15ಕ್ಕೂ ಹೆಚ್ಚು ಉದ್ಯಾನವನ ನಿರ್ಮಾಣ

Team Udayavani, May 28, 2019, 3:01 PM IST

mysuru-tdy-1…

ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪೌರಾಯುಕ್ತೆ ವಾಣಿ ಮಾತನಾಡಿದರು.

ಹುಣಸೂರು: ಪಟ್ಟಣ ವ್ಯಾಪ್ತಿಯಲ್ಲಿ 15ಕ್ಕೂ ಹೆಚ್ಚು ಉದ್ಯಾನವನಗಳನ್ನು ನಿರ್ಮಿಸಲು ನಗರಸಭೆ ವಿವಿಧ ಬಡಾವಣೆಗಳಲ್ಲಿ ಸ್ಥಳಗಳನ್ನು ಗುರುತಿಸಿದ್ದು, ಈ ಸಾಲಿನಲ್ಲಿ ಕನಿಷ್ಠ 5 ಉದ್ಯಾನವನಗಳ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ವಾಣಿ.ವಿ.ಆಳ್ವಾ ಹೇಳಿದರು.

2019ನೇ ಸಾಲಿನ ವಿಶ್ವ ಪರಿಸರ ದಿನ (ಜೂ.5) ಆಚರಣೆ ಸಂಬಂಧ ಸರ್ಕಾರೇತರ ಸಂಘ ಸಂಸ್ಥೆಗಳು ಮತ್ತು ನಾಗರಿಕರೊಂದಿಗೆ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಹುಣಸೂರು ನಗರಸಭೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್‌ಗಳ ಅಭಿವೃದ್ಧಿಗೆ ಬೇಕಾದ ಮೂಲಸೌಕರ್ಯಗಳಾದ ವಾಕಿಂಗ್‌ ಪಾಥ್‌, ಕಾಂಪೌಂಡ್‌ಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಆದರೆ ಪಾರ್ಕಿನಲ್ಲಿ ಗಿಡಗಳನ್ನು ನೆಡುವ, ಅದನ್ನು ನಿರ್ವಹಣೆ ಮಾಡುವ ಜವಾಬ್ದಾರಿಯುತ ಕಾರ್ಯ ಆಗಬೇಕಿದೆ ಎಂದರು.

ರೋಟರಿ ಸಂಸ್ಥೆಯ ಶ್ಲಾಘನೀಯ ಕಾರ್ಯ: ಹುಣಸೂರು ರೋಟರಿ ಸಂಸ್ಥೆ 2016ರಿಂದ ಪಟ್ಟಣದ ಮಾರುತಿ ಬಡಾವಣೆಯ ಎರಡು ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಿ ನಿರ್ವಹಿಸಿದೆ. ಈ ಬಾರಿ ಪಾರ್ಕಿನಲ್ಲಿ ಮಕ್ಕಳಿಗಾಗಿ ವಿವಿಧ ರೀತಿಯ ಆಟಿಕೆಗಳನ್ನು ಸ್ಥಾಪಿಸಲು ಸಂಸ್ಥೆ ಮುಂದೆ ಬಂದಿದೆ. ಪಾರ್ಕ್‌ಗಳ ಅಭಿವೃದ್ಧಿ, ಗಿಡಗಳನ್ನು ನೆಟ್ಟು ಪಾಲನೆ ಪೋಷನೆ ನಡೆಸುವ ಕಾರ್ಯ ಕೇವಲ ನಗರಸಭೆಯ ಕರ್ತವ್ಯ ಎಂದು ನಾಗರಿಕರು ಭಾವಿಸಬಾರದು. ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯ. ವಿವಿಧ ಸಂಘ ಸಂಸ್ಥೆಗಳು ಪಾರ್ಕ್‌ ಗಳ ಅಭಿವೃದ್ಧಿಗಾಗಿ ಪ್ರಾಯೋಜಕತ್ವ ಪಡೆದು ನಗರ ಸಭೆಯೊಂದಿಗೆ ಕೈಜೋಡಿಸಬೇಕೆಂದು ಕೋರಿದರು.

ಮಳೆ ಕೊಯ್ಲು ಕಡ್ಡಾಯಗೊಳಿಸಿ: ಸತ್ಯ ಎಂಎಎಸ್‌ ಫೌಂಡೇಶನ್‌ ಅಧ್ಯಕ್ಷ ಸತ್ಯಪ್ಪ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದೆ. ಸ್ವಚ್ಛತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಹುಣಸೂರು ಪಟ್ಟಣ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುವ ಕಟ್ಟಡಗಳಲ್ಲಿ ಮಳೆಕೊಯ್ಲು ಘಟಕ ಸ್ಥಾಪನೆ ಕಡ್ಡಾಯಗೊಳಿಸಿ. ಶಾಲಾ ಕಾಲೇಜುಗಳ ಆವರಣದಲ್ಲಿ ಮಕ್ಕಳ ಹೆಸರಲ್ಲಿ ಮಕ್ಕಳಿಂದಲೇ ಸಸಿ ನೆಡುವ ಕಾರ್ಯ ಕೈಗೊಳ್ಳಿರಿ ಎಂದು ಸಲಹೆ ನೀಡಿ, ñಮ್ಮ ಸಂಸ್ಥೆಯ ವತಿಯಿಂದ ಕೆಎಚ್ಬಿ ಕಾಲನಿ ಮೂರನೇ ಹಂತದ ಬಡಾವಣೆಯ ಪಾರ್ಕ್‌ ಅಭಿವೃದ್ಧಿಗೊಳಿಸಲಾಗುವುದು ಎಂದರು.

ಸೇವ್‌ ಅವರ್‌ ಅರ್ಥ್ ಕ್ಲಬ್‌ ಅಧ್ಯಕ್ಷ ಸಂಜಯ್‌ ಮಾತನಾಡಿ, ಲಕ್ಷ್ಮ್ಮಣತೀರ್ಥ ನದಿಗೆ ಚರಂಡಿನೀರು ಸೇರುತ್ತಿರುವುದನ್ನು ತಡೆಯಲು ಮೆಶ್‌ಗಳನ್ನು ನಿರ್ಮಿಸಿರಿ. ನದಿ ದಂಡೆಯ ಬದಿಯಲ್ಲಿ ಸಸಿಗಳನ್ನು ನೆಟ್ಟಲ್ಲಿ ಉತ್ತಮ ಎಂದರು.

ಪುರಸಭೆ ಮಾಜಿ ಸದಸ್ಯ ಎಚ್.ಎಸ್‌.ವರದರಾಜು ತಾವು ದೇವರಾಜ ಅರಸು ಕಾಲನಿಯ ಪಾರ್ಕ್‌ ಅಭಿವೃದ್ಧಿಪಡಿಸಿಕೊಡುವುದಾಗಿ ಭರವಸೆ ನೀಡಿದರು. ಹೊಟೇಲ್ ಮಾಲೀಕರ ಸಂಘದ ವಿಶ್ವನಾಥ್‌, ಚಿಗುರು ಸಂಪನ್ಮೂಲ ಕೇಂದ್ರದ ಶಂಕರ್‌, ಖಾಲೀದ್‌ ಗುರುಪುರ, ಕಾಫಿವರ್ಕ್ಸ್ನ ನಟರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.