Udayavni Special

ಸಿದ್ದರಾಮಯ್ಯಗೆ ಸೋಲಿನ ಕಹಿ ಈಗ ಅರ್ಥವಾಗಿದೆ


Team Udayavani, Dec 22, 2020, 2:33 PM IST

mysuru-tdy-2

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹತಾಶನಾಗಿ ಸತ್ತ ಕೋಳಿಯಂತಾಗಿದ್ದಾನೆ  ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಲೇವಡಿ ಮಾಡಿದ್ದಾರೆ.

“ಬಿಜೆಪಿ-ಜೆಡಿಎಸ್‌ ಒಳ ಒಪ್ಪಂದದಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದೆ’ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿ ಕ್ರಿಯಿಸಿರುವ ಅವರು, ಸಿದ್ದರಾಮಯ್ಯ ನಿಮಗೆ ಈಗ ಸೋಲಿನ ಕಹಿಅರ್ಥ ಆಯ್ತ. “ಚಾಮುಂಡೇಶ್ವರಿ ಕ್ಷೇತ್ರದಲ್ಲಿ  ಸಿದ್ದರಾಮಯ್ಯ ಸೋಲುತ್ತಾರೆ’ ಎಂದು ನಾನು ನಂಜನಗೂಡು ಉಪ ಚುನಾವಣೆಯಲ್ಲಿ ಸೋತ ಮರು ದಿನವೇ ಹೇಳಿದ್ದೆ ಎಂದರು. ಕಣ್ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಕಾಣಲ್ಲ ಎಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅವರು, ಸತ್ತಕೋಳಿಬೆಂಕಿಗೆಹೆದರುವಂತಾಗಿದೆ ಸಿದ್ದರಾಮಯ್ಯನ ಸದ್ಯದ ಸ್ಥಿತಿ ಎಂದು ಲೇವಡಿ ಮಾಡಿದರು.

ಅಧಿಕಾರದಲ್ಲಿದ್ದಾಗ ತೋರಿದ ದರ್ಪ ದುರಹಂಕಾರವೇ ಸಿದ್ದರಾಮಯ್ಯ ಮತ್ತು ಮಹದೇವಪ್ಪನ ಈ ಪರಿಸ್ಥಿತಿಗೆ ಕಾರಣವಾಗಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ವಿರೋಧಿಸುವವರಿದ್ದಾರೆ. ಈಗಾಗಲೇ ಉಪ ಚುನಾವಣೆಗಳಲ್ಲಿ ಸೋಲು ಕಂಡಿರುವ  ಕಾಂಗ್ರೆಸ್‌ ಪತನದ ಹಾದಿ ಹಿಡಿದಿದೆ ಎಂದರು. ಬಿದ್ದ ಬೆಂಕಿಯಲ್ಲಿಕೈಕಾಯಿಸಿಕೊಳ್ಳುತ್ತಾರೆ: ಜೆಡಿಎಸ್‌ ವಿಲೀನ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದರು, ಈ ಸಂಬಂಧ ದೇವೇಗೌಡರೇ ತೀರ್ಮಾನ ಮಾಡಿದಂತಿದೆ. ದೇವೇಗೌಡರಿಗೆ ನಾನು ವೈಯುಕ್ತಿಕವಾಗಿ ಸಲಹೆ ಕೊಡಲ್ಲ. ಅವರು ಯಾವಾಗ ಏನು ತೀರ್ಮಾನ ಮಾಡುತ್ತಾರೆ ಎಂದು ಯಾರಿಗೂ ಗೊತ್ತಾಗಲ್ಲ. ಬಿದ್ದ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು ದೇವೇಗೌಡರ ಸ್ವಭಾವ. ಜೆಡಿಎಸ್‌ ಜತೆಯ ಹೊಂದಾಣಿಕೆ ವಿಚಾರದಲ್ಲಿ ಹೈಕಮಾಂಡ್‌ದೆ ಅಂತಿಮ ನಿರ್ಧಾರ. ಕೇವಲ ಎರಡು ಮೂರು ಜಿಲ್ಲೆಗೆ ಸೀಮಿತವಾಗಿರುವ ಜೆಡಿಎಸ್‌ಗೆ ಸಿಎಂ ಸ್ಥಾನ ಬಿಟ್ಟುಕೊಡೋಕೆ ಆಗುತ್ತಾ ಎಂದರು.

ಜಿಲ್ಲಾಧಿಕಾರಿ ಶರತ್‌ ವರ್ಗ ತಪ್ಪು ನಿರ್ಧಾರ :

ಜಿಲ್ಲಾಧಿಕಾರಿ ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಶರತ್‌ ಅವರನ್ನು ಒಂದೇ ತಿಂಗಳಲ್ಲಿ ವರ್ಗ ಮಾಡಿದ್ದು, ಮುಖ್ಯಮಂತ್ರಿಗಳ ತಪ್ಪು ನಿರ್ಧಾರವಾಗಿದೆ. ರೋಹಿಣಿ ಸಿಂಧೂರಿಗೆ ಜಾಗ ತೋರಿಸಬೇಕೆಂದಿದ್ದರೆ ಬೇರೆ ಕಡೆ ಅವಕಾಶ ಕೊಡಬೇಕಿತ್ತು. ಅವಳು ದುರಹಂಕಾರಿ, ಜನಪ್ರತಿನಿಧಿಗಳಿಗೆ ಗೌರವ ಕೊಡಲ್ಲ ಅನ್ನೋ ಕಾರಣಕ್ಕೆ ನಾನ್‌ ಎಕ್ಸಿಕ್ಯೂಟಿವ್‌ ಪೋಸ್ಟ್‌ಗೆ ಹಾಕಿದ್ದು. ಈಗ ಅವಳನ್ನೇ ಮೈಸೂರು ಜಿಲ್ಲಾಧಿಕಾರಿಯಾಗಿ  ನೇಮಿಸಿದ್ದುನನಗೆಸುತಾರಾಂಇಷ್ಟಆಗಲಿಲ್ಲ ಎಂದು ಕಿಡಿಕಾರಿದರು.

ಶರತ್‌ ಜಿಲ್ಲಾಧಿಕಾರಿಯಾಗಿ ಕಲಬುರಗಿಯಲ್ಲಿ ಒಳ್ಳೆಕೆಲಸ ಮಾಡಿದ್ದಾರೆ. ಅವರನ್ನು ಇಲ್ಲಿಗೆ ವರ್ಗಾವಣೆ ಮಾಡಿ 29 ದಿನದಲ್ಲಿ ಬೇರೆ ಕಡೆ ಹಾಕಿದ್ದು ಎಷ್ಟು ಸರಿ? ಎಂದು ಪ್ರಶ್ನಿಸಿದ ಅವರು, ಇಂತಹ ವಿಚಾರದಲ್ಲಿ ಸಿಎಂ ವಿವೇಚನೆಯಿಂದವರ್ತಿಸಬೇಕು.ಚಾಮರಾಜನಗರ ಎಸ್ಪಿಯನ್ನು ವರ್ಗಾವಣೆ ಮಾಡಿದಾಗಲೇ ನಾನು ಎಚ್ಚರಿಕೆ ನೀಡಿದ್ದೆ. ಡಿಜಿ ಪ್ರವೀಣ್‌ ಸೂದ್‌ ಜೊತೆಗೂ ಮಾತನಾಡಿದ್ದೆ ಎಂದರು.

ರಾಜ್ಯದಲ್ಲಿ ಜೆಡಿಎಸ್‌ಗೆ ಹತಾಶ ಸ್ಥಿತಿ ಇದೆ. ಬಿಜೆಪಿ ಜೊತೆ ಬರುವುದು ಜೆಡಿಎಸ್‌ಗೆ ಅನಿವಾರ್ಯ ಇದೆ. ಜೆಡಿಎಸ್‌ ತನ್ನ ನೆಲೆಗಳಲ್ಲೇ ಸೋಲುಕಂಡಿದೆ. ತುಮಕೂರಿನಲ್ಲಿ ಸ್ವತಃ ದೇವೇಗೌಡರೆ ಸೋತರು. ರಾಜಕೀಯ ಭವಿಷ್ಯಕ್ಕಾಗಿ ಅವರು ಬಿಜೆಪಿ ಜೊತೆ ಹೊಂದಾಣಿಕೆ ಅನಿವಾರ್ಯ. -ವಿ.ಶ್ರೀನಿವಾಸ್‌ ಪ್ರಸಾದ್‌, ಸಂಸದ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸಾವು

ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಅಕ್ರಮ ಗಣಿಗಾರಿಕೆ ಆರಂಭವಾಗಿದ್ದೇ ಸಿದ್ದರಾಮಯ್ಯ ಕಾಲದಲ್ಲಿ : ಕಟೀಲ್

ಅಕ್ರಮ ಗಣಿಗಾರಿಕೆ ಆರಂಭವಾಗಿದ್ದೇ ಸಿದ್ದರಾಮಯ್ಯ ಕಾಲದಲ್ಲಿ : ಕಟೀಲ್

ಇತರ ಆಟಗಾರರ ಸಹಕಾರದಿಂದ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಯಿತು: ನಟರಾಜನ್

ಇತರ ಆಟಗಾರರ ಸಹಕಾರದಿಂದ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಯಿತು: ನಟರಾಜನ್

Karjol

ಹುಣಸೋಡು ಸ್ಪೋಟ ಪ್ರಕರಣ ತನಿಖೆಯನ್ನು ರಾಜ್ಯ ಪೊಲೀಸರು ಮಾಡುತ್ತಾರೆ: ಡಿಸಿಎಂ ಕಾರಜೋಳ

ಬಸ್- ಬೈಕ್ ನಡುವೆ ರಸ್ತೆ ಅಪಘಾತ: ಆರ್ ಎಸ್ಎಸ್ ಮುಖಂಡ ಸಾವು

ಬಸ್- ಬೈಕ್ ನಡುವೆ ರಸ್ತೆ ಅಪಘಾತ: ಆರ್ ಎಸ್ಎಸ್ ಮುಖಂಡ ಸಾವು

ವಳಗೆರೆಹಳ್ಳಿಯಲ್ಲಿ ಮೂಲ ಸೌಲಭ್ಯ ಮರೀಚಿಕೆ : ಸರ್ಕಾರಿ ಸೌಲಭ್ಯ ಸಮರ್ಪಕ ಬಳಕೆಗೆ ವಿಫ‌ಲ

ವಳಗೆರೆಹಳ್ಳಿಯಲ್ಲಿ ಮೂಲ ಸೌಲಭ್ಯ ಮರೀಚಿಕೆ : ಸರ್ಕಾರಿ ಸೌಲಭ್ಯ ಸಮರ್ಪಕ ಬಳಕೆಗೆ ವಿಫ‌ಲ

r-ashok

ಹುಣಸೋಡು ಬ್ಲಾಸ್ಟ್ ಪ್ರಕರಣದ ತನಿಖೆ ಸಿಬಿಐಗೆ ವಹಿಸಲ್ಲ: ಆರ್.ಅಶೋಕ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್‌

ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್‌

ಶಿಕ್ಷಕರು, ಎಸ್‌ಡಿಎಂಸಿಗೂ ತಿಳಿಸದೇ ಶಾಲೆಯಲ್ಲಿ 10 ಬೃಹತ್‌ ಮರಗಳ ಹನನ

ಶಿಕ್ಷಕರು, ಎಸ್‌ಡಿಎಂಸಿಗೂ ತಿಳಿಸದೇ ಶಾಲೆಯಲ್ಲಿ 10 ಬೃಹತ್‌ ಮರಗಳ ಹನನ

ಕೋವಿಡ್ ಹಿನ್ನೆಲೆ: ಬಜೆಟ್‌ ಗಾತ್ರ ತಗ್ಗಿಸುವುದು ಅನಿವಾರ್ಯ: ಸಿಎಂ

ಕೋವಿಡ್ ಹಿನ್ನೆಲೆ: ಬಜೆಟ್‌ ಗಾತ್ರ ತಗ್ಗಿಸುವುದು ಅನಿವಾರ್ಯ: ಸಿಎಂ

madhuswamy talk

ಖಾತೆ ಬದಲಾಯಿಸಿದ್ದು ಬೇಸರ ತಂದಿದೆ

13 Lakhs of Purified Water  Unit

ಭವನ ಬೀಳಿಸಲು ಹೋಗಿ ನೀರಿನ ಘಟಕ ಕೆಡವಿದ್ರು!

MUST WATCH

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

udayavani youtube

ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ

udayavani youtube

ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,

ಹೊಸ ಸೇರ್ಪಡೆ

Chikkamagaluru

ಮಾದರಿ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿ: ವಾರಿಜಾ

Chikkamagalur

ರೈತರ ಹೋರಾಟ ಹತ್ತಿಕ್ಕುವ ತಂತ್ರ ಕೈಬಿಡಿ

ಗರ್ಭಧರಿಸಿದ್ದ ಹಸುವಿನ ಜೀವ ಉಳಿಸಿದ ವೈದ್ಯರಿಗೆ ಗ್ರಾಮಸ್ಥರಿಂದ ಮೆಚ್ಚುಗೆ

ಗರ್ಭಧರಿಸಿದ್ದ ಹಸುವಿನ ಜೀವ ಉಳಿಸಿದ ವೈದ್ಯರಿಗೆ ಗ್ರಾಮಸ್ಥರಿಂದ ಮೆಚ್ಚುಗೆ

Ballary

ಸಿಎಂ ತಮ್ಮ ಮಗನ ಪೊಲೀಸ್‌ ಭದ್ರತೆ ಹೆಚ್ಚಿಸಲಿ

Sports are helpful for physical and mental fitness

ದೈಹಿಕ-ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.