ಗಾಂಧಿ ತತ್ವ ಕೊಂದಿರುವ ವಿಚಾರ ಚರ್ಚೆಯಾಗಲಿ


Team Udayavani, Feb 17, 2020, 3:00 AM IST

gandhi-tatva

ಮೈಸೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ನಿರ್ಭೀತಿಯಿಂದ ನಾಗರಿಕತೆಯನ್ನು ವಿಮರ್ಶೆಗೊಳಪಡಿಸಿ, ದೇಸಿ ನೆಲೆಗಟ್ಟಿನಲ್ಲಿ ಚಿಂತಿಸಿದ ಮೊದಲ ವ್ಯಕ್ತಿ ಎಂದು ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ರಂಗಾಯಣದಲ್ಲಿ ನಡೆಯುತ್ತಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಭಾನುವಾರ ಕಿರುರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ “ಗಾಂಧಿ ಪಥ’ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮ ಗಾಂಧಿ ಪ್ರತಿ ಸವಲತ್ತನ್ನು ನಾಗರಿಕತೆಯಿಂದ ಪಡೆದು, ಅದನ್ನು ಪ್ರಶ್ನಿಸದಿರುವ ಮನೋಭಾವಕ್ಕೆ ವಿರುದ್ಧವಾಗಿ ದೇಸಿ ನೆಲಗಟ್ಟಿನಲ್ಲಿ ಎಲ್ಲವನ್ನೂ ತಾವೇ ಸಿದ್ಧಪಡಿಸಿಕೊಂಡು ಸತ್ಯ ಶೋಧನೆಗೆ ಇಳಿದರು. ಸತ್ಯ ಹೇಳುವವರಿಗೆ ಸಮರ್ಥನೆ ಬೇಕಾಗಿಲ್ಲ. ಶೋಧನೆ ಬೇಕಾಗುತ್ತದೆ. ಗಾಂಧಿ ಸತ್ಯಶೋಧನೆಯೊಂದಿಗೆ ಜೀವನ ಪ್ರಕ್ರಿಯೆ ಕಂಡುಕೊಂಡರು ಎಂದರು.

ಗಾಂಧಿ ಮಾಡಿದ ಮೊದಲ ಕೆಲಸ, ತಮ್ಮ ಬಗ್ಗೆ ತಾವೇ ವಿರುದ್ಧವಾಗಿ ಯೋಚಿಸುವುದು. ಜೊತೆಗೆ ನಾಗರಿಕತೆಗೆ ವಶವಾಗದೆ, ಪರಿಶೋಧನೆಗೆ ತೊಡಗಿಕೊಳ್ಳುವ ಕಾಯಕದಲ್ಲಿ ತೊಡಗಿದರು. ಭಕ್ತಿ, ಅಭಿಮಾನಗಳನ್ನು ಅಗ್ನಿ ಪರೀಕ್ಷೆಗೆ ಒಳಪಡಿಸಿದಾಗ ಮೌಲ್ಯಗಳಾಗುತ್ತವೆ. ಈಗ ಯಾರೆಲ್ಲ ಭಕ್ತಿಯಿಂದ ತೇಲಾಡುತ್ತಿದ್ದಾರೋ, ಅವರೆಲ್ಲರೂ ಅಗ್ನಿ ಪರೀಕ್ಷೆಗೆ ಒಳಗಾಗಲೇಬೇಕು ಎಂದು ತಿಳಿಸಿದರು.

ತನಗೆ ನೋವು ಕೊಟ್ಟ ವ್ಯಕ್ತಿಯ ನೋವನ್ನೂ ಅರಿತು ಅವರಿಗೆ ಪ್ರೀತಿ ತುಂಬಿದ ಕೆಲಸ ಗಾಂಧಿಯಿಂದಾಯಿತು. ಮಹಾಭಾರತದಲ್ಲಿ ಕರ್ಣ ಸಾರಥಿಯಾದ ಶಲ್ಯನ ಮಾತು ಕೇಳಿ ಅರ್ಜುನನ ಕೊರಳ ಬದಲು ಹೃದಯಕ್ಕೆ ಗುರಿಯಿಟ್ಟಂತೆ ಗಾಂಧಿ ತಮ್ಮ ಶತ್ರುಗಳ ಕೊರಳಿನ ಬದಲು ಹೃದಯಕ್ಕೆ ಹತ್ತಿರವಾಗಲು ಯತ್ನಿಸಿದರು. ವೈಷ್ಣವ ಜನತೋ ಅಂದರೆ ಇದೇ ಅಲ್ಲವೇ?

ಸಾಮಾಜಿಕ ಪ್ರಜ್ಞೆಯುಳ್ಳವರು ಗಾಂಧಿ-ಅಂಬೇಡ್ಕರ್‌, ಗಾಂಧಿ-ನೆಹರು, ಗಾಂಧಿ-ಟ್ಯಾಗೋರ್‌ರ ಚರ್ಚೆಗಳನ್ನು ಓದಬೇಕು ಎಂದು ಸಲಹೆ ನೀಡಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ್‌ ಮಾತನಾಡಿ, ಪಾಶ್ಚಿಮಾತ್ಯ ಚಿಂತಕ ಕಾರ್ಲ್ಮಾರ್ಕ್ಸ್ ಮತ್ತು ನೆಹರೂ ವಾದದಿಂದಾಗಿ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್‌ ಚಿಂತನೆಗಳು ಈ ರಾಷ್ಟ್ರದಲ್ಲಿ ಮೂಲೆಗುಂಪಾಗಿವೆ.

ಸಂವಿಧಾನದಲ್ಲಿ ಅಡಕಗೊಳಿಸಿರುವ ಸಮಾಜವಾದ, ಜಾತ್ಯತೀತತೆ ಶಬ್ಧಗಳ ಬಗ್ಗೆ ಚರ್ಚೆಗಳಾಗಬೇಕು. ಟಿಪ್ಪು ಪರ ವಾದಿಸುವವರು ಖಡ್ಗ ಕೆಳಗಿಟ್ಟು ಖುರಾನ್‌ನೊಂದಿಗೆ ಮತ್ತು ಗೋಡ್ಸೆ ಪರ ವಾದಿಸುವವರು ಪಿಸ್ತೂಲ್‌ ಕೆಳಗಿಟ್ಟು ಭಗವದ್ಗೀತೆಯೊಂದಿಗೆ ಗಾಂಧಿ ಪಥಕ್ಕೆ ಬರಬೇಕು. ಈಗ ಗಾಂಧಿಯನ್ನು ದೈಹಿಕವಾಗಿ ಕೊಂದಿರುವ ವಿಚಾರಕ್ಕಿಂತ ಗಾಂಧಿ ತತ್ವಗಳನ್ನು ಕೊಂದಿರುವ ವಿಚಾರಗಳ ಬಗ್ಗೆ ಚರ್ಚೆಗಳಾಗಬೇಕು ಎಂದರು.

ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್‌, ಗಾಂಧಿ ಯಾರೊಬ್ಬರ ಸ್ವತ್ತಲ್ಲ. ಆರ್‌ಟಿಸಿ ಬರೆದುಕೊಟ್ಟಿಲ್ಲ. ತಮ್ಮವರನ್ನಷ್ಟೇ ಸೇರಿಸಿಕೊಂಡು ಪುಂಗುವುದನ್ನು ವಿಚಾರವಾದಿಗಳು ಬಿಡಬೇಕು. ಈ ಬಹುರೂಪಿ ತೆರೆದ ವೇದಿಕೆಯಾಗಿದೆ. ಎಲ್ಲರೂ ಬಂದು ಮುಕ್ತವಾಗಿ ಚರ್ಚಿಸಬಹುದು. ಗಾಂಧಿ ಮೊಮ್ಮಗನನ್ನು ಕರೆಸಿದ ಎಂದು ಹೇಳಿಕೊಳ್ಳುವುದಲ್ಲ. ಅಥವಾ ಈ ವಿಚಾರ ಸಂಕಿರಣದಲ್ಲಿ ದೂರ ಉಳಿಯುವುದಲ್ಲ.

ನೀವಷ್ಟೇ ಹೇಳುವುದು ಸತ್ಯವಲ್ಲ. ಗಾಂಧಿಯ ಪಾತ್ರಧಾರಿಯ ಬಾಯಿಯಿಂತ ತಮ್ಮ ಬೌದ್ಧಿಕತೆಯನ್ನು ಹೇಳಿಸುವುದು ಸತ್ಯವಲ್ಲ. ನಾವು ಪ್ರಜ್ಞಾಪೂರ್ವಕವಾಗಿಯೇ ಗಾಂಧಿ ಪಥ ಪರಿಕಲ್ಪನೆಯಲ್ಲಿ ಬಹುರೂಪಿ ನಡೆಸುತ್ತಿದ್ದೇವೆ. ನಾವೂ ಕೂಡ ಗಾಂಧಿಯ ಬಗ್ಗೆ ಹೇಳಬೇಕಿದೆ. ನೀವೂ ಹೇಳಿ, ಜನರು ತೀರ್ಮಾನಿಸಲಿ ಎಂದರು. ಮುಖ್ಯ ಜಂಟಿ ನಿರ್ದೇಶಕ ವಿ.ಎನ್‌. ಮಲ್ಲಿಕಾರ್ಜುನಸ್ವಾಮಿ, ಪತ್ರಕರ್ತೆ ಪ್ರೀತಿ ನಾಗರಾಜ್‌ ಇದ್ದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.