ಪಠ್ಯದಲ್ಲಿ ಭಗವದ್ಗಿತೆ ಸೇರ್ಪಡೆಗೆ ಕ್ರಮ: ಡಿಸಿಎಂ

ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಚಿಂತನೆ ! ಜಪದಕಟ್ಟೆಯಲ್ಲಿ ಉತ್ತರಾಧಿಕಾರಿ ಶಿಷ್ಯ ಸ್ವೀಕಾರ ಮಹೋತ್ಸವ

Team Udayavani, Feb 18, 2021, 3:51 PM IST

Minister CN Aswath narayana

ಭೇರ್ಯ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯದ ಪಠ್ಯಕ್ರಮಗಳಲ್ಲಿ ಭಗವದ್ಗೀತೆ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್‌ ಹೇಳಿದ್ದಾರೆ.

ಕೆ.ಆರ್‌.ನಗರ ತಾಲೂಕಿನ ಶ್ರೀ ಜಪ್ಯೇಶ್ವರ (ಜಪದಕಟ) ಕ್ಷೇತ್ರದಲ್ಲಿ ಕೃಷ್ಣರಾಜನಗರದ ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದಿಂದ ನಡೆದ ಉತ್ತರಾಧಿಕಾರಿ ಶಿಷ್ಯ ಸ್ವೀಕಾರ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಭಗವದ್ಗೀತೆ ಸೇರಿದಂತೆ ನಮ್ಮ ಸಂಸ್ಕೃತಿ, ಪರಂಪರೆ ಬಿಂಬಿಸುವ ಅಂಶಗಳು ಸೇರಿದಂತೆ ಮುಖ್ಯಗುರಿ ಯಾದ ಮೌಲ್ಯಧಾರಿತ ಶಿಕ್ಷಣ ಜಾರಿಗೆ ಅಳವಡಿಕೆ ಮಾಡಲಾಗುವುದು. ನಮ್ಮ ಸಂಸ್ಕೃತಿ, ನಮ್ಮತನವನ್ನು ಬಿಂಬಿಸುವ ಶಿಕ್ಷಣ ಪಡೆಯಬೇಕಿದೆ. ಶಿಕ್ಷಣದಿಂದಲೇ ಪರಿಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದರು.

ಸ್ವಾಯತ್ತತೆ: ರಾಜ್ಯದ ಪ್ರಮುಖ ದೇವಾಲಯ ಗಳಿಗೂ ಸ್ವಾಯತ್ತತೆ ನೀಡುವ ಸಂಬಂಧ ಕಾನೂನು ಸುಧಾರಣೆ ಮಾಡಲು ಚಿಂತಿಸಲಾಗುವುದು. ಎಲ್ಲ ಕಾಲ ಘಟ್ಟದಲ್ಲೂ ಸ್ವಾಯñತೆ ‌¤ ನೀಡುವುದು ಸೂಕ್ತ. ಯಾವ್ಯಾವ ಉದ್ದೇಶಗಳಿಗೆ ಸ್ಥಾಪನೆಯಾಗಿವೆ ಎಂಬ ಆಧಾರದಲ್ಲಿ ದೇವಾಲಯಗಳು, ಮಠಗಳಲ್ಲದೆ ಎಲ್ಲ ಕ್ಷೇತ್ರಗಳಿಗೂ ಸ್ವಾಯತ್ತತೆ ನೀಡಬೇಕಾಗಿರುವುದು ನಮ್ಮ ಕರ್ತವ್ಯ ಎಂದು ಅವರು ತಿಳಿಸಿದರು.

ಸೌಂದರ್ಯ ಲಹರಿ: ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠಾಧೀಶರಾದ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ನನ್ನ ಮತ ಕ್ಷೇತ್ರ ಮಲ್ಲೇಶ್ವರ ಅರಮನೆ ಮೈದಾನದಲ್ಲಿ ಈ ಹಿಂದೆ ಸೌಂದರ್ಯ ಲಹರಿ ಕಾರ್ಯಕ್ರಮ ಆಯೋಜಿಸಿದ್ದರು. ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು ಸಂತಸಪಟ್ಟಿದ್ದರು. ಸೌಂದರ್ಯ ಲಹರಿ ಕಾರ್ಯಕ್ರಮದಲ್ಲಿ ಶಂಕರ ಭಾರತಿ ಸ್ವಾಮೀಜಿ ಅವರು ಆ ಕಾರ್ಯಕ್ರಮದ ಮೂಲಕ ಮನಸ್ಸಿನ ಸೌಂದರ್ಯ ಹೆಚ್ಚಿಸುವ ಮಹತ್ವದ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು.

ಶಂಕರಾಚಾರ್ಯರ ಸಂದೇಶಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ನಮ್ಮ ಜನರಲ್ಲಿ ಜ್ಞಾನ, ತಿಳಿವಳಿಕೆ, ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ಮುಂದಿನ ದಿನದಲ್ಲಿ ಶ್ರೀಮಠದಿಂದ ನಡೆಯುವ ಇಂಥ ಸಮಾಜಮುಖೀ ಕಾರ್ಯಕ್ರಮಗಳಿಗೆ ಸರ್ಕಾರ ಹಾಗೂ ವೈಯಕ್ತಿಕವಾಗಿ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಎಡತೊರೆ ಯೋಗಾನಂದೇಶ್ವರ ಮಠದ ಪೀಠಾಧೀಶರಾದ ಶಂಕರ ಭಾರತಿ ಸ್ವಾಮಿ, ವಿವಿಧ ಮಠಾಧೀಶರು ಭಾಗವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಎ.ಎಸ್‌. ಚೆನ್ನಬಸಪ್ಪ, ತಹಶೀಲ್ದಾರ್‌ ಮಂಜುಳಾ, ಇಒ ರಮೇಶ್‌, ವೃತ್ತ ನಿರೀಕ್ಷಕ ಲವ, ಪಿಎಸ್‌ಐ ಆರತಿ, ಉಪತಹಶೀಲ್ದಾರ್‌ ಮಹೇಶ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.