ಚಳವಳಿಗೆ ನಟ ಶಿವಣ್ಣ ನೇತೃತ್ವ ವಹಿಸಲಿ

Team Udayavani, Dec 29, 2019, 3:00 AM IST

chalavalige

ತಿ.ನರಸೀಪುರ: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಡಾ.ಸರೋಜಿನಿ ಪರಿಷ್ಕೃತ ವರದಿ ಜಾರಿಗಾಗಿ ಹಮ್ಮಿಕೊಳ್ಳುವ ಚಳವಳಿಯ ನೇತೃತ್ವವನ್ನು ನಟ ಡಾ.ಶಿವರಾಜ್‌ ಕುಮಾರ್‌ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಕದಂಬ ಸೇನೆ ಕನ್ನಡ ಸಂಘಟನೆಯ ಸದಸ್ಯರು ಪಟ್ಟಣದಲ್ಲಿ ಪತ್ರಚಳವಳಿ ನಡೆಸಿದರು.

ಕದಂಬ ಸೇನೆಯ ಕನ್ನಡ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಅಂಚೆ ಕಚೇರಿಗೆ ತೆರಳಿ ನಟ ಶಿವರಾಜ್‌ ಕುಮಾರ್‌ ಸೇರಿದಂತೆ ಪುನೀತ್‌ ರಾಜ್‌ಕುಮಾರ್‌, ಸುದೀಪ್‌, ದರ್ಶನ್‌, ಯಶ್‌, ಗಣೇಶ್‌ ಹಾಗೂ ಹಿರಿಯ ನಟರಾದ ರವಿಚಂದ್ರನ್‌, ಉಪೇಂದ್ರ ಅವರ ವಿಳಾಸಕ್ಕೆ ಪತ್ರ ಹಾಕುವ ಮೂಲಕ ಚಳವಳಿಗೆ ಬೆಂಬಲ ನೀಡಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಒತ್ತಾ ಯಿಸಿದರು.

ಸಂಘಟನೆ ರಾಜಾಧ್ಯಕ್ಷ ಬೇಕ್ರಿ ರಮೇಶ್‌ ಮಾತನಾಡಿ, ಕೆಲ ವರ್ಷಗಳ ಹಿಂದೆ ಡಾ.ರಾಜಕುಮಾರ್‌ ನೇತೃತ್ವದಲ್ಲಿ ನಡೆದ ಗೋಕಾಕ್‌ ಚಳವಳಿಯಲ್ಲಿ ಪ್ರಖ್ಯಾತ ನಟ-ನಟಿಯರು ಬೀದಿಗಿಳಿದು ಹೋರಾಟ ನಡೆಸಿದ ಫ‌ಲವಾಗಿ ಕರುನಾಡಲ್ಲಿ ಕನ್ನಡಿಗ ನೆಮ್ಮದಿಯಿಂದ ಬದುಕಬಹುದಾಗಿತ್ತು. ಆದರೆ ಈಗ ಇಲ್ಲಿನ ಉದ್ಯೋಗವನ್ನು ಪರಭಾಸಿಗರು ಕಬಳಿಸುತ್ತಿದ್ದು ನಾವು ಅಲ್ಪ ಸಂಖ್ಯಾತರಾಗುತ್ತಿದ್ದೇವೆ ಎಂದು ಆರೋಪಿಸಿದರು.

ಉದ್ಯೋಗ ಮಾತ್ರ ಅಲ್ಲದೇ ವ್ಯಾಪಾರ ಹಾಗೂ ಉದ್ಯಮ ರಂಗದ ಅವಕಾಶಗಳಿಂದಲೂ ಕನ್ನಡಿಗರು ವಂಚಿತರಾಗುತ್ತಿದ್ದಾರೆ. ಕರ್ನಾಟಕದಲ್ಲಿ ಪರಭಾಷೆಯ ಚಲನಚಿತ್ರಗಳು ಕರುನಾಡಿನ ಚಿತ್ರಮಂದಿರದಲ್ಲಿ ನೆಲೆಯೂರಿ ಕನ್ನಡ ಚಿತ್ರಗಳಿಗೂ ಅವಕಾಶ ವಂಚಿತವಾಗುತ್ತಿವೆ. ಹೀಗಾಗಿ ಕನ್ನಡಿಗರಾದ ನಾವು ಮತ್ತೂಂದು ಗೋಕಾಕ್‌ ಮಾದರಿಯ ಚಳವಳಿ ಹಮ್ಮಿಕೊಳ್ಳುವುದು ಅವಶ್ಯಕವಾಗಿದ್ದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕನ್ನಡಿಗರ ಉದ್ಯೋಗ ಮೀಸಲಾತಿ ಡಾ.ಸರೋಜಿನಿ ಪರಿಷ್ಕೃತ ವರದಿ ಜಾರಿಯ ವಿಷಯದಲ್ಲಿ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಒತಾಯ್ತಿಸಿದರು.

ಶಿವರಾಜ್‌ ಕುಮಾರ್‌ ಅವರು ಗೋಕಾಕ್‌ ಮಾದರಿಯ ಚಳವಳಿಯ ನೇತೃತ್ವ ವಹಿಸಬೇಕು ಹಾಗೂ ಎಲ್ಲ ಚಿತ್ರನಟರು ಅವರಿಗೆ ಬೆಂಬಲವಾಗಿ ನಿಲ್ಲಬೇಕೆಂದು ಮನವಿ ಮಾಡಿದರು. ಸಂಘಟನೆಯ ತಾಲೂಕು ಅಧ್ಯಕ್ಷ ಎಸ್‌.ಮಹದೇವನಾಯಕ, ಹ.ಸ.ಪ್ರವೀಣ್‌, ಪುನೀತ್‌, ಮಹೇಶ್‌, ಮೋಹನ್‌, ರಕ್ಷಿತ್‌, ಶಿವರಾಜು, ಮಂಜು, ಕೃಷ್ಣ, ಹರಿಪ್ರಸಾದ್‌ ಇತರರು ಇದ್ದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.