ವೆಂಕಟೇಶ್‌ ವಾಸ್ತವ ಅರಿತು ಮಾತನಾಡಲಿ: ಮಹದೇವ್‌


Team Udayavani, Jan 15, 2020, 3:00 AM IST

venkatesh

ಪಿರಿಯಾಪಟ್ಟಣ: 30 ವರ್ಷಗಳ ಸುದೀಘ ರಾಜಕಾರಣ ಮಾಡಿರುವ ಮಾಜಿ ಶಾಸಕ ಕೆ.ವೆಂಕಟೇಶ್‌ ಅನುಭವಿ ರಾಜಕಾರಣಿ ಎಂದು ಭಾವಿಸಿದ್ದೆ. ಆದರೆ, ರಾಜಕಾರಣಿಗಿರಬೇಕಾದ ಗಾಂಭೀರ್ಯತೆ ಅವರಿಗಿಲ್ಲ ಎಂದು ಶಾಸಕ ಕೆ.ಮಹದೇವ್‌ ಹರಿಹಾಯ್ದರು.

ಪಟ್ಟಣದ ಶಾಸಕರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಭಾನುವಾರ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ತಮ್ಮ ಬಗ್ಗೆ ಹುರುಳಿಲ್ಲದ ಆರೋಪ ಮಾಡಿದ ಮಾಜಿ ಸಚಿವ ಕೆ.ವೆಂಕಟೇಶ್‌ ತಾನೊಬ್ಬ ಅನಾನುಭವಿ ರಾಜಕಾರ‌ಣಿ ಎಂದು ತೋರಿಸಿಕೊಟ್ಟಿದ್ದಾರೆ ಎಂದರು.

ತಾಲೂಕಿನ ಭ್ರಷ್ಟಾಚಾರದ ಪಿತಾಮಹ ಕೆ.ವೆಂಕಟೇಶ್‌ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 2017ರಲ್ಲಿ ಸಾರ್ವಜನಿಕ ಸಭೆಯಲ್ಲಿ ವೆಂಕಟೇಶ್‌ ಅವರು “ಚುನಾವಣೆ ಎದುರಿಸಲು ಭ್ರಷ್ಟಾಚಾರ ಮಾಡಬೇಕು, ಇಲ್ಲದಿದ್ದರೆ ಚುನಾವಣೆ ಎದುರಿಸಲು ಹಣವನ್ನು ಎಲ್ಲಿಂದ ತರಲಿ’ ಎಂದು ಹೇಳಿದ್ದನ್ನು ವಿಡಿಯೋ ಸಮೇತ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 2017ರಲ್ಲಿ ಮುತ್ತಿನಮುಳುಸೋಗೆ ಗ್ರಾಮಕ್ಕೆ ಸಿದ್ದರಾಮಯ್ಯರನ್ನು ಕೆರತಂದು ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದು ಕೇವಲ ಕಮಿಷನ್‌ಗಾಗಿ ಅಷ್ಟೇ. ಅನುಮೋದ‌ನೆಯಾದ ಯೋಜನೆ ಪೂರ್ಣಗೊಳ್ಳಲು 18 ತಿಂಗಳು ಅವಧಿ ಇರುತ್ತದೆ. ಆದರೆ, ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡದೆ ಕಾಮಗಾರಿ ಮುಂದುವರಿಸಲು ವಿಳಂಬವಾಗಿದೆ.

ಇದನ್ನು ಅರಿಯದ ವೆಂಕಟೇಶ್‌ ವಿನಾಃ ಕಾರಣ ತಮ್ಮ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅಲ್ಲದೇ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರಿಂದ 80 ಕೋಟಿ ರೂ. ಬಿಡುಗಡೆ ಮಾಡಿಸದ್ದೆ ಎಂದು ಸುಳ್ಳು ಹೇಳುವ ಮೂಲಕ ತಾಲೂಕಿನ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಹರಿಹಾಯ್ದರು.

ನೈತಿಕತೆ ಇಲ್ಲ: ಪಿರಿಯಾಪಟ್ಟಣ ತಾಲೂಕಿನಿಂದ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ ವಿಧಾನಸೌಧ ಪ್ರವೇಶಿಸಿದರೂ ಸದನದಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ಒಮ್ಮೆಯೂ ತುಟಿಕ್‌ಪಟಿಕ್‌ ಎನ್ನಲಿಲ್ಲ. ಪರಿಸ್ಥಿತಿ ಹೀಗಿರುವಾಗ ನನ್ನನ್ನು ಅನಾನುಭವಿ ಶಾಸಕ ಎಂದು ಹೇಳುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ ಕೆ.ಮಹದೇವ್‌, ನಾನು ಪ್ರಥಮ ಬಾರಿಗೆ ಶಾಸಕನಾದರೂ ತಾಲೂಕಿನ ಅಭಿವೃದ್ಧಿಗಾಗಿ ಹಿರಿಯರ ಸಲಹೆ ಮತ್ತು ಮಾರ್ಗದರ್ಶನ ಪಡೆಯುತ್ತಿದ್ದೇನೆ. ನಿಮ್ಮ ಹಾಗೆ ಸದನದಲ್ಲಿ ಕುಳಿತು ನಿದ್ರಿಸುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಪಟ್ಟಣದ 23 ವಾರ್ಡ್‌ಗಳಲ್ಲಿ ನಡೆಯುತ್ತಿರುವ 57 ಕೋಟಿ ರೂ. ವೆಚ್ಚದ ಒಳ ಚರಂಡಿ ಯೋಜನೆ ವೆಂಕಟೇಶ್‌ ಅವಧಿಯಲ್ಲಿ ಮಂಜೂರಾದರೂ ಸರ್ಕಾರದ ಆದೇಶ ಮತ್ತು ಅನುಮೋದನೆ ದೊರೆತು ಕೆಲಸ ಆರಂಭವಾಗಿರುವುದು ನನ್ನ ಅವಧಿಯಲ್ಲಿ. ಇವರಿಗೆ ರಾಜಕಾರಣದಲ್ಲಿ ನೈತಿಕತೆ ಇದ್ದರೆ ಜನರಿಗೆ ಸತ್ಯ ಹೇಳಲಿ, ಅವರೇನು ಅವಿದ್ಯಾವಂತರಲ್ಲ, ಪ್ರಬುದ್ಧತೆಯುಳ್ಳ ಬುದ್ಧಿವಂತ ರಾಜಕಾರಣಿ ಎಂದು ಭಾವಿಸಿದ್ದೇನೆ.

ಆದರೆ, ಅವರು ಕಾರ್ಯಕರ್ತರಿಂದ ಚಪ್ಪಾಳೆ ಗೀಟಿಸಲು ವಿನಾಃ ಕಾರಣ ಆರೋಪ ಮಾಡುತ್ತಿದ್ದಾರೆ. ಅವರು ನಗರ ಒಳ ಚರಂಡಿ ಯೋಜನೆಯ ಸರ್ಕಾರಿ ಆದೇಶವನ್ನೊಮ್ಮೆ ತೆಗೆದು ನೋಡಲಿ ಅನುಮೋದನೆಯಾದ ನಂತರ ನಾನು ಗುದ್ದಲಿಪೂಜೆ ಮಾಡಿದ್ದೇನೆಯೇ ಹೊರತು ಜನತೆಗೆ ಮೋಸಗೊಳಿಸುವ ಕೆಲಸ ಮಾಡಿಲ್ಲ, ಈಗಾಗಲೇ ಪಟ್ಟಣದ ನಗರ ಒಳ ಚರಂಡಿ ಯೋಜನೆ ಶೇ. 85ರಷ್ಟು ಪೂರ್ಣಗೊಂಡಿದೆ. ಮಳೆಯ ಸಮಸ್ಯೆ ಇಲ್ಲದಿದ್ದರೆ ಈಗಾಗಲೇ ಕಾಮಗಾರಿ ಪೂರ್ಣಗೊಳ್ಳುತ್ತಿತ್ತು ಎಂದರು.

ತಾಪಂ ಸದಸ್ಯ ಎಸ್‌. ರಾಮು ಮಾತನಾಡಿ, ವಿನಾಃ ಕಾರಣ ಕಾರ್ಯಕರ್ತರ ಮನಸ್ಸನ್ನು ಕದಡುವ ಕೆಲಸ ಮಾಡಬೇಡಿ. ಇಂತಹ ಬಾಲಿಶ ಹೇಳಿಕೆಗಳನ್ನು ನೀಡಬೇಡಿ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸದಸ್ಯ ಪಿ.ರಾಜೇಂದ್ರ, ತಾಪಂ ಮಾಜಿ ಅಧ್ಯಕ್ಷ ಮಾಕೋಡು ಜವರಪ್ಪ, ಎಂಡಿಸಿಸಿ ನಿರ್ದೇಶಕ ಸಿ.ಎನ್‌.ರವಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಕೆ.ಕುಮಾರ್‌, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಈರಯ್ಯ ಇತರರಿದ್ದರು.

ಚರ್ಚೆಗೆ ಬನ್ನಿ, ನನ್ನ ಸಾಧನೆ ತಿಳಿಸುವೆ: ನನ್ನ ಹಾಗೂ ನನ್ನ ಮಗನ ಬಗ್ಗೆ ಕೆ.ವೆಂಕಟೇಶ್‌ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ವಸೂಲಿ ದಂಧೆಯಲ್ಲಿ ತೊಡಗಿದ್ದಾರೆ ಎಂದು ಅಪಪ್ರಚಾರ ಮಾಡಿದ್ದಾರೆ. ನನ್ನ ಮಗ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡು ತಾಲೂಕಿನ ಜನತೆಗೆ ಕೈಲಾದ ಸೇವೆ ಮಾಡುತ್ತಿದ್ದಾರೆ. ನಿಮ್ಮ ಮಗನ ಹಾಗೆ ನಿಸ್ಸಾಹಯಕನಲ್ಲ.

ಇಂಥ ಅನಗತ್ಯ ಹೇಳಿಕೆಗಳನ್ನು ನೀಡಿ ಕಾರ್ಯಕರ್ತಗಳ ನಡುವೆ ವೈಮನಸ್ಸು ಉಂಟು ಮಾಡಿ ತಾಲೂಕಿನಲ್ಲಿ ಘರ್ಷಣೆ ಮತ್ತು ಅಶಾಂತಿಗೆ ಅವಕಾಶ ನೀಡಬೇಡಿ. ತಾಲೂಕಿನಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶ ನೀಡಿ. ನಿಮಗೆ ನನ್ನ ಸಾಧನೆಗಳ ಮಾಹಿತಿ ಬೇಕಾದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಶಾಸಕ ಕೆ.ಮಹದೇವ್‌ ಸವಾಲು ಹಾಕಿದರು.

ಅಭಿವೃದ್ಧಿ ಸಾಬೀತಾದರೆ ರಾಜೀನಾಮೆ ನೀಡುವೆ: ಕೆ.ವೆಂಕಟೇಶ್‌ ಸೋತು ಒಂದೂವರೆ ವರ್ಷ ಕೂಡ ಕಳೆದಿಲ್ಲ, ಈಗಾಗಲೇ ಹತಾಶೆ ಮನೋಭಾವದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. 30 ವರ್ಷ ರಾಜಕಾರಣ ಮಾಡಿ, 5 ಬಾರಿ ಶಾಸಕರಾಗಿರುವ ಇವರಿಗೆ ಕೇವಲ ಒಂದು ಬಾರಿ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ತಾಲೂಕಿನ ಅಭಿವೃದ್ಧಿಗಾಗಿ 1376 ಕೋಟಿ ರೂ. ತಂದಿದ್ದೇನೆ ಎಂದು ಬೀಗುತ್ತಿರುವ ಇವರು ತಾಲೂಕಿನ ಯಾವುದಾದರೂ ಗ್ರಾಮವನ್ನು ಸಂಪೂರ್ಣ ಅಭಿವೃದ್ದಿ ಪಡಿಸಿದ್ದೆಯಾದರೆ ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಕೆ.ಮಹದೇವ್‌ ಸವಾಲು ಹಾಕಿದರು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.