ನಾಳೆ ನಾಡಹಬ್ಬದ ಜಂಬೂ ಸವಾರಿ

ಸಂಜೆ 5.7ರಿಂದ 5.18ರೊಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ದೇವಿಗೆ ಪುಷ್ಪಾರ್ಚನೆ

Team Udayavani, Oct 4, 2022, 3:20 PM IST

13

ಮೈಸೂರು: ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಸಕಲ ರೀತಿಯಲ್ಲೂ ವಿಜಯದಶಮಿಗೆ ಸಜ್ಜಾಗಿದೆ.

ಕೊರೊನಾ ಸೋಂಕು ಹಿನ್ನೆಲೆ ಕಳೆದ ಎರಡು ವರ್ಷಗಳ ಕಾಲ ಅರಮನೆಗಷ್ಟೇ ಸೀಮಿತವಾಗಿದ್ದ ನಾಡಹಬ್ಬ ಮೈಸೂರು ದಸರಾ, ಈ ಬಾರಿ ವಿಜೃಂಭಣೆಯಿಂದ ನಡೆಯುತ್ತಿದೆ. ಚಾಮುಂಡೇಶ್ವರಿಯ ಅಗ್ರಪೂಜೆಯೊಡನೆ ಆರಂಭವಾಗಿದ್ದ ದಶ ದಿನಗಳ ದಸರಾ ಉತ್ಸವಕ್ಕೆ ಜಂಬೂಸವಾರಿ ಮತ್ತು ಪಂಜಿನ ಕವಾಯತಿನೊಂದಿಗೆ ತೆರೆ ಬೀಳಲಿದೆ. ಜಂಬೂ ಸವಾರಿ ವೀಕ್ಷಿಸಲು ದೇಶ-ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುವುದರಿಂದ ಅರಮನೆ ಆವರಣ ಸೇರಿದಂತೆ ಜಂಬೂ ಸವಾರಿ ಸಾಗುವ ರಾಜಮಾರ್ಗದಲ್ಲಿ ಆಸನದ ವ್ಯವಸ್ಥೆ ಸೇರಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ವಿಜಯ ದಶಮಿ ಮೆರವಣಿಗೆ:

ಬುಧವಾರ ಮಧ್ಯಾಹ್ನ 2.36ರಿಂದ 2.50ರ ಒಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿಗಳು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವರು. ಬಳಿಕ ಗಜಪಡೆಯ ಮಾಜಿ ಕ್ಯಾಪ್ಟನ್‌ ಅರ್ಜುನ ನಿಶಾನೆ ಆನೆಯಾಗಿ ದಸರಾ ಮೆರವಣಿಗೆಯನ್ನು ಮುನ್ನಡೆಸಲಿದ್ದಾನೆ. ನಂತರ ಸಂಜೆ 5.7ರಿಂದ 5.18ರ ಒಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ವಿಜಯದಶಮಿ (ಜಂಬೂಸವಾರಿ)ಮೆರವಣಿಗೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಸೇರಿ ಎಂಟು ಮಂದಿ ಗಣ್ಯರು ಚಿನ್ನದಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಈ ಬಾರಿ ಜಂಬೂಸವಾರಿ ತಡವಾಗಿ ಆರಂಭವಾಗುವುದರಿಂದ ಬನ್ನಿಮಂಟಪ ತಲುಪುವುದು ತಡವಾಗಲಿದೆ.

ಅಂಬಾರಿ ಹೊರಲಿದ್ದಾನೆ ಅಭಿಮನ್ಯು: 2019ರ ಬಳಿಕ ನಡೆದ ದಸರಾ ಉತ್ಸವಕ್ಕೆ ಕೊರೊನಾ ಕರಿಛಾಯೆ ಆವರಿಸಿದ್ದರಿಂದ ಅರಮನೆ ಆವರಣಕ್ಕೆ ದಸರೆ ಕಾರ್ಯಕ್ರಮ ಮತ್ತು ಜಂಬೂ ಸವಾರಿ ಸೀಮಿತವಾಗಿತ್ತು. ಜತೆಗೆ ಅರ್ಜುನ 2019ರಲ್ಲಿ ಅಂಬಾರಿ ಹೊರುವ ಆನೆಯಿಂದ ನಿವೃತ್ತಿಯಾಗಿದ್ದರಿಂದ ಕೂಬಿಂಗ್‌ ಸ್ಪೆಷಲಿಸ್ಟ್‌ ಎಂದೇ ಖ್ಯಾತಿಗಳಿಸಿದ್ದ ಅಭಿಮನ್ಯು 2020-21ರಲ್ಲಿ ಅರಮನೆ ಆವರಣದಲ್ಲಷ್ಟೇ ಅಂಬಾರಿ ಹೊತ್ತಿದ್ದ. ವಿಶೇಷ ಎಂದರೆ ಈ ಬಾರಿ ಅರಮನೆಯಿಂದ ಬನ್ನಿಮಂಟಪದ ಮೈದಾನದವರೆಗೆ ಮೆರವಣಿಗೆ ಸಾಗುತ್ತಿರುವುದರಿಂದ 750 ಕೆ.ಜಿ. ತೂಕದ ಅಂಬಾರಿ ಹಾಗೂ ಗಾದಿ ಮತ್ತು ನಮಾª 200 ಕೆ.ಜಿ. ಸೇರಿ ಒಟ್ಟು 950 ಕೆ.ಜಿ. ಭಾರ ಹೊತ್ತು ಸಾಗಲಿದ್ದಾನೆ. ಅಭಿಮನ್ಯು ಜತೆಗೆ 13 ಆನೆಗಳು, ಅಶ್ವರೋಹಿಪಡೆಗಳು, ಆನೆಗಾಡಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಇದರ ಜತೆಗೆ ಮೆರವಣಿಗೆಯಲ್ಲಿ ರಾಜ್ಯದ 31 ಜಿಪಂ, ರಾಜ್ಯಮಟ್ಟದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು, ಸ್ತಬ್ಧಚಿತ್ರ ಉಪಸಮಿತಿ ಸೇರಿ 43 ಸ್ತಬ್ಧಚಿತ್ರಗಳು ಹಾಗೂ 100ಕ್ಕೂ ಅಧಿಕ ಜಾನಪದ ತಂಡಗಳು ಭಾಗವಹಿಸಲಿವೆ.

ವಿಶ್ವವಿಖ್ಯಾತ ಜಂಬೂ ಸವಾರಿ ವೀಕ್ಷಣೆಗೆ ಅರಮನೆ ಆವರಣದಲ್ಲಿ 20 ಸಾವಿರ ಮಂದಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಪೆಂಡಾಲ್‌ ಹಾಕಿ ಆಸನದ ವ್ಯವಸ್ಥೆ ಮಾಡಲಾಗಿದೆ. ಗೋಲ್ಡ್‌ ಕಾರ್ಡ್‌, ವಿವಿಐಪಿ, ವಿಐಪಿ ಪಾಸ್‌ವುಳ್ಳವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಅಂತಿಮ ತಾಲೀಮು: ಜಂಬೂ ಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿ 55 ದಿನದಿಂದ ವಿವಿಧ ಹಂತದ ತಾಲೀಮು ನಡೆಸಿದ್ದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಸೋಮವಾರ ಅಂತಿಮ ಹಂತದ ತಾಲೀಮು ನಡೆಸಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂತ್ರಿಗೂ ಅವಕಾಶ

ಅರಮನೆ ಅಂಗಳದಲ್ಲಿ ಅಂಬಾರಿ ಆನೆಯ ಮೇಲಿನ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ವೇಳೆ ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ಜಿಲ್ಲಾ ಉಸ್ತುವಾರಿ ಸಚಿವರು, ಮೇಯರ್‌, ಜಿಲ್ಲಾಧಿಕಾರಿ, ನಗರ ಪೊಲೀಸ್‌ ಆಯುಕ್ತರು ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ವೇದಿಕೆ ಏರಲು ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಇದೇ ಮೊದಲ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೂ ಅವಕಾಶ ಕಲ್ಪಿಸಲಾಗಿದ್ದು, ಅವರೂ ಅಂಬಾರಿಯಲ್ಲಿ ಆಸೀನಳಾದ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಪಂಜಿನ ಕವಾಯತಿಗೆ ಸಕಲ ಸಿದ್ಧತೆ

ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಚಾಮುಂಡೇಶ್ವರಿಗೆ ಅಗ್ರ ಪೂಜೆ ಹಾಗೂ ಪುಷ್ಪಾರ್ಚನೆ ಮೂಲಕ ಆರಂಭವಾಗಿದ್ದ ನವರಾತ್ರಿ ಉತ್ಸವ ಜಂಬೂಸವಾರಿ ಹಾಗೂ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತಿನ ಮೂಲಕ ದಸರೆಗೆ ತೆರೆ ಬೀಳಲಿದೆ.

ವಿಜಯ ದಶಮಿಯಂದು ರಾತ್ರಿ ನಡೆಯುವ ಪಂಜಿನ ಪವಾಯತಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅ.5ರಂದು ರಾತ್ರಿ 7.30ರಿಂದ ಪಂಜಿನ ಕವಾಯತು(ಟಾರ್ಚ್‌ಲೈಟ್‌ ಪೆರೇಡ್‌) ಆರಂಭವಾಗಲಿದ್ದು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ನಾಡಗೀತೆ ಬಳಿಕ ಎರಡು ಗಂಟೆ ಪೊಲೀಸ್‌ ಸಿಬ್ಬಂದಿ ಸಾಹಸಮಯ ಪ್ರದರ್ಶನ ನೀಡಲಿದ್ದು, ಮೈನವಿರೇಳಿಸುವ ಬೈಕ್‌, ಅಶ್ವಾರೋಹಿ ಪಡೆಗಳ ಸಾಹಸ ಪ್ರದರ್ಶನ ಮಾಡಲಿದ್ದಾರೆ. ಕೊನೆಗೆ ಪಂಜಿನ ಕವಾಯತಿನ ಮೂಲಕ ಹತ್ತು ದಿನಗಳ ನವರಾತ್ರಿ ಉತ್ಸವಕ್ಕೆ ತೆರೆ ಬೀಳಲಿದೆ.

„ಸತೀಶ್‌ ದೇಪುರ

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಮಹೋತ್ಸವ: ಅಂತಿಮ ಹಂತದ ಫಿರಂಗಿ ತಾಲೀಮು ಯಶಸ್ವಿ

ದಸರಾ ಮಹೋತ್ಸವ: ಅಂತಿಮ ಹಂತದ ಫಿರಂಗಿ ತಾಲೀಮು ಯಶಸ್ವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.