ಪಾಲಿಕೆ ಮೇಯರ್‌ ಸ್ಥಾನಕ್ಕೆ ಭರ್ಜರಿ ಪೈಪೋಟಿ

ನಗರದ ಪ್ರಥಮ ಪ್ರಜೆಯಾಗಲು ಆಕಾಂಕ್ಷಿಗಳ ದಂಡು,ಕಿಂಗ್‌ಮೇಕರ್‌ ಜೆಡಿಎಸ್‌ ಒಲವು ಯಾರತ್ತ?

Team Udayavani, Feb 16, 2021, 2:12 PM IST

ಪಾಲಿಕೆ ಮೇಯರ್‌ ಸ್ಥಾನಕ್ಕೆ ಭರ್ಜರಿ ಪೈಪೋಟಿ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆ ಫೆ.24ಕ್ಕೆ ನಿಗದಿಯಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಅಧಿಕಾರದ ಗದ್ದುಗೆಗೇರಲು ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ಪೈಪೋಟಿ ಆರಂಭಿಸಿವೆ. ಮೈಸೂರಿನ ಪ್ರಥಮ ಪ್ರಜೆಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲ ಕೆರಳಿಸುವಂತೆ ಮಾಡಿವೆ. ಜ.17ರಂದು ಹಾಲಿ ಮೇಯರ್‌ ತಸ್ನಿಂ ಹಾಗೂ ಉಪ ಮೇಯರ್‌ ಶ್ರೀಧರ್‌ ಅವರ ಅಧಿಕಾರದ ಅವಧಿಯು ಅಂತ್ಯವಾಗಿದ್ದು, ಫೆ.24ರಂದು ನೂತನ ಮೇಯರ್‌ ಆಯ್ಕೆ ನಡೆಯಲಿದೆ. ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಡಾ.ಜಿ.ಸಿ.ಪ್ರಕಾಶ್‌ ಅವರು ಚುನಾವಣೆ ದಿನಾಂಕದ ಅಧಿಸೂಚನೆ ಹೊರಡಿಸಿದ್ದು, ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ವಿಶೇಷ ಸಭೆಯಲ್ಲಿ ಹಾಜರಿರುವಂತೆ ಸದಸ್ಯರಿಗೆ ಸಭಾಸೂಚನಾ ಪತ್ರಗಳನ್ನು ಕಳುಹಿಸಿದ್ದಾರೆ.

ಫೆ. 24ರಂದು ಬೆಳಗ್ಗೆ 8ರಿಂದ 10 ಗಂಟೆಯವರೆಗೆ ನಾಮಪತ್ರಗಳ ಸ್ವೀಕಾರ ನಡೆಯಲಿದೆ. ನಂತರ, 11 ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಮೇಯರ್‌ ಸ್ಥಾನವು ಸಾಮಾನ್ಯ ಮಹಿಳೆಗೆ ಹಾಗೂ ಉಪಮಹಾಪೌರ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಈ ಎರಡು ಸ್ಥಾನಗಳಿಗೆ ಚುನಾವಣೆ ನಡೆಯುವ ಜತೆಗೆ ನಾಲ್ಕು ಸ್ಥಾಯಿಗಳ ತಲಾ ಏಳು ಸದಸ್ಯರ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ. ಮೇಯರ್‌ ಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ಹೊಂದಿರುವ ಸದಸ್ಯರಿಗೆ ಸಭಾಸೂಚನಾ ಪತ್ರಗಳನ್ನು ಕಳುಹಿಸಲಾಗಿದೆ.

ಪೈಪೋಟಿ ಜೋರು: ಮೇಯರ್‌ ಸ್ಥಾನಕ್ಕಾಗಿ ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಪಾಲಿಕೆಯಲ್ಲಿ 65 ಸದಸ್ಯರ ಪೈಕಿ 32 ಮಹಿಳಾ ಸದಸ್ಯರಿದ್ದಾರೆ. ಇದರಲ್ಲಿ ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ್‌,ಜೆಡಿಎಸ್‌ನ ತಸ್ನಿಂ ಮೇಯರ್‌ ಆಗಿದ್ದಾರೆ. ಉಳಿದ 30ಮಹಿಳಾ ಸದಸ್ಯರೂ ಮೇಯರ್‌ ಸ್ಥಾನಕ್ಕೆ ಅರ್ಹರು. ಸಾಮಾನ್ಯ ವರ್ಗದ ಮಹಿಳೆಗೆ ಈ ಸ್ಥಾನ ಮೀಸಲಾಗಿರುವುದರಿಂದ ಯಾವುದೇ ಸಮುದಾಯದಸದಸ್ಯೆ ಈ ಸ್ಥಾನಕ್ಕೆ ಏರಬಹುದಾಗಿದೆ. ಹೀಗಾಗಿ ಭಾರಿಪೈಪೋಟಿ ಕಂಡುಬಂದಿದೆ. ಉಪಮೇಯರ್‌ ಸ್ಥಾನ ಕೂಡ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಬಿರುಸಿನ ಸ್ಪರ್ಧೆ ಇದೆ. ಮೇಯರ್‌ ಸ್ಥಾನ ಮಹಿಳೆಯರಿಗೆ ನಿಗದಿಯಾಗಿರುವುದರಿಂದ ಉಪ ಮೇಯರ್‌ ಸ್ಥಾನ ಪುರುಷ ಸದಸ್ಯರಿಗೆ ದೊರೆಯಲಿದೆ. 3 ಪಕ್ಷಗಳಿಗೂ ಸ್ಪಷ್ಟ ಬಹುಮತವಿಲ್ಲ. ಸ್ವತಂತ್ರವಾಗಿ ಅಧಿಕಾರ ಹಿಡಿಯುವಷ್ಟು ಸಂಖ್ಯಾ ಬಲವೂ ಇಲ್ಲ. ಹೀಗಾಗಿ ಮೈತ್ರಿ ಅನಿವಾರ್ಯ ವಾಗಿದ್ದು, ಜೆಡಿಎಸ್‌ ಕಿಂಗ್‌ ಮೇಕರ್‌ ಆಗಿದೆ.

ಪಕ್ಷಗಳ ಬಲಾಬಲ :

65 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ 22, ಕಾಂಗ್ರೆಸ್‌ 19, ಜೆಡಿಎಸ್‌ 18, ಬಿಎಸ್‌ಪಿ 1 ಹಾಗೂ ಐವರು ಪಕ್ಷೇತರರು ಇದ್ದಾರೆ. ಈ ಪೈಕಿ ಪಕ್ಷೇತರ ಸದಸ್ಯರಾಗಿ ಆಯ್ಕೆಗೊಂಡಶಮಿವುಲ್ಲಾ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ. ಪಾಲಿಕೆಗೆಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಸಹ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಸದಸ್ಯಬಲ ಒಟ್ಟು 75 ಇದ್ದು, ಈ ಪೈಕಿ ಬಿಜೆಪಿ 25, ಜೆಡಿಎಸ್‌ 23, ಕಾಂಗ್ರೆಸ್‌ 21, ಬಿಎಸ್‌ಪಿ 1 ಹಾಗೂ ಐವರು ಪಕ್ಷೇತರ ಸದಸ್ಯರು ಇದ್ದಾರೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.