ಉರುಳಿಗೆ ಬಿದ್ದ ಚಿರತೆ ರಕ್ಷಣೆ

Team Udayavani, Jul 30, 2018, 1:45 PM IST

m3-urlige.jpg

ಎಚ್‌.ಡಿ.ಕೋಟೆ: ಹಂದಿ ಹಾವಳಿಯಿಂದ ಬೆಳೆಗಳ ರಕ್ಷಣೆಗಾಗಿ ರೈತರೋರ್ವರು ಅಳವಡಿಸಿದ್ದ ಉರುಳಿಗೆ ಆಹಾರ ಹರಸಿ ಕಾಡಿನಿಂದ ನಾಡಿಗೆ ಬಂದಿದ್ದ 3 ವರ್ಷದ ಹೆಣ್ಣು ಚಿರತೆ ಮರಿಯೊಂದು ಸಿಲುಕಿಕೊಂಡಿತ್ತು.

ಅರಣ್ಯ ಇಲಾಖೆ ಅ ಧಿಕಾರಿಗಳು ಕಾರ್ಯಾಚರಣೆ ಕೈಗೊಂಡು ಚಿರತೆಯನ್ನು ರಕ್ಷಿಸಿದರು. ತಾಲೂಕಿನ ಬೆಳತ್ತೂರು ಬಿ.ಕಾಲೋನಿಯ ಡ್ರಿಪ್‌ ಸಿದ್ದನಾಯ್ಕ ಅವರು ಹಂದಿಗಳ ಹಾವಳಿಯಿಂದ ತಾವು ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ರಕ್ಷಣೆಗಾಗಿ ತಂತಿ ಬೆಲಿಗೆ ಉರುಳನ್ನು ಹಾಕಿದ್ದರು.

ಇದನ್ನು ಅರಿಯದ ಚಿರತೆ ಉರುಳಿಗೆ ಸಿಲುಕಿ ಹಾಕಿಕೊಂಡಿದೆ ಭಾನುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಎಚ್‌.ಡಿ.ಕೋಟೆ ಸಾಮಾಜಿಕ ವಲಯ ಅರಣ್ಯಾಧಿ ಕಾರಿಗಳಿಗೆ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅರವಳಿಕೆ ಮದ್ದನ್ನು ನೀಡಿ ಚಿರತೆಯನ್ನು ಸೆರೆಹಿಡಿದರು.

ದಿಕ್ಕಪಾಲಾಗಿ ಓಡಿದ ಜನ: ಕಾರ್ಯಾಚರಣೆ ವೇಳೆ ಜನರ ಗದ್ದಲದಿಂದಾಗಿ ಅರವಳಿಕೆ ನೀಡಿದ್ದರು ಚಿರತೆ ಬೋನ್‌ಗೆ ಹೋಗುವಾಗ ಬೆದರಿದಂತಾಗಿ ಸಿಬ್ಬಂದಿಯಿಂದ ತಪ್ಪಿಸಿಕೊಂಡು ಓಡಲಾರಂಬಿಸಿತು. ಇದರಿಂದ ಜನರು ದಿಕ್ಕಾಪಾಲಾಗಿ ಓಡಿದರು. ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ತಕ್ಷಣ ಕಾರ್ಯಚರಣೆ ಚುರುಕುಗೊಳಿಸಿದ ಅರಣ್ಯಾಧಿಕಾರಿಗಳ ತಂಡ ಮತ್ತೂಮ್ಮೆ ಅರವಳಿಕೆ ನೀಡಿ ಚಿರತೆಯನ್ನು ಸೆರೆಹಿಡಿದರು.ಬಳಿಕ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜ ಮƒಗಾಲಯಕ್ಕೆ ಕರೆದೊಯ್ಯಲಾಯಿತು.

ಕಾರ್ಯಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ವಿಭಾಗದ ಎಸಿಎಫ್‌ ಪರಮೇಶ್ವರಪ್ಪ, ಡಿಸಿಎಫ್‌ ಹನುಮಂತಪ್ಪ, ವಲಯ ಅರಣ್ಯಾ ಕಾರಿ ಮಧು, ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅರಣ್ಯಾಧಿ ಕಾರಿ ಸಂತೋಷ್‌, ವನ್ಯಜೀವಿ ವಲಯದ ಪಶು ವೈದ್ಯಾಧಿ ಕಾರಿ ಡಾ.ನಾಗರಾಜು, ಅರವಳಿಕೆ ತಜ್ಞ ಅಕ್ರಮ್‌ ಪೊಲೀಸ್‌ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.