಿ ಹರಿಯುತ್ತಿದೆ.

ಶ್ರೀಕಂಠೇಶ್ವರನ ಸುತ್ತ ಜಲಾವೃತ: ನಂಜನಗೂಡಿನ ಇತಿಹಾಸ ಪ್ರಸಿದ್ಧ ಹದಿನಾರು ಕಾಲು ಮಂಟಪ ಮುಳುಗಡೆಗೆ ಕೆಲವೇ ಅಡಿಗಳಷ್ಟೇ ಬಾಕಿ ಉಳಿದಿದೆ. ಶ್ರೀಕಂಠೇಶ್ವರ ದೇವಸ್ಥಾನದ ವಾಹನ ನಿಲುಗಡೆ ತಾಣ ಜಲಾವೃತವಾಗಿದ್ದು, ಕಪಿಲೆಯ ಸ್ನಾನಘಟ್ಟ, ಪರಶುರಾಮ ದೇವಸ್ಥಾನ, ಮುಡಿಕಟ್ಟೆಗಳೂ ಜಲಾವೃತವಾಗಿವೆ.

ನಂಜನಗೂಡು ಪಟ್ಟಣದ ಒಕ್ಕಲಗೇರಿ, ಹಳ್ಳದಕೇರಿ, ತೋಪಿನ ಬೀದಿಯ ಕೆಲ ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಹೆಮ್ಮಿಗೆ, ಸುತ್ತೂರು ಸೇತುವೆ ಮೇಲೆ ಕಪಿಲೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರವಾಹ ಪೀಡಿತರಿಗೆ ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ಹೆದ್ದಾರಿ ಬಂದ್‌: ಕಬಿನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಟ್ಟ ಪರಿಣಾಮ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾರದಲ್ಲಿ ಎರಡನೇ ಬಾರಿಗೆ ಸಂಪರ್ಕ ಕಡಿತಗೊಂಡಿದೆ. ಪ್ರವಾಹ ತಗ್ಗಿದ ಹಿನ್ನೆಲೆಯಲ್ಲಿ ಸೋಮವಾರವಷ್ಟೇ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು.

ಮಲ್ಲನಮೂಲೆ ಮಠದ ಬಳಿ ಹೆದ್ದಾರಿಯ ಮೇಲೆ ಮೂರ್‍ನಾಲ್ಕು ಅಡಿಗಳಷ್ಟು ಕಪಿಲಾ ನದಿ ನೀರು ಹರಿಯುತ್ತಿರುವ ಕಾರಣ ಶುಕ್ರವಾರ ಬೆಳಗ್ಗೆಯಿಂದ ಪೊಲೀಸರು ಹೆದ್ದಾರಿಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್‌ಗಳನ್ನಿರಿಸಿ ವಾಹನ ಸಂಚಾರ ಸ್ಥಗಿತಗೊಳಿಸಿದೆ. ಈ ಮಾರ್ಗದಲ್ಲಿ ತೆರಳುವವರು ಕಡಕೊಳ ಬಳಿ ಎಡ ತಿರುವು ಪಡೆದು ಅಡಕನಹಳ್ಳಿ ಕೈಗಾರಿಕಾ ಪ್ರದೇಶ, ಹಿಮ್ಮಾವು, ಕೆಂಪಿಸಿದ್ಧನಹುಂಡಿ, ಬಸವನಪುರ ಮೂಲಕ ನಂಜನಗೂಡು ತಲುಪಬೇಕಿದೆ. 

ದೇಗುಲ ಜಲಾವೃತ: ತಿ.ನರಸೀಪುರ ತಾಲೂಕಿನಲ್ಲಿ ಕಾವೇರಿ-ಕಪಿಲಾ ನದಿ ಸಂಗಮವಾಗಿ ಹರಿಯುವುದರಿಂದ ತಾಲೂಕಿನ ಐತಿಹಾಸಿಕ ಸ್ಥಳ ತಲಕಾಡು ಸಮೀಪದ ತಡಿಮಾಲಂಗಿ ಗ್ರಾಮದ ಆಂಜನೇಯ ಮತ್ತು ಅಲಮೇಲಮ್ಮ ದೇವಸ್ಥಾನಗಳು ಜಲಾವೃತವಾಗಿವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಜೊತೆಗೆ ಗ್ರಾಮದಲ್ಲಿನ ನದಿ ಪಾತ್ರದ ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳಿಗೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಶ್ರಯ ಕಲ್ಪಿಸಲಾಗಿದೆ. 

ಕೊಡಗು ಸಂಪರ್ಕ ಕಡಿತ: ಭಾರೀ ಮಳೆಯಿಂದ ತತ್ತರಿಸುತ್ತಿರುವ ಕೊಡಗು ಜಿಲ್ಲೆಗೆ ಇದೇ ಮೊದಲ ಬಾರಿಗೆ ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕುಶಾಲನಗರ ಪಟ್ಟಣದ ಹಲವು ಬಡಾವಣೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದ್ದರೆ,

ಮೈಸೂರು ಜಿಲ್ಲೆಯ ಗಡಿಯಲ್ಲಿ ಬರುವ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಮಟ್ಟಕ್ಕೆ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಸೇತುವೆಯ ಮೇಲೆ ಭಾರೀ ವಾಹನಗಳ ಸಂಚಾರ ಸ್ಥಗಿತಗೊಳಿಸಿದೆ. ಭಾರೀ ವಾಹನಗಳನ್ನು ಪಿರಿಯಾಪಟ್ಟಣದಲ್ಲೇ ತಡೆದು ಗೋಣಿಕೊಪ್ಪ-ಸಿದ್ದಾಪುರ ಮಾರ್ಗವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ.  

ಕಂದಾಯ ಸಚಿವರ ಭೇಟಿ: ಮೈಸೂರು ಜಿಲ್ಲೆಯ ಕೊಡಗಿನ ಗಡಿ ಗ್ರಾಮ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮಕ್ಕೆ ಶುಕ್ರವಾರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಅವರೊಂದಿಗೆ ಭೇಟಿ ನೀಡಿದ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ, ಮಳೆಯಿಂದ ಮುಳುಗಡೆಯಾಗಿರುವ ಗ್ರಾಮಗಳು, ನದಿ ಪಾತ್ರದ ಜಮೀನು ಜಲಾವೃತದಿಂದ ಆಗಿರುವ ಹಾನಿ, ಕೊಪ್ಪ ಗ್ರಾಮದಲ್ಲಿ ತೆರೆದಿರುವ ಗಂಜಿ ಕೇಂದ್ರ ಪರಿಶೀಲಿಸಿದರು. ಜಿಲ್ಲಾಡಳಿತದಿಂದ ಪ್ರವಾಹ ಹಾನಿ ಕುರಿತು ಮಾಹಿತಿ ಪಡೆದರು. 

ಪ್ರವಾಹ ಪೀಡಿತರು ಆತಂಕಕ್ಕೆ ಒಳಗಾಗಬೇಡಿ. ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸುತ್ತದೆ. ಕಂದಾಯ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿ ಸ್ಥಳಗಳಲ್ಲಿಯೇ ಮೊಕ್ಕಾಂ ಹೂಡಿ ಅಗತ್ಯ ಕ್ರಮ ಕೈಗೊಳ್ಳುವರು. ಧೈರ್ಯವಾಗಿರಿ.
-ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.