ವೈದ್ಯಕೀಯ ತ್ಯಾಜ್ಯದ ಪರಿಸರ ಸ್ನೇಹಿ ನಿರ್ವಹಣೆ ಅಗತ್ಯ

Team Udayavani, May 24, 2017, 12:45 PM IST

mys1.jpg

ಮೈಸೂರು: ಎಲೆಕ್ಟ್ರಾನಿಕ್ಸ್‌ ಹಾಗೂ ವೈದ್ಯಕೀಯ ತ್ಯಾಜ್ಯಗಳ ವಿಲೇವಾರಿ ಬಹುದೊಡ್ಡ ಸವಾಲಾಗಿದ್ದು, ಇಂತಹ ತ್ಯಾಜ್ಯಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ವಿಶ್ವಸಂಸ್ಥೆಯ ಕೈಗಾರಿಕಾ ಅಭಿವೃದ್ಧಿ ಸಂಘಟನೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸಹಯೋಗದಲ್ಲಿ ನಗರದ ಅಬ್ದುಲ್‌ ನಜೀರ್‌ಸಾಬ್‌ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಭಾರತದಲ್ಲಿ ವೈದ್ಯಕೀಯ ತ್ಯಾಜ್ಯದ ಪರಿಸರ ಸ್ನೇಹಿ ನಿರ್ವಹಣೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವೈದ್ಯಕೀಯ ತ್ಯಾಜ್ಯದ ಸಮರ್ಪಕ ನಿರ್ವಹಣೆಗಾಗಿ ಪೈಲಟ್‌ ಪ್ರಾಜೆಕ್ಟ್ಗಾಗಿ ಗುಜರಾತ್‌, ಮಹಾರಾಷ್ಟ್ರ, ಪಂಜಾಬ್‌, ಒಡಿಶಾ ಹಾಗೂ ಕರ್ನಾಟಕವನ್ನು ಆಯ್ಕೆ ಮಾಡಲಾಗಿದೆ. ರಾಜ್ಯದಿಂದ ಮೈಸೂರನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಮೈಸೂರು ನಗರ ಪ್ರತಿಯೊಂದು ಪ್ರಾಯೋಗಿಕ ಯೋಜನೆಗಳ ಅನುಷ್ಠಾನಕ್ಕೆ ಸೂಕ್ತ ಸ್ಥಳವಾಗಿದೆ. ಈ ಪ್ರಾಯೋಗಿಕ ಯೋಜನೆಗಾಗಿ ನಗರದ ಪ್ರತಿಷ್ಠಿತ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಆಯ್ಕೆಯಾಗಿದೆ.

ಹೀಗಾಗಿ ಈ ಪ್ರಾಜೆಕ್ಟ್ ಮೂಲಕ ಮೈಸೂರು ಜಿಲ್ಲೆ ದೇಶದ ಎಲ್ಲಾ ನಗರಗಳಿಗೂ ಮಾದರಿಯಾಗಬೇಕಾದ ಕಾರಣ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು. ಸಂಯುಕ್ತ ರಾಷ್ಟ್ರಗಳ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ(ಯುಎನ್‌ಐಡಿಒ) ಪ್ರಾದೇಶಿಕ ಸಹ ನಿರ್ವಾಹಕ ಡಾ.ಎಸ್‌.ಪಿ.ದುಹಾ ಮಾತನಾಡಿ, ಆಸ್ಪತ್ರೆಗಳಿಂದ ಉತ್ಪ$ತ್ತಿಯಾಗುವ ತ್ಯಾಜ್ಯದಲ್ಲಿ ಮನುಷ್ಯನ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ವಿಷಕಾರಿ ಅಂಶ ಹೊಂದಿದ್ದು, ಇದರ ನಿರ್ವಹಣೆಯಲ್ಲಿ ದೋಷವಾದರೆ ವಾತಾವರಣ ಕಲುಷಿತವಾಗಲಿದೆ ಎಂದರು.

ಈ ಹಿನ್ನೆಲೆ ಸರ್ಕಾರ ವೈದ್ಯಕೀಯ ತ್ಯಾಜ್ಯ ನಿರ್ವಹಣೆಯ ಯೋಜನೆ ಅನುಷ್ಠಾನಕ್ಕೆ ತರಲು ಮುಂದಾಗಿದ್ದು, ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಶ್ರಮ ಹಾಗೂ ವೆಚ್ಚದಾಯಕವಾಗಿದೆ. ಆಸ್ಪತ್ರೆಗಳ ಜೈವಿಕ ತ್ಯಾಜ್ಯಗಳನ್ನು ನಿಗದಿತ ಪ್ರಮಾಣದ ಉಷ್ಣಾಂಶದಲ್ಲಿ ಸುಟ್ಟು ಬೂದಿಮಾಡಬೇಕು. ಇದಕ್ಕಿಂತಲೂ ಕಡಿಮೆ ಉಷ್ಣಾಂಶದಲ್ಲಿ ಸುಟ್ಟರೆ ಅದರಲ್ಲಿರುವ ಬ್ಯಾಕ್ಟೀರಿಯಾಗಳು ನಾಶ ವಾಗುವುದಿಲ್ಲ.

ಆಸ್ಪತ್ರೆಯ ಸಿಬ್ಬಂದಿ ಯಾವ್ಯಾವ ತ್ಯಾಜ್ಯಗಳನ್ನು ಯಾವ ರೀತಿಯಲ್ಲಿ ಪ್ರತ್ಯೇಕಿಸಿ ನಿರ್ವಹಿಸಬೇಕು. ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಶೇಖರಿಸುವುದು ಹಾಗೂ ಅದರ ವಿಲೇವಾರಿಯವರೆಗೆ ಬರುವ ನಾಲ್ಕು ಹಂತಗಳು, ಈ ಯೋಜನೆಯಲ್ಲಿ ಬರುವ ವಿವಿಧ ಚಟುವಟಿಕೆ, ತರಬೇತಿ ಹಾಗೂ ಆರೋಗ್ಯ ಸಂಸ್ಥೆಯ ಸಾಮರ್ಥ್ಯ ವೃದ್ಧಿಗಾಗಿ ಅಗತ್ಯವಿರುವ ಅಂಶಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಮೈಸೂರು ಮಹಾ ನಗರಪಾಲಿಕೆ ಆಯುಕ್ತ ಜಿ.ಜಗದೀಶ್‌, ಕೆ.ಆರ್‌.ಆಸ್ಪತ್ರೆ ಡೀನ್‌ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜು, ಎಂ.ಎಸ್‌. ರಾಮಯ್ಯ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಪೃಥ್ವೀಶ್‌, ಪೊ›.ಡಾ.ಕೆ.ಲಲಿತಾ, ಯೋಜನೆಯ ಸಹ ನಿರ್ವಾಹಕ ಡಾ.ರಾಜು, ಡಾ. ಪ್ರಕಾಶ್‌ಕುಮಾರ್‌,  ಪ್ರಾದೇಶಿಕ ಅಧಿಕಾರಿ ಡಾ.ಎಸ್‌.ಗೋಪಿನಾಥ್‌, ಹೇಮಂತ್‌ ಹಾಜರಿದ್ದರು.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.