ಮೈಸೂರು: 151 ಮಂದಿಗೆ ಸೋಂಕು

Team Udayavani, Jul 14, 2020, 11:26 AM IST

ಮೈಸೂರು: 151 ಮಂದಿಗೆ ಸೋಂಕು

ಮೈಸೂರು: ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ ಸೋಂಕಿಗೆ 6 ಮಂದಿ ಬಲಿಯಾಗಿದ್ದರೆ, 151 ಮಂದಿಗೆ ಸೋಂಕು ತಗುಲುವ ಮೂಲಕ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ರೌದ್ರಾವತಾರ ತಾಳಿದ್ದು, ಕಳೆದೊಂದು ವಾರದಲ್ಲಿ 500ಕ್ಕೂ ಹೆಚ್ಚು ಹೊಸ ಪ್ರಕರಣ ದಾಖಲಾದರೆ, 31 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ದಿನೇದಿನೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಇಡೀ ದೇಶದಲ್ಲಿ ಸಾವಿನ ಸರಾಸರಿ ಮಟ್ಟ ಮೈಸೂರಿನಲ್ಲೆ ಹೆಚ್ಚಾಗಿದೆ. ಅಲ್ಲದೆ ಕೋವಿಡ್  ನಿಯಂತ್ರಣಕ್ಕೆ ಜಿಲ್ಲಾಡಳಿತ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕಡಿವಾಣ ಹಾಕಲು ಸಾಧ್ಯವಾಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ.

6 ಮಂದಿ ಸಾವು: ಸೋಮವಾರ ಒಂದೇ ದಿನ ಸೋಂಕಿಗೆ 6 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಸೋಮವಾರ 80, 70, 68, 76, 51 ಹಾಗೂ 52 ವರ್ಷದ ಪುರುಷರು ಜ್ವರ, ಕಫ‌, ಉಸಿರಾಟದ (ಎಸ್‌ಎಆರ್‌ಐ-ಸಾರಿ) ಸಮಸ್ಯೆಯಿಂದಾಗಿ ಮೃತಪಟ್ಟಿದ್ದಾರೆ. ಈ 6 ಮಂದಿ ಸಾವಿನೊಂದಿಗೆ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 37ಕ್ಕೆ ಹೆಚ್ಚಳವಾಗಿದೆ. ಮೃತರೆಲ್ಲರ ಅಂತ್ಯ ಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿ ಹಾಗೂ ನಿಯಮಗಳಂತೆ ಜಿಲ್ಲಾಡಳಿತವೇ ನೆರವೇರಿಸಿದೆ.

151 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಸೋಂಕು ಕಾಣಿಸಿಕೊಂಡ ಆರಂಭದ ದಿನಗಳಲ್ಲಿ ಒಂದಂಕಿ, ಬಳಿಕ ಎರಡಂಕಿಯಲ್ಲಿ ಸೋಂಕು ಪತ್ತೆಯಾಗುತ್ತಿತ್ತು. ಆ ಸಮಯದಲ್ಲಿ 22 ಪ್ರಕರಗಣಗಳೇ ಅಧಿಕವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿದಿನವೂ ಅರ್ಧಶಕತ ದಾಟುತ್ತಲೇ ಇದ್ದು, ಇದುವರೆಗೆ ಒಂದೇ ದಿನ 83 ಪಕರಣದಾಖಲಾಗಿದ್ದೇ ಅಧಿಕವಾಗಿತ್ತು. ಆದರೆ ಸೋಮವಾರ ದಾಖಲೆ ಬರೆದಿದ್ದು, ಒಂದೇ ದಿನ 151 ಮಂದಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 966ಕ್ಕೆ ಏರಿಕೆಯಾಗಿದ್ದು, ಇನ್ನೊಂದು ದಿನದಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಲಿದೆ. ಇದರ ಜೊತೆಗೆ ಸೋಮವಾರ 54 ಮಂದಿ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾ ಗಿದ್ದು, ಗುಣಮುಖವಾದವರ ಸಂಖ್ಯೆ 482ಕ್ಕೆ ಏರಿಕೆಯಾಗಿದೆ. ಸದ್ಯ 447 ಸಕ್ರೀಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರದ ಸೋಂಕಿನ ಪ್ರಕರಣಗಳಲ್ಲಿ 57 ಐಎಲ್‌ಐ, 16 ಎಸ್‌ಎಆರ್‌ಐ(ಸಾರಿ), 4 ಪ್ರಯಾಣದ ಹಿನ್ನೆಲೆ, 35 ಸೋಂಕಿತರ ಸಂಪರ್ಕದಿಂದ ಬಂದಿದ್ದು, 39 ಮಂದಿಯ ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.