ಕೊಡಗಿನ ಎಸ್ಟೇಟ್‌ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವು

Team Udayavani, Jun 25, 2021, 11:16 AM IST

kodagu

ಹುಣಸೂರು: ಕೊಡಗಿನ ಎಸ್ಟೇಟ್‌ನಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದಾತ, ಸಹ ಕಾರ್ಮಿಕನಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಾಗರಹೊಳೆ ಉದ್ಯಾನದಂಚಿನ ಕೊಡಗಿನ ವಿರಾಜಪೇಟೆ ತಾಲೂಕಿನ ಕೊಳತ್ತೂರು ಪಲಿಯಂಡ ರಾಜೇಶ್‌ರ ಎಸ್ಟೇಟ್‌ನಲ್ಲಿ ಘಟನೆ ನಡೆದಿದ್ದು.ತಾಲೂಕಿನ ಬಿಲ್ಲೇನಹೊಸಹಳ್ಳಿ ಗ್ರಾಮದ ಶಂಕರಶೆಟ್ಟಿ ಪುತ್ರ ಶಿವು ಅಲಿಯಾಸ್ ಜಲೇಂದ್ರ(24) ಮೃತಪಟ್ಟಾತ.

ಘಟನೆ ವಿವರ: ಶಿವು ಅವಿವಾಹಿತನಾಗಿದ್ದು ಕೂಲಿ ಕೆಲಸಕ್ಕಾಗಿ ವಿರಾಜಪೇಟೆ ತಾಲೂಕಿನ ಕೊಳತ್ತೂರಿನ ಪಲಿಯಂಡ ರಾಜೇಶ್‌ರ ಎಸ್ಟೇಟ್‌ನಲ್ಲಿ ಕೆಲಸಕ್ಕೆ ತೆರಳಿದ್ದ, ಈ ವೇಳೆ ಪಿರಿಯಾಪಟ್ಟಣ ತಾಲೂಕಿನ ಉತ್ತೇನಹಳ್ಳಿ ಹಾಡಿಯ ಬಸಪ್ಪ ಸಹ ಇದೇ ಎಸ್ಟೇಟ್‌ನಲ್ಲಿ ಕೆಲಸಕ್ಕೆ ಸೇರಿದ್ದು. ಎಸ್ಟೇಟ್‌ನ ಲೈನ್ ಮನೆಯಲ್ಲಿ ವಾಸವಿದ್ದರು.

ಜೂ.14 ರಂದು ಕ್ಲುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ನಡೆದ ವೇಳೆ ಬಸಪ್ಪ ಕತ್ತಿಯಿಂದ ಶಿವು ಮೇಲೆ ಹಲ್ಲೆ ನಡೆಸಿದ್ದ, ಕುತ್ತಿಗೆ ಭಾಗದಲ್ಲಿ ತೀವ್ರಗಾಯಗೊಂಡು ಪ್ರಜ್ಞಾಹೀನನಾಗಿದ್ದ ಶಿವುನನ್ನು ಎಸ್ಟೇಟ್ ಮಾಲಿಕ ರಾಜೇಶರೆ ಚಿಕಿತ್ಸೆಗಾಗಿ ಗೋಣಿಕೊಪ್ಪ, ವಿರಾಜಪೇಟೆ, ಮಡಿಕೇರಿ ಆಸ್ಪತ್ರೆಗೆ ದಾಖಲಿಸಿದ್ದರು,

ನಂತರ ಹೆಚ್ಚಿನ ಚಿಕಿತ್ಸೆ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಕೊಡಿಸಿದ್ದರು. ಶಿವುನನ್ನು ಬುಧವಾರದಂದು ಬಿಲ್ಲೇನಹೊಸಹಳ್ಳಿಗೆ ಕರೆತರಲಾಗಿತ್ತು. ಕೋಮಾ ಸ್ಥಿತಿಗೆ ತಲುಪಿ ಅಸ್ಪಸ್ಥಗೊಂಡಿದ್ದ ಶಿವುನನ್ನು ಗುರುವಾರದಂದು ನೇರಳಕುಪ್ಪೆ ಗ್ರಾ.ಪಂ.ಅಧ್ಯಕ್ಷ ಉದಯ್, ತಾ.ಪಂ.ಮಾಜಿ ಸದಸ್ಯ ಗಣಪತಿ ಹಾಗೂ ಗ್ರಾಮಸ್ಥರು ಹನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹುಣಸೂರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯಲ್ಲಿ ಮೃತಪಟ್ಟಿದ್ದಾನೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:  ತೆಕ್ಕಟ್ಟೆ: ಬಾವಿಗೆ ಬಿದ್ದ ಪುನುಗಿನ ಬೆಕ್ಕು; ರಕ್ಷಿಸಿದ ಸ್ಥಳೀಯರು

ಶವಪರೀಕ್ಷೆಗೆ ನಿರಾಕರಿಸಿದ ವೈದ್ಯರು

ಮಧ್ಯಾಹ್ನ ಮೃತಪಟ್ಟ ಶಿವು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಣಸೂರು ಆಸ್ಪತ್ರೆಯ ಶವಾಗಾರಕ್ಕೆ ತಂದರೂ ಶವಾಗಾರದಲ್ಲಿ ಶವ ಇಡಲು ಅವಕಾಶವನ್ನೇ ನೀಡಲಿಲ್ಲ. ಮೈಸೂರಿನಲ್ಲಿ ಶವಪರೀಕ್ಷೆ ನಡೆಸಿರೆಂದು ಹುಣಸೂರು ಸಾರ್ವಜನಿಕ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದು, ರಾತ್ರಿಯಾದರೂ ಮರಣೋತ್ತರ ಪರೀಕ್ಷೆ ಆಗದೆ ವಾಹನದಲ್ಲೇ ಶವ ಇರಿಸಿಕೊಂಡು ಕಾಯುವಂತಾಗಿದೆ. ಟಿಎಚ್.ಓ, ಡಿಎಚ್.ಓರಿಗೆ ಕರೆಮಾಡಿದರೂ ಸ್ವೀಕರಿಸಲಿಲ್ಲವೆಂದು ತಾ.ಪಂ.ಮಾಜಿ ಸದಸ್ಯ ಗಣಪತಿ, ಗ್ರಾ.ಪಂ.ಅಧ್ಯಕ್ಷ ಉದಯ್, ಸದಸ್ಯ ಕುಮಾರ್ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-wewqewewq

H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewewq

H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.