ಆರ್ಭಟಿಸಿದ ಲಕ್ಷ್ಮಣತೀರ್ಥ: ಬೆಳೆ ಜಲಾವೃತ

Team Udayavani, Aug 18, 2018, 12:22 PM IST

m3-arbhatisida.jpg

ಹುಣಸೂರು: ಕೊಡಗು ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷಣತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಹನಗೋಡು ಅಣೆಕಟ್ಟೆಯ ಹಿನ್ನೀರಿನಿಂದ ಸಾವಿರಾರು ಎಕರೆ ಪ್ರದೇಶದ ಬೆಳೆ ಜಲಾವೃತವಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಹನಗೋಡು ಅಣೆಕಟ್ಟೆ ಮೇಲೆ 7,360 ಕ್ಯೂಸೆಕ್‌ ನೀರು ಹರಿಯುತ್ತಿದೆ. ನಾಲೆಗೆ 600 ಕ್ಯೂಸೆಕ್ಸ್‌ ನೀರು ಹರಿಸಲಾಗುತ್ತಿದೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದರಿಂದ ರೈತರು ಕಂಗಾಲಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 

ಹಿನ್ನೇರಿನಲ್ಲಿ ಬೆಳೆ ಮುಳುಗಡೆ: ಹನಗೋಡು ಅಣೆಕಟ್ಟೆ ಹಿನ್ನೀರಿನಿಂದ ಕೋಣನಹೊಸಹಳ್ಳಿ, ಬಿಲ್ಲೇನಹೊಸಹಳ್ಳಿ, ಕೆ.ಜಿ.ಹಬ್ಬನಕುಪ್ಪೆ, ಕೊಳವಿಗೆ, ನೇಗತ್ತೂರು, ಶಿಂಡೇನಹಳ್ಳಿ, ಮುದನಗನೂರು, ಚಿಕ್ಕ ಹೆಜೂರು, ದೊಡ್ಡ ಹೆಜೂರು, ದಾಸನಪುರ, ಹಿಂಡಗುಡ್ಲು, ಕಿರಂಗೂರು, ಹನಗೋಡು, ಕಾಮಗೌಡನಹಳ್ಳಿ, ಹೆಗ್ಗಂದೂರು, ವಡ್ಡಂಬಾಳು, ಬೀರನಹಳ್ಳಿ, ಲಕ್ಷ್ಮೀಪುರ, ಕೂಡೂರು, ಚನ್ನಸೋಗೆ, ರಾಮೇನಹಳ್ಳಿ, ನಿಲುವಾಗಿಲು ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ನದಿ ಅಂಚಿನ ಪಾತ್ರಗಳಲ್ಲಿ ಬೆಳೆದಿದ್ದ ಹತ್ತಿ,

ಮುಸುಕಿನ ಜೋಳ, ತಂಬಾಕು, ಶುಂಠಿ, ಹಲಸಂದೆ, ರಾಗಿ, ಭತ್ತದ ಸಸಿ ಮಡಿ ಸೇರಿದಂತೆ ಮತ್ತಿತರ ಬೆಳೆಗಳು ಸಾವಿರಾರು ಎಕರೆ ಪ್ರದೇಶದ ನೀರಿನಲ್ಲಿ ಮುಳುಗಿದ್ದು, ರೈತರು ಚಿಂತಾಕ್ರಾಂತರಾಗಿದ್ದಾರೆ. ಈ ಹಿಂದೆಯೂ ಇದೇರೀತಿ ಹಿನ್ನೀರು ನುಗ್ಗಿ ನಷ್ಟ ಉಂಟು ಮಾಡಿತ್ತು. ಮತ್ತೂಮ್ಮೆ ನೀರು ನುಗ್ಗಿದ್ದು, ಲಕ್ಷಾಂತರ ರೂ.ನಷ್ಟ ಉಂಟಾಗಿದೆ. ನಗರದ ಒಂಟೇಪಾಳ್ಯಬೋರೆಯ ಸೇರಿದಂತೆ ಹನಗೋಡು ಭಾಗದಲ್ಲಿ ಎರಡು ಮನೆ ಗೋಡೆ ಕುಸಿದಿದೆ. 

ಹುಣಸೂರು ನಗರ ಸೇರಿದಂತೆ ತಾಲೂಕಾದ್ಯಂತ ಮಳೆ ರಚ್ಚೆ ಹಿಡಿದಿದೆ. ರಸ್ತೆಗಳಲ್ಲಿ ನೀರಿನಲ್ಲೇ ಸಂಚರಿಸುತ್ತಿರುವ ವಾಹನಗಳು. ನಗರದ ಬೈಪಾಸ್‌ ರಸ್ತೆಯ ಅಲ್ಲಲ್ಲಿ ಕೆರೆಯಂತೆ ಗುಂಡಿ ನಿರ್ಮಾಣವಾಗಿದೆ. ಮಳೆ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್‌ ಮೋಹನ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.