ಹಣಕ್ಕಾಗಿ ರಾಜ್ಯ ಸರ್ಕಾರದಿಂದ ಕೆರೆ ಡಿನೋಟಿಫೈ: ವಿಶ್ವನಾಥ್
Team Udayavani, Jul 23, 2017, 7:25 AM IST
ಮೈಸೂರು: ರಾಜ್ಯ ಸರ್ಕಾರ ಮುಂದಿನ ಚುನಾವಣೆಗೆ ಹಣ ಮಾಡುವ ಉದ್ದೇಶದಿಂದ ಕೆರೆಗಳನ್ನು ಡಿನೋಟಿಫೈ ಮಾಡಿ ರಿಯಲ್ ಎಸ್ಟೇಟ್ನವರಿಗೆ ಮಾರಲು ಮುಂದಾಗಿದೆ ಎಂದು ಜೆಡಿಎಸ್ ನಾಯಕ ಎಚ್.ವಿಶ್ವನಾಥ್ ಆರೋಪಿಸಿದರು.
ನೀರಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಕೆರೆಗಳನ್ನು ಡಿನೋಟಿಫೈಕೇಷನ್ ಮಾಡುತ್ತಿದೆ. ಬೆಂಗಳೂರಿನ 195 ಕೆರೆಗಳು ಸೇರಿ ರಾಜ್ಯದ 1,300 ಕೆರೆಗಳನ್ನು ಡಿನೋಟಿಫೈ ಮಾಡಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸರ್ಕಾರದ ಈ ತೀರ್ಮಾನ ನಿಜಕ್ಕೂ ಆಘಾತಕಾರಿ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ರಾಜ್ಯದಲ್ಲಿ ಈವರೆಗೂ ಅಧಿಕಾರ ನಡೆಸಿರುವ ಯಾವ ಸರ್ಕಾರವೂ ಕೆರೆ ನಿರ್ಮಿಸಿಲ್ಲ. ಇವೆಲ್ಲ ರಾಜರ ಕಾಲದಲ್ಲಿ ನಿರ್ಮಾಣಗೊಂಡಿವೆ. ಕೆರೆಗಳ ಸಂರಕ್ಷಣೆಗೆ ಕೋಟ್ಯಂತರ ರೂ. ವ್ಯಯಿಸುವ ಸರ್ಕಾರ ಮತ್ತೂಂದೆಡೆ ಕೆರೆಗಳನ್ನು ಡಿನೋಟಿಫೈ ಮಾಡುತ್ತಿರುವುದು
ಮೂರ್ಖತನ ಎಂದರು.
ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ10 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ಹೀಗಾಗಿ ರಾಜ್ಯದ ಕೆರೆಗಳನ್ನು ಡಿನೋಟಿಫೈ ಮಾಡಿ, ರಿಯಲ್ ಎಸ್ಟೇಟ್ನವರಿಗೆ ಮಾರಿ ಹಣ ಸಂಗ್ರಹಿಸುತ್ತಿದ್ದಾರೆಂದು
ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ