ಬಹುಮತವಿದ್ದರೂ ಕಾಂಗ್ರೆಸ್‌ಗೆ ಕೈ ತಪ್ಪುವ ಅಧ್ಯಕ್ಷ ಸ್ಥಾನ ಜೆಡಿಎಸ್‌ ವಶಕ್ಕೆ

ಮೀಸಲಾತಿ ಅನ್ವಯ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಯೇ ಇಲ್ಲ ಕಾಂಗ್ರೆಸ್ಸಿಗರಿಗೆ ನಿರಾಸೆ, ಜೆಡಿಎಸ್‌ಗೆ ವರದಾನ

Team Udayavani, Oct 27, 2020, 1:10 PM IST

ಬಹುಮತವಿದ್ದರೂ ಕಾಂಗ್ರೆಸ್‌ಗೆ ಕೈ ತಪ್ಪುವ ಅಧ್ಯಕ್ಷ ಸ್ಥಾನ ಜೆಡಿಎಸ್‌ ವಶಕ್ಕೆ

ಎಚ್‌.ಡಿ.ಕೋಟೆ: ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯನ್ನು ನ.10ರೊಳಗೆ ಪೂರ್ಣಗೊಳಿಸ ಬೇಕೆಂದು ಹೈಕೋರ್ಟ್‌ ಆದೇಶಿಸಿದ್ದು, ಈಗಿರುವ ಮೀಸಲಾತಿ ಪ್ರಕಾರ ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್‌ ಪಕ್ಷವು ಅಧ್ಯಕ್ಷ ಸ್ಥಾನ ಕಳೆದುಕೊಳ್ಳುವುದು ಖಚಿತವಾಗಿದೆ.

23 ಸದಸ್ಯ ಬಲದ ಎಚ್‌.ಡಿ.ಕೋಟೆ ಪುರಸಭೆಯಲ್ಲಿ ಕಾಂಗ್ರೆಸ್‌-11, ಜೆಡಿಎಸ್‌-8, ಬಿಜೆಪಿ-1, ಬಿಎಸ್‌ಪಿ-1 ಮತ್ತು ಪಕ್ಷೇತರರು-2 ಸ್ಥಾನ ಹೊಂದಿದ್ದಾರೆ. ಕಾಂಗ್ರೆಸ್‌ ಶಾಸಕರಆಗಿರುವ ಅನಿಲ್‌ ಚಿಕ್ಕಮಾದು ಅವರ ಒಂದು ಮತ ಇರುವುದರಿಂದ ಈ ಪಕ್ಷವು ಸ್ಪಷ್ಟ ಬಹುಮತ ಹೊಂದಿದೆ.

ಮೀಸಲಾತಿ: ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಕಾಂಗ್ರೆಸ್‌ ಸದಸ್ಯರಲ್ಲಿ ಎಸ್ಟಿ ಮಹಿಳೆ ಯಾರೂ ಇಲ್ಲದ ಕಾರಣ ಅಧ್ಯಕ್ಷ ಸ್ಥಾನ ಕೈತಪ್ಪುತ್ತಿದೆ. ಇನ್ನು 2ನೇ ಬಹುಸಂಖ್ಯಾ ಬಲಹೊಂದಿರುವ ಜೆಡಿಎಸ್‌ ಈ ಬಾರಿ ಪುರಸಭೆ ಅಧ್ಯಕ್ಷ ಸ್ಥಾನ ಅಲಂಕರಿಸುವುದು ಬಹುತೇಕವಾಗಿ ಖಚಿತವಾಗಿದೆ. ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ವಶವಾಗಲಿದೆ.

ಬಹುಸಂಖ್ಯೆ ಪುರಸಭೆ ಸದಸ್ಯರ ಬಲ ಹೊಂದಿದ್ದರೂ ತಾಲೂಕಿನಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಪಕ್ಷವು ಈ ಬಾರಿ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಿದೆ. ಕಳೆದ 2 ವರ್ಷಗಳ ಹಿಂದೆ ಪುರಸಭೆ ಚುನಾವಣೆ ನಡೆದರೂ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನದ ಗೊಂದಲ ನ್ಯಾಯಾಲಯದಲ್ಲಿ ಇದ್ದುದ್ದರಿಂದ 2 ವರ್ಷದ ತನಕ ಸದಸ್ಯರಿಗೆಅಧಿಕಾರ ಇರಲಿಲ್ಲ. ಇತ್ತೀಚೆಗಷ್ಟೇ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಿ, ಚುನಾವಣೆ ನಡೆಸುವಂತೆ ಆದೇಶ ಹೊರಬಿದ್ದಾಗ ಸದಸ್ಯರು ಹರ್ಷಿತರಾದರೂ, ಮೀಸಲಾತಿ ಪ್ರಕಾರ ಅಭ್ಯರ್ಥಿಯೇ ಇಲ್ಲದಿರುವುದು ನಿರಾಸೆ ಉಂಟುಮಾಡಿದೆ.

ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪುರಸಭೆ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಇನ್ನೇನು ಬಹು ಸಂಖ್ಯೆಯಲ್ಲಿರುವ ಕಾಂಗ್ರೆಸ್‌ಗೆ ಪುರಸಭೆ ಅಧ್ಯಕ್ಷ ಸ್ಥಾನ ಖಚಿತ ಎಂಬ ಆಶಾಭಾವನೆಯಲ್ಲಿದ್ದ ಕಾಂಗ್ರೆಸ್ಸಿರಿಗೆ ಇದೀಗ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿರುವುದು ಕೈ ಕೈ ಹಿಸುಕಿಕೊಳ್ಳುವಂತೆ ಮಾಡಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಎಸ್ಟಿ ಮಹಿಳೆ ಅಭ್ಯರ್ಥಿ ಇಲ್ಲದೇ ಇರುವುದು ಜೆಡಿಎಸ್‌ಗೆ ವರದಾನವಾಗಿದ್ದು, ತನ್ನ ಮೀಸಲು ಅಭ್ಯರ್ಥಿಯನ್ನು ಅಧ್ಯಕ್ಷ ಗದ್ದುಗೆಗೆ ಕೂರಿಸಲು ಸನ್ನದ್ಧವಾಗಿದೆ.

ಪುರಸಭೆ ಅಧ್ಯಕ್ಷ ಸ್ಥಾನ ಹೈತಪ್ಪುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸದಸ್ಯರಾದ ಪ್ರೇಮ್‌ಸಾಗರ್‌ ಹಾಗೂ ಸೋಮಶೇಖರ್‌ ಇತ್ತೀಚೆಗೆ ಹೈಕೋರ್ಟ್‌ ಮೊರೆ ಹೋಗಿ, ಮೀಸಲಾತಿ ಬದಲಿರುವಂತೆ ಕೋರಿದ್ದರು. ವಿಚಾರಣೆ ಕೈಗತ್ತಿಕೊಂಡ ಹೈಕೋರ್ಟ್‌, ಈಗಿರುವ ಮೀಸಲಾತಿ ಆಧಾರದ ಮೇಲೆ ನ.10ರೊಳಗೆ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯನ್ನು ಪೂರ್ಣಗೊಳಿಸುವಂತೆ ಆದೇಶ ನೀಡಿರುವುದು ಕಾಂಗ್ರೆಸ್ಸಿಗರಿಗೆ ನಿರಾಸೆಯಾಗಿದೆ.

 

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.