ನಾಡಕುಸ್ತಿಗೆ ಪೈಲ್ವಾನರ ಜೋಡಿ ಕಟ್ಟುವ ಕಾರ್ಯಕ್ಕೆ ಚಾಲನೆ

Team Udayavani, Sep 23, 2019, 3:00 AM IST

nada-kustige

ಮೈಸೂರು: ದಸರಾ ಮಹೋತ್ಸವ ನಾಡ ಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿ ಕಟ್ಟುವ ಕಾರ್ಯಕ್ಕೆ ಭಾನುವಾರ ಚಾಲನೆ ದೊರೆಯಿತು. ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ಬಿ.ವಿ.ಕಾರಂತ ರಂಗಮಂದಿರದಲ್ಲಿ ಜೋಡಿ ಕಟ್ಟುವ ಕಾರ್ಯದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 400ಕ್ಕೂ ಹೆಚ್ಚು ಪೈಲ್ವಾನರು ಭಾಗವಹಿಸಿದ್ದರು. ಮೊದಲ ದಿನವಾದ ಭಾನುವಾರ ವಯೋಮಿತಿ ಮತ್ತು ತೂಕದ ಆಧಾರದ ಮೇಲೆ 120 ಜೋಡಿ ಪೈಲ್ವಾನರ ಜೋಡಿ ಕಟ್ಟಲಾಯಿತು.

ಬೆಂಗಳೂರು, ಕನಕಪುರ, ನಂಜನಗೂಡು, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ, ಮೈಸೂರು ಗರಡಿಗಳಿಂದ ಪೈಲ್ವಾನರು ಭಾಗವಹಿಸಿದ್ದರು. ಇನ್ನೆರೆಡು ದಿನಗಳಲ್ಲಿ ಜೋಡಿ ಕಟ್ಟುವ ಕಾರ್ಯ ಅಂತಿಮ ಪಟ್ಟಿ ಸಿದ್ಧವಾಗಲಿದೆ. ಸುಮಾರು 200 ಜೋಡಿಗಳು ನಾಡಕುಸ್ತಿಯಲ್ಲಿ ಭಾಗವಹಿಸಲಿವೆ. ಉದ್ಘಾಟನೆ ಸಮಾರಂಭಕ್ಕೆ ಉತ್ತಮ 25 ಜೋಡಿಗಳನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ ಎಂದು ಸಂಘಟಕರು ತಿಳಿಸಿದರು.

ನವರಾತ್ರಿಯ ಮೊದಲ ದಿನವಾದ ಸೆ. 29 ರಂದು ವಸ್ತು ಪ್ರದರ್ಶನ ಆವರಣದ ದೇವರಾಜ ಅರಸು ಕುಸ್ತಿ ಅಖಾಡದಲ್ಲಿ ನಾಡ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ಅ.4ರಂದು ಮುಗಿಯಲಿದೆ. ಪ್ರತಿ ದಿನ ಮಧ್ಯಾಹ್ನ 3 ಗಂಟೆಯಿಂದ ಪಂದ್ಯಗಳು ಆರಂಭವಾಗಲಿದ್ದು, 20 ರಿಂದ 25 ನಾಡ ಕುಸ್ತಿಗಳು ಹಾಗೂ 1 ದೊಡ್ಡ ಕುಸ್ತಿ ನಡೆಯಲಿದೆ. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ದಂಡ ಹಿಡಿದು ತಿರುಗಿಸಿ ಜೋಡಿ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಿ, ದಸರಾ ಮೂಲಕ ಪೈಲ್ವಾನರು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸುವಂತಾಗಲಿ ಎಂದು ಶುಭ ಹಾರೈಸಿದರು.

ಪೈಲ್ವಾನ್‌ ಪ್ರೊ.ರಂಗಯ್ಯ ಮಾತನಾಡಿ, ದಸರಾದಲ್ಲಿ ಉಳಿದ ಕಾರ್ಯಕ್ರಮಗಳಿಗಿಂತ ನಾಡಕುಸ್ತಿ ಹೆಚ್ಚು ಆಕರ್ಷಕವಾಗಿರುತ್ತದೆ. ದಸರಾ ಕಂಠೀರವ, ದಸರಾ ಕೇಸರಿ, ದಸರಾ ಕುಮಾರ ಪ್ರಶಸ್ತಿಗಳನ್ನು ಗೆಲ್ಲುವುದು ಪೈಲ್ವಾನರ ಕನಸಾಗಿರುತ್ತದೆ. ನಾಡಕುಸ್ತಿಯನ್ನು ರಾಜ ಮಹಾರಾಜರ ಕಾಲದಿಂದಲೂ ಯಶಸ್ವಿಯಾಗಿ ನಡೆಸಲಾಗುತ್ತದೆ. ದಸರಾ ಕುಸ್ತಿಯಿಂದ ಸಾವಿರಾರು ಪೈಲ್ವಾನರು ಬೆಳೆದಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸ್ನೇಹ, ದಸರಾ ಕುಸ್ತಿ ಸಮಿತಿ ಕಾರ್ಯದರ್ಶಿ ರವಿಕುಮಾರ್‌, ಹಿರಿಯ ಪೈಲ್ವಾನರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.